27 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ
ಬೆಂಗಳೂರು, ಮಾರ್ಚ್ 08 : ಕರ್ನಾಟಕ ಲೋಕಸೇವಾ ಆಯೋಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 5/4/2019.
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ ದ್ವಿತೀಯ ದರ್ಜೆ ಸಹಾಯಕರು, ಕಲ್ಯಾಣ ಸಂಘಟಿಕರು ಮತ್ತು ಮಿಲಿಟರಿ ಬಾಲಕರ ನಿಲಯದ ಅಧೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕವನ್ನು ಆಯೋಗವು ನಿಗದಿಪಡಿಸಿದ ನಂತರ ಪರೀಕ್ಷಾ ವೇಳಾಪಟ್ಟಿಯನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಶುಲ್ಕಗಳನ್ನು ಪಾವತಿ ಮಾಡಲು 8/4/2019 ಕೊನೆಯ ದಿನವಾಗಿದೆ.
ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಕೆಪಿಎಸ್‌ಸಿ ಸ್ಪಷ್ಟಪಡಿಸಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳ ವಿವರ
* ದ್ವಿತೀಯ ದರ್ಜೆ ಸಹಾಯಕರು 13
* ಕಲ್ಯಾಣ ಸಂಘಟಿಕರು 8
* ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯ ಅಧೀಕ್ಷಕರು 6 ಒಟ್ಟು ಹುದ್ದೆಗಳು 27.

ವಿದ್ಯಾರ್ಹತೆ ವಿವರ
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವ ಮಾನ್ಯತೆ ಪಡೆದ ಸಂಸ್ಥೆಯಿಂದ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಮೇಲಿನ ನಿಗದಿತ ಶೈಕ್ಷಣಿಕ ವಿದ್ಯಾರ್ಹತೆಯ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ಪರೀಕ್ಷಾ ಶುಲ್ಕಗಳು
ಅರ್ಜಿ ಸಲ್ಲಿಸುವ ಸಾಮಾನ್ಯ ಅರ್ಹತೆ, 2ಎ, 2ಬಿ, 3ಎ, 3ಬಿ/ಮಾಜಿ ಸೈನಿಕರಿಗೆ 50 ರೂ. ಶುಲ್ಕ ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಸೇರಿದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ವಯೋಮಿತಿ ವಿವರಗಳು
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷಗಳನ್ನು ಪೂರೈಸಿರತಕ್ಕದ್ದು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷಗಳು, ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು, ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.












Click it and Unblock the Notifications