ಕೆಪಿಎಸ್ ಸಿಯಿಂದ ಎಫ್ ಡಿಎ, ಎಸ್ ಡಿಎ ಹುದ್ದೆಗಾಗಿ ಅರ್ಜಿ
ಬೆಂಗಳೂರು, ಸೆಪ್ಟೆಂಬರ್ 1: ವಿವಿಧ ಇಲಾಖೆಗಳಲ್ಲಿ ಇರುವ ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ದರ್ಜೆ ಸಹಾಯಕರು ಒಟ್ಟು ಹುದ್ದೆ 507
ದ್ವಿತೀಯ ದರ್ಜೆ ಸಹಾಯಕರು ಒಟ್ಟು ಹುದ್ದೆ 551
ಅರ್ಜಿ ಸಲ್ಲಿಸಲು ಆರಂಭ ದಿನಾಂಕ ಸೆಪ್ಟೆಂಬರ್ 1, 2017
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಅಕ್ಟೋಬರ್ 7, 2017
ಪರೀಕ್ಷೆ ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ ಅಕ್ಟೋಬರ್ 9, 2017

ಪರೀಕ್ಷಾ ಶುಲ್ಕದ ವಿವರ
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರು. 300
ಪ್ರವರ್ಗ- 2(ಎ), 2(ಬಿ), 3(ಎ), 3(ಬಿ) ರು.150
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ (ವಿನಾಯ್ತಿ)
ಶೈಕ್ಷಣಿಕ ವಿದ್ಯಾರ್ಹತೆ
ಪ್ರಥಮ ದರ್ಜೆ ಸಹಾಯಕರು- ಕಾನೂನು ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು
ದ್ವಿತೀಯ ದರ್ಜೆ ಸಹಾಯಕರು- ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸುವ ಪದವಿಪೂರ್ವ ಪರೀಕ್ಷೆ ಅಥವಾ ಐಟಿಐ ಮತ್ತು ಇತರೆ ಮೂರು ವರ್ಷದ ಡಿಪ್ಲೊಮಾ ಪರೀಕ್ಷೆ ತೇರ್ಗಡೆಯಾಗಿರಬೇಕು.
ವಯೋಮಿತಿ
ಸಾಮಾನ್ಯ ವರ್ಗ: 35 ವರ್ಷ
ಪ್ರವರ್ಗ- 2(ಎ), 2(ಬಿ), 3(ಎ), 3(ಬಿ): 38 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1: 40 ವರ್ಷ
ಅಧಿಸೂಚನೆಯ ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.












Click it and Unblock the Notifications