ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್‌ಸಿ ನೇಮಕಾತಿ : 381 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ತ್ವರೆ ಮಾಡಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 07 : ಕರ್ನಾಟಕ ಲೋಕಸೇವಾ ಆಯೋಗ ಒಟ್ಟು 381 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 16/01/2019 ಕೊನೆಯ ದಿನವಾಗಿದೆ.

ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ನೇರ (ನೇಮಕಾತಿ ಆಯ್ಕೆ) (ಸಾಮಾನ್ಯ) ನಿಯಮಗಳು 2006 ಮತ್ತು 2015ರ ತಿದ್ದುಪಡಿ ನಿಯಮಗಳ ಅನ್ವಯ ಉಳಿಕೆ ಮೂಲ ವೃಂದದ ಗ್ರೂಪ್ 'ಎ' ಮತ್ತು 'ಬಿ' ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

7 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ7 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

ಗ್ರೂಪ್‌ 'ಎ' ಹುದ್ದೆಗಳು ತೋಟಗಾರಿಕಾ ಇಲಾಖೆಯಲ್ಲಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 8, ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯಲ್ಲಿ ವಿಮಾ ವೈದ್ಯದಾಧಿಕಾರಿ 143 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ಕೆಪಿಎಸ್‌ಸಿ ನೇಮಕಾತಿ 554 ಹುದ್ದೆಗಳು, ವಿವರಗಳುಕೆಪಿಎಸ್‌ಸಿ ನೇಮಕಾತಿ 554 ಹುದ್ದೆಗಳು, ವಿವರಗಳು

ಗ್ರೂಪ್ 'ಬಿ' ಹುದ್ದೆಗಳಲ್ಲಿ ತೋಟಗಾರಿಕಾ ಇಲಾಖೆಯಲ್ಲಿನ ಸಹಾಯಕ ತೋಟಗಾರಿಕೆ ಅಧಿಕಾರಿ 221 ಹುದ್ದೆ. ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಲ್ಲಿ ಸಹಾಯಕ ಪ್ರಧಾನ ವ್ಯವಸ್ಥಾಪಕರು/ ಸಹಾಯಕ ನಿರ್ದೇಶಕರು 09 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿವಿಧ ಹುದ್ದೆಗಳು ಮತ್ತು ವೇತನ ಶ್ರೇಣಿ

ವಿವಿಧ ಹುದ್ದೆಗಳು ಮತ್ತು ವೇತನ ಶ್ರೇಣಿ

ಕೆಪಿಎಸ್‌ಸಿ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಒಟ್ಟು ಹುದ್ದೆಗಳು 381. ವೇತನ ಶ್ರೇಣಿ ಮತ್ತು ಖಾಲಿ ಇರುವ ಇಲಾಖೆಗಳ ವಿವರ ಚಿತ್ರಗಳಲ್ಲಿದೆ.

ಆನ್‌ಲೈನ್ ಮೂಲಕ ಮಾತ್ರ ಅರ್ಜಿ

ಆನ್‌ಲೈನ್ ಮೂಲಕ ಮಾತ್ರ ಅರ್ಜಿ

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದಲ್ಲಿ ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ ಒಂದೇ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಕೊನೆ ದಿನಾಂಕ ಚಿತ್ರದಲ್ಲಿದೆ.

ವಯೋಮಿತಿ, ವಿದ್ಯಾರ್ಹತೆ

ವಯೋಮಿತಿ, ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ನಿಗದಿ ಮಾಡಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ವಯೋಮಿತಿ ವಿವರ ಚಿತ್ರಗಳಲ್ಲಿ ಇದೆ.

ಪರೀಕ್ಷೆಯ ವಿವರಗಳು

ಪರೀಕ್ಷೆಯ ವಿವರಗಳು

ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯ ವಿವರಗಳನ್ನು ಚಿತ್ರಗಳಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕದ ವಿವರ

ಅರ್ಜಿ ಶುಲ್ಕದ ವಿವರ

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಅರ್ಜಿ ಶುಲ್ಕದ ವಿವರಗಳನ್ನು ಚಿತ್ರದಲ್ಲಿ ನೀಡಲಾಗಿದೆ.

English summary
Karnataka Public Service Commission (KPSC) invites online application for 381 Group A & B Technical posts. Candidates can apply before 16/1/2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X