844 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ
ಬೆಂಗಳೂರು, ಫೆಬ್ರವರಿ 13 : ಕರ್ನಾಟಕ ಲೋಕಸೇವಾ ಆಯೋಗ 844 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 12/3/2019 ಕೊನೆಯ ದಿನವಾಗಿದೆ.
ಕೆಪಿಎಸ್‌ಸಿ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ), ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಟರ್/ಪಿಯುಸಿ ಅಥವ ಯಾವುದೇ ಪದವಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಗಳಿಂದ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 35 ವರ್ಷಗಳು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ ಶ್ರೇಣಿ : 11,600 ರಿಂದ 21,000 ರೂ.ಗಳು.
ಆಸಕ್ತ ಅಭ್ಯರ್ಥಿಗಳು 11/2/2019 ರಿಂದ 12/3/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications