ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್ ಡೌನ್; ಹಲವು ಪರೀಕ್ಷೆಗಳನ್ನು ಮುಂದೂಡಿದ ಕೆಪಿಎಸ್‌ಸಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 26 : ಕರ್ನಾಟಕ ಲೋಕಸೇವಾ ಆಯೋಗ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಿತ್ತು. ಮೇ ಮತ್ತು ಜೂನ್ ತಿಂಗಳಿನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆಗಳು ನಡೆಯಬೇಕಿತ್ತು.

ಕೆಪಿಎಸ್‌ಸಿ ಹೊಸ ಅಧಿಸೂಚನೆಯನ್ನು ಪ್ರಕಟಿಸಿದ್ದು ಮೇ ಮತ್ತು ಜೂನ್‌ನಲ್ಲಿ ನಡೆಯಬೇಕಿದ್ದ ವಿವಿಧ ಪರೀಕ್ಷೆಗಳನ್ನು ಮೂಂದೂಡಿ ಆದೇಶ ಹೊರಡಿಸಿದೆ. ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.

ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ; ಮೇ 15ರೊಳಗೆ ಅರ್ಜಿ ಹಾಕಿ ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ; ಮೇ 15ರೊಳಗೆ ಅರ್ಜಿ ಹಾಕಿ

2020ರ ಮೇ ಮತ್ತು ಜೂನ್ ತಿಂಗಳಿನಲ್ಲಿ ನಡೆಯಬೇಕಿದ್ದ ವಿವಿಧ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಲಾಕ್ ಡೌನ್ ಅವಧಿ ಮುಗಿದ ಬಳಿಕ ಹೊಸ ದಿನಾಂಕಗಳನ್ನು ಘೋಷಣೆ ಮಾಡಲಾಗುತ್ತದೆ.

ನೈಋತ್ಯ ರೈಲ್ವೆ ನೇಮಕಾತಿ, 617 ಹುದ್ದೆಗಳಿಗೆ ಅರ್ಜಿ ಆಹ್ವಾನ ನೈಋತ್ಯ ರೈಲ್ವೆ ನೇಮಕಾತಿ, 617 ಹುದ್ದೆಗಳಿಗೆ ಅರ್ಜಿ ಆಹ್ವಾನ

KPSC Postpones Competitive Exams May And June

ಪರೀಕ್ಷಾ ದಿನಾಂಕಗಳು ಘೋಷಣೆಯಾಗುತ್ತಿದ್ದಂತೆ ಕೆಪಿಎಸ್‌ಸಿ ವೆಬ್‌ ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳು ಸ್ಮರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಬೇಕು ಎಂದು ತಿಳಿಸಲಾಗಿದೆ.

ಕೆಲಸ ಆರಂಭಿಸಿದ ಎಚ್‌ಎಎಲ್ ಕೆಲಸ ಆರಂಭಿಸಿದ ಎಚ್‌ಎಎಲ್

ಯಾವ-ಯಾವ ಪರೀಕ್ಷೆಗಳು

* ಸಹಾಯಕರು/ಪ್ರಥಮ ದರ್ಜೆ ಸಹಾಯಕರ ನೇಮಕಾತಿ
* ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ 'ಎ' ಮತ್ತು 'ಬಿ' ವೃಂದ 106 ಹುದ್ದೆ
* ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ 54 ಹುದ್ದೆಗಳು
* ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ

English summary
Due to lock down Karnataka Public Service Commission (KPSC) postponed the scheduled competitive exams in the month of May and June 2020 for various post recruitment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X