KPSC Recruitment; ಹೈದರಾಬಾದ್-ಕರ್ನಾಟಕ ಭಾಗ, 15 ಹುದ್ದೆಗಳು
ಬೆಂಗಳೂರು, ಮಾರ್ಚ್ 08: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹೈದರಾಬಾದ್-ಕರ್ನಾಟಕ ವೃಂದದ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 15 ಹುದ್ದೆಗಳಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 17/4/2024 ಕೊನೆಯ ದಿನವಾಗಿದೆ.
ಕರ್ನಾಟಕ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್-ಎ ವೃಂದದಲ್ಲಿ ಸಹಾಯಕ ನಿಯಂತ್ರಕರು 15 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ 52,650-97,100 ರೂ.ಗಳು.

ಆಸಕ್ತ ಹೈದರಾಬಾದ್-ಕರ್ನಾಟಕ ವೃಂದಕ್ಕೆ ಒಳಪಡುವ ಅಭ್ಯರ್ಥಿಗಳು 18/3/2024 ರಿಂದ 17/4/2024ರ ತನಕ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು 16/6/2024ರಂದು (ತಾತ್ಕಾಲಿಕ ದಿನಾಂಕ) ನಡೆಸಲು ತೀರ್ಮಾನಿಸಲಾಗಿದೆ.
ವಿದ್ಯಾರ್ಹತೆಯ ಮಾಹಿತಿ: ಸಹಾಯಕ ನಿಯಂತ್ರಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತ ಸರ್ಕಾರದ ಕಾನೂನು ರೀತ್ಯಾ ಸ್ಥಾಪಿಸಲ್ಪಟ್ಟಿರುವ ವಿಶ್ವವಿದ್ಯಾಲಯದಿಂದ ವಾಣಿಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ (ಎಂ.ಕಾಂ.) ಅಥವಾ ಎಂ.ಬಿ.ಎ. (ಆರ್ಥಿಕ) ಅಥವಾ ಎಂ.ಬಿ.ಎ. (ಆರ್ಥಿಕ ನಿರ್ವಾಹಣೆ) ಅಥವಾ ಎಂ.ಬಿ.ಎ./ ಎಂ.ಕಾಂ (ಆರ್ಥಿಕ ವಿಶ್ಲೇಷಣೆ) ಅಥವಾ ಯು.ಜಿ.ಸಿ ಯು 'ಆರ್ಥಿಕ' ಎಂಬುದನ್ನು ಒಂದು ವಿಷಯವನ್ನಾಗಿ ಅಭ್ಯಸಿಸಿರುವ ಕುರಿತು ಅಧಿಸೂಚನೆ ಹೊರಡಿಸಿರುವ ಯಾವುದೇ ಇತರ ಸ್ನಾತಕೋತ್ತರ ಪದವಿಯ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.
ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಸದಸ್ಯರು ಅಥವಾ ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಅಸೋಸಿಯೇಟ್ ಸದಸ್ಯರು ಆಗಿರತಕ್ಕದ್ದು. ಅಭ್ಯರ್ಥಿಗಳು ಮೇಲ್ಕಂಡ ಯಾವುದಾದರೂ ಪರೀಕ್ಷೆಗೆ ಹಾಜರಾಗಿದ್ದಲ್ಲಿ ಮತ್ತು ಆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಲ್ಲಿ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಶೈಕ್ಷಣಿಕವಾಗಿ ಅರ್ಹರಾಗುವುದಾದಲ್ಲಿ ಆದರೆ ಆ ಪರೀಕ್ಷೆಯ ಫಲಿತಾಂಶ ಪ್ರಕಟಗೊಳ್ಳದೇ ಇದ್ದಲ್ಲಿ, ಅಂತಹ ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆಗೆ ಪ್ರವೇಶ ಪಡೆಯಲು ಅರ್ಹರಾಗುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ.
ಮುಖ ಪರೀಕ್ಷೆಯನ್ನು ತೆಗೆದುಕೊಳ್ಳಬಹುದೆಂದು ಆಯೋಗವು ಘೋಷಿಸಿದ ಅರ್ಹರಾದ ಎಲ್ಲಾ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ಸಂಬಂಧಿಸಿದ ವಿದ್ಯಾರ್ಹತಾ ಪರೀಕ್ಷೆಯನ್ನು ಪಾಸು ಮಾಡಿರುವ ಬಗ್ಗೆ ಪ್ರಮಾಣ ಪತ್ರವನ್ನು ಅಪ್‌ಲೋಡ್ ಮಾಡತಕ್ಕದು, ತಪ್ಪಿದಲ್ಲಿ ಅಂತಹ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆಗೆ ಪ್ರವೇಶ ನೀಡುವುದಿಲ್ಲ ಎಂದು ನೇಮಕಾರಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಈ ಕುರಿತು ಮಾಹಿತಿ ತಿಳಿದು ಅರ್ಜಿ ಹಾಕಿ.
ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ ವಯೋಮಿತಿ 21 ವರ್ಷಗಳು ಎಂದು ಅಧಿಸೂಚನೆ ಹೇಳಿದೆ. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕ ಪಾವತಿ ಮಾಡಬೇಕಿದೆ. ಅರ್ಜಿ ಶುಲ್ಕ ಸಾಮಾನ್ಯ ವರ್ಗಕ್ಕೆ 600 ರೂ.ಗಳು, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 300 ರೂ.ಗಳು. ಮಾಜಿ ಸೈನಿಕರಿಗೆ 50 ರೂ. ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಘೋಷಣೆ ಮಾಡಲಾಗಿದೆ.
ಒಟ್ಟು 15 ಹುದ್ದೆಗಳ ಮೀಸಲಾತಿ ವರ್ಗೀರಣ. ಇತರೆ ಒಟ್ಟು 7, ಮಹಿಳೆ 4, ಗ್ರಾಮೀಣ 3, ಅಂಗವಿಕಲ 1 ಆಗಿದೆ. ಹೆಚ್ಚಿನ ಮಾಹಿತಿ ಮತ್ತು ಅಧಿಸೂಚನೆ ಕೆಪಿಎಸ್‌ಸಿ ವೆಬ್‌ಸೈಟ್‌ನ ಅಧಿಸೂಚನೆ ವಿಭಾಗದಲ್ಲಿದೆ. ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆಗಳು ಕೇಂದ್ರ ಕಛೇರಿಯ ಮಾಹಿತಿ ಕೇಂದ್ರ 080-30574957/30574901/ 080-30574935/












Click it and Unblock the Notifications