KPSC Recruitment: ಹೈದರಾಬಾದ್-ಕರ್ನಾಟಕ ವೃಂದ ನೇಮಕಾತಿ, ವೇತನ 83,700 ರೂ.

ಬೆಂಗಳೂರು, ಸೆಪ್ಟೆಂಬರ್ 23: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್‌-1) ಹೈದರಾಬಾದ್-ಕರ್ನಾಟಕ ವೃಂದದ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹರು 3/10/2024 ರಿಂದ 4/11/2024ರ ತನಕ ಅರ್ಜಿಗಳನ್ನು ಸಲ್ಲಿಸಬಹುದು. ಒಟ್ಟು ಹುದ್ದೆಗಳ ಸಂಖ್ಯೆ 12.

ಕರ್ನಾಟಕ ಲೋಕೋಪಯೋಗಿ ಇಲಾಖೆ ಸೇವೆಗಳು (ವೃಂದ ಮತ್ತು ನೇಮಕಾತಿ)ನಿಯಮಗಳು 2018ರಡಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಹೈದರಾಬಾದ್-ಕರ್ನಾಟಕ ವೃಂದದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್‌-1) ಗ್ರೂಪ್-ಎ ವೃಂದದ 12 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 83,700-1,15,200 ರೂ. ವೇತನ ನಿಗದಿ ಮಾಡಲಾಗಿದೆ.

KPSC PWD Department Assistant Executive Engineer Recruitment Hyderabad Karnataka Region

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 4/11/2024 ಕೊನೆಯ ದಿನವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕಗಳನ್ನು ನಂತರದಲ್ಲಿ ತಿಳಿಸಲಾಗುತ್ತದೆ ಎಂದು ಅಧಿಸೂಚನೆ ಹೇಳಿದೆ. ಅರ್ಜಿ ಸಲ್ಲಿಸುವಾಗ ನೇಮಕಾತಿ ಅಧಿಸೂಚನೆ ವಿವರವಾಗಿ ಓದಿಕೊಂಡು ತಮಗೆ ಅನ್ವಯವಾಗುವ ವಿವರಗಳನ್ನು ಮಾತ್ರ ಭರ್ತಿ ಮಾಡಬೇಕು. ಒಮ್ಮೆ ಅರ್ಜಿ ಸಲ್ಲಿಕೆ ಮಾಡಿದ ಬಳಿಕ ಅರ್ಜಿಯಲ್ಲಿನ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಅರ್ಜಿ ಶುಲ್ಕ, ವಯೋಮಿತಿ ಮಾಹಿತಿ: ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 600 ರೂ.ಗಳು, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕರು 50 ರೂ. ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅಭ್ಯರ್ಥಿ ನಿಗದಿಪಡಿಸಿದ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು. ಒಮ್ಮೆ ಪಾವತಿ ಮಾಡಿಸ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡಲಾಗುವುದಿಲ್ಲ. ಅದನ್ನು ಆಯೋಗ ನಡೆಸುವ ಇತರ ಪರೀಕ್ಷೆ ಅಥವ ನೇಮಕಾತಿಗೆ ಹೊಂದಿಸಿಕೊಳ್ಳುವುದಿಲ್ಲ. ಶುಲ್ಕವನ್ನು ಪಾವತಿ ಮಾಡದ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಗೆ ನಿಗದಿ ಮಾಡಿದ ಕೊನೆಯ ದಿನಾಂಕದಂದು ಅಭ್ಯರ್ಥಿ ಕನಿಷ್ಠ ವಯೋಮಿತಿ 21 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆ 35 ವರ್ಷಗಳು, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 38 ವರ್ಷಗಳು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ವಿಶೇಷ ಸೂಚನೆಗಳು

* ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆ ನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದು.

* ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ/ ಸೇರ್ಪಡ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು.

* ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ, ಮೀಸಲಾತಿ ಪ್ರಮಾಣ ಪತ್ರ/ ಇತರೆ ಪ್ರಮಾಣ ಪತ್ರಗಳನ್ನು ತಮ್ಮ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ನಮೂನೆಗಳಲ್ಲಿಯೇ ಕಡ್ಡಾಯವಾಗಿ ಪಡೆದಿಟ್ಟುಕೊಂಡು ಸದರಿ ದಾಖಲೆಗಳನ್ನು ಅರ್ಜಿ ಸಲಿಸುವಾಗ ಅಪ್‌ಲೋಡ್ ಮಾಡತಕ್ಕದು, (ದಾಖಲೆಗಳು ಸ್ಪಷ್ಟವಾಗಿರಬೇಕು) ತಪ್ಪಿದಲ್ಲಿ ಅವರ ಮೀಸಲಾತಿ/ ಅಭ್ಯರ್ಥಿತ್ವವನ್ನು ತಿರಸ್ಕರಿಸಲಾಗುವುದು.

* ಅರ್ಜಿ ಸಲ್ಲಿಸುವ ಸಮಯದಲ್ಲಿ ಮೀಸಲಾತಿಯನ್ನು ಕೋರದೆ ತದನಂತರದಲ್ಲಿ, ಮೀಸಲಾತಿಯನ್ನು ಪರಿಗಣಿಸುವಂತೆ ಕೋರಿ ಸಲ್ಲಿಸುವ ಮನವಿ/ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.

* ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಿ, ಭಾವಚಿತ್ರ/ ಸಹಿ/ ವಯೋಮಿತಿ/ ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್/ UPI ಮೂಲಕ ಸಂದಾಯ ಮಾಡಬಹುದಾಗಿರುತ್ತದೆ. ಶುಲ್ಕವನ್ನು ಪಾವತಿಸದ ಹಾಗೂ ದಾಖಲೆಗಳನ್ನು ಭಾವಚಿತ್ರ ಸಹಿಯನ್ನು ಅಪ್ಲೋಡ್ ಮಾಡದೇ ಇರುವ/ ಅಸ್ಪಷ್ಟ ದಾಖಲೆ ಅಪ್ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿ, ನೇಮಕಾತಿ ಅಧಿಸೂಚನೆಗಾಗಿ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ಟ್ಯಾಬ್‌ನಲ್ಲಿ Notification for the post of Assistant Executive Engineer (Grade-1) - HK (Group-a) In the Department of pWD ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+