KPSC PDO Recruitment 2024: ಬರೋಬ್ಬರಿ 247 ಪಿಡಿಓ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಹಾಕಿ
ಬೆಂಗಳೂರು, ಏಪ್ರಿಲ್ 18: ಕರ್ನಾಟಕ ರಾಜ್ಯ ಸರ್ಕಾರದ 'ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ' ವ್ಯಾಪ್ತಿಯಲ್ಲಿ ಖಾಲಿ ಇರುವ ನೂರಾರು ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಹುದ್ದೆ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು.
'ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ' ವ್ಯಾಪ್ತಿಯಲ್ಲಿ ಬರೋಬ್ಬರಿ 247 ಪಿಡಿಓ (Panchayat Development Officer) ಖಾಲಿ ಹುದ್ದೆಗಳಿವೆ. ಇವುಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮೇ 15 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಇದಕ್ಕೂ ಮೊದಲು ಇಲ್ಲಿ ನೀಡಲಾಗಿರುವ ವಿದ್ಯಾರ್ಹತೆ, ವಯೋಮಿತಿ, ಶುಲ್ಕ, ಇನ್ನಿತರ ನೇಮಕಾತಿ ಮಾಹಿತಿ ಪೂರ್ಣ ತಿಳಿದುಕೊಂಡು ಅರ್ಜಿ ಸಲ್ಲಿಸಬೇಕು ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.

ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆ
ಹುದ್ದೆ ಹೆಸರು: ಪಿಡಿಓ (PDO)
ಒಟ್ಟು ಹುದ್ದೆ: 247
ವಿದ್ಯಾರ್ಹತೆ: ದ್ವಿತೀಯ ಪಿಯುಸಿ
ಮಾಸಿಕ ವೇತನ: 37,900- 70,850 ರೂಪಾಯಿ
ಪೋಸ್ಟಿಂಗ್: ಕರ್ನಾಟಕ
ಬೇಕಾಗುವ ದಾಖಲೆಗಳು
ಅರ್ಜಿ ಸಲ್ಲಿಸಲಿರುವ ಆಸಕ್ತ ಅಭ್ಯರ್ಥಿಗಳು ಮೇ 15ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು ಪಟ್ಟಿ ಇಲ್ಲಿದೆ.
1. ಆಧಾರ್ ಕಾರ್ಡ್
2. ಭಾವಚಿತ್ರ
3. ಸಹಿ
4. SSLC ಅಂಕಪಟ್ಟಿ
5. ಪಿಯುಸಿ ಅಂಕಪಟ್ಟಿ
6. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
7. 371 (J) ಪ್ರಮಾಣ ಪತ್ರ
8. ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ
9. ಕನ್ನಡ ಮಾಧ್ಯಮ ಪ್ರಮಾಣ ಪತ್ರ
10. ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ
ವಿದ್ಯಾರ್ಹತೆ ಏನಿರಬೇಕು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು ಎಂದು ಕೆಪಿಎಸ್‌ಸಿ ಅಧಿಸೂಚನೆ ತಿಳಿಸಿದೆ.

ವಯೋಮಿತಿ ವಿವರ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯಸ್ಸಿನ ಮಿತಿ ನೋಡುವುದಾದರೆ, ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ, 18 ರಿಂದ 38 ವರ್ಷ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿ ಮತ್ತು ಎಸ್‌ಸಿ, ಎಸ್‌ಟಿ ಪ್ರವರ್ಗ 1 ಅಭ್ಯರ್ಥಿಗಳಿಗೆ 18-40 ವಯಸ್ಸಾಗಿರಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಶುಲ್ಕ ಮಾಹಿತಿ
ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600 ರೂಪಾಯಿ ನಿಗದಿಯಾದರೆ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 300 ರೂಪಾಯಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ, ಎಸ್‌ಸಿ, ಎಸ್‌ಟಿ ಪ್ರವರ್ಗ 1 ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ ಎಂದು ಆಯೋಗವು ಮಾಹಿತಿ ನೀಡಿದೆ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಅಭ್ಯರ್ಥಿಗಳು ಮೇಲೆ ತಿಳಿಸಲಾದ ಸೂಕ್ತ ದಾಖಲಾತಿಗಳ ಸಹಿತ ಇಲ್ಲಿ ನೀಡಲಾಗಿರುವ ಅಧಿಕೃತ ವೆಬ್‌ಸೈಟ್ ಲಿಂಕ್ https://kpsc.kar.nic.in/ ಮೂಲಕ ಆನ್‌ಲೈನ್ ನಲ್ಲಿ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: 15 ಏಪ್ರಿಲ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15 ಮೇ 2024
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications