ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

107 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

|
Google Oneindia Kannada News

ಬೆಂಗಳೂರು, ಮಾರ್ಚ್ 05 : ಕೆಪಿಎಸ್‌ಸಿ 'ಎ' ಮತ್ತು 'ಬಿ' ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 22/4/2019 ಕೊನೆಯ ದಿನ.

ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ 'ಎ'ನಲ್ಲಿ 15 ಹುದ್ದೆ, ಗ್ರೂಪ್ 'ಬಿ'ನಲ್ಲಿ 107 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ.

159 ಹುದ್ದೆಗಳಿಗೆ ಅರ್ಜಿ ಕರೆದ ಇಎಸ್‌ಐಸಿ, ಕರ್ನಾಟಕದಲ್ಲಿ ಕೆಲಸ159 ಹುದ್ದೆಗಳಿಗೆ ಅರ್ಜಿ ಕರೆದ ಇಎಸ್‌ಐಸಿ, ಕರ್ನಾಟಕದಲ್ಲಿ ಕೆಲಸ

ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ವಿಳಾಸವನ್ನು ತಪ್ಪದೇ ನಮೂದಿಸಲು ಸೂಚನೆ ನೀಡಲಾಗಿದೆ. ನೇಮಕಾತಿ ಪ್ರಕ್ರಿಯೆ ಮುಗಿಯುವ ತನಕ ಇದೇ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ವಿಳಾಸವನ್ನು ಪರಿಗಣಿಸಲಾಗುತ್ತದೆ.

ಕೆನರಾ ಬ್ಯಾಂಕ್ ನೇಮಕಾತಿ, ಪದವೀಧರರು ಅರ್ಜಿ ಹಾಕಿಕೆನರಾ ಬ್ಯಾಂಕ್ ನೇಮಕಾತಿ, ಪದವೀಧರರು ಅರ್ಜಿ ಹಾಕಿ

ಕರ್ನಾಟಕ ನಾಗರೀಕ ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಹಾಗೂ ಆಯ್ಕೆ) (ಸಾಮಾನ್ಯ) (ತಿದ್ದುಪಡಿ) ನಿಯಮಗಳು 2015 ರಂತೆ ಗ್ರೂಪ್ 'ಎ' ಮತ್ತು 'ಬಿ' ತಾಂತ್ರಿಕ/ತಾಂತ್ರಿಕೇತರ ಹುದ್ದೆಗಳ ನೇಮಕಾತಿಯನ್ನು ಸ್ಮರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನಡೆಸಲಾಗುತ್ತದೆ.

ಕೆಪಿಟಿಸಿಎಲ್ ನೇಮಕಾತಿ 3646 ಹುದ್ದೆಗಳಿಗೆ ಅರ್ಜಿ ಹಾಕಿಕೆಪಿಟಿಸಿಎಲ್ ನೇಮಕಾತಿ 3646 ಹುದ್ದೆಗಳಿಗೆ ಅರ್ಜಿ ಹಾಕಿ

ವಿದ್ಯಾರ್ಹತೆ ಮಾಹಿತಿ ಮತ್ತು ನೇಮಕಾತಿ ಆದೇಶವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲಿ ಯಾವ ಹುದ್ದೆಗಳು?

ಎಲ್ಲಿ ಯಾವ ಹುದ್ದೆಗಳು?

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಜಿಲ್ಲಾ ವ್ಯವಸ್ಥಾಪಕ ಹುದ್ದೆ ಗ್ರೇಡ್‌ -ಎ ಒಟ್ಟು ಹುದ್ದೆ 2. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಶಸ್ತ್ರ ಚಿಕಿತ್ಸಕರು ಒಟ್ಟು ಹುದ್ದೆಗಳು 15.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಜಿಲ್ಲಾ ವ್ಯವಸ್ಥಾಪಕರು ಗ್ರೇಡ್ -ಬಿ 4 ಹುದ್ದೆಗಳು. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ತಾಲೂಕು ಅಭಿವೃದ್ಧಿ ಅಧಿಕಾರಿ 25 ಹುದ್ದೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ಅಭಿಯಂತರು (ಸಿವಿಲ್) 61 ಹುದ್ದೆಗಳು.

ವಯೋಮಿತಿ ವಿವರ

ವಯೋಮಿತಿ ವಿವರ

ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ವೇತನ ಶ್ರೇಣಿ ವಿವರ

ವೇತನ ಶ್ರೇಣಿ ವಿವರ

* ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕ 52,650-97,100

* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಶಸ್ತ್ರ ಚಿಕಿತ್ಸಕರು 52,650-97,100

* ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಜಿಲ್ಲಾ ವ್ಯವಸ್ಥಾಪಕರು 45,300-88,300

* ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ತಾಲೂಕು ಅಭಿವೃದ್ಧಿ ಅಧಿಕಾರಿ 43,100-83,900

* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ಅಭಿಯಂತರು (ಸಿವಿಲ್) 52,650-97,100

ಅರ್ಜಿ ಶುಲ್ಕಗಳು

ಅರ್ಜಿ ಶುಲ್ಕಗಳು

* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ.
* ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 300 ರೂ.
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ.
* ಪ.ಜಾ/ಪ.ಪಂ/ಪ್ರವರ್ಗ -1/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

English summary
Karnataka Public Service Commission (KPSC) recruitment 2019. Notification has been released on official website for the recruitment of group A & B technical posts. April 22, 2019 last date to submit application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X