ಕೆಪಿಎಸ್‌ಸಿ ನೇಮಕಾತಿ; 1080 ದ್ವಿತೀಯ ದರ್ಜೆ ಸಹಾಯಕ ಹುದ್ದೆ ಭರ್ತಿ

ಬೆಂಗಳೂರು, ಮಾರ್ಚ್ 11: ಕೆಪಿಎಸ್‌ಸಿ ಕಿರಿಯ ಸಹಾಯಕ/ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 9/4/2020.

Recommended Video

      Chicken prices fall, poultry industry affected | Chicken price | Bengaluru | Poultry Industry

      ಕರ್ನಾಟಕ ಲೋಕಸೇವಾ ಆಯೋಗ 2019-20ನೇ ಸಾಲಿನಲ್ಲಿ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಳಿಕೆ ಮೂಲ ವೃಂದದ ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

      ಒಟ್ಟು 1080 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಬಿಬಿಎಂಪಿ ನಗರ ಸ್ಥಳೀಯ ಸಂಸ್ಥೆಯಾಗಿರುವುದರಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯ್ಕೆಯಾದಲ್ಲಿ ಕೆ.ಜಿ.ಐ.ಡಿ, ಜಿ. ಪಿ. ಎಫ್, ಸಮೂಹ ವಿಮೆಗಳು ಲಭ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

      ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ 6/6/2020 ಮತ್ತು ಸ್ಪರ್ಧಾತ್ಮಕ ಪರೀಕ್ಷೆ 7/6/2020ರಂದು ನಡೆಯಲಿದೆ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

      ಯಾವ-ಯಾವ ಇಲಾಖೆಗಳು

      ಯಾವ-ಯಾವ ಇಲಾಖೆಗಳು

      ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ 11, ಕಾರಾಗೃಹಗಳ ಇಲಾಖೆ 15, ಸಾರಿಗೆ ಇಲಾಖೆ 25, ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ 16, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 428, ಕಾಲೇಜು ಶಿಕ್ಷಣ ಇಲಾಖೆ 88 ಸೇರಿದಂತೆ 1080 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

      ಶೈಕ್ಷಣಿಕ ವಿದ್ಯಾರ್ಹತೆ

      ಶೈಕ್ಷಣಿಕ ವಿದ್ಯಾರ್ಹತೆ

      ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಪಿಯುಸಿ/ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ಪಿಯುಸಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಗಳು. ಸಿಬಿಎಸ್‌ಸಿ ಮತ್ತು ಐಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ. ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳು ನಡೆಸುವ ಕ್ಲಾಸ್ 12 ಪರೀಕ್ಷೆ, ಎನ್‌ಐಓಎಸ್ ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್.

      ವಯೋಮಿತಿ ವಿವರಗಳು

      ವಯೋಮಿತಿ ವಿವರಗಳು

      ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಪ್ರವರ್ಗ2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

      ಅರ್ಜಿ ಶುಲ್ಕ, ವೇತನದ ವಿವರ

      ಅರ್ಜಿ ಶುಲ್ಕ, ವೇತನದ ವಿವರ

      ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ.+ 35 ರೂ. ಪ್ರೋಸೆಸಿಂಗ್ ಚಾರ್ಜ್‌, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 300 ರೂ. + 35 ರೂ. ಪ್ರೋಸೆಸಿಂಗ್ ಚಾರ್ಜ್‌, ಮಾಜಿ ಸೈನಿಕರಿಗೆ 50 ರೂ. + 35 ರೂ. ಪ್ರೋಸೆಸಿಂಗ್ ಶುಲ್ಕ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಆದರೆ, ಪ್ರೋಸೆಸಿಂಗ್ ಶುಲ್ಕ 35 ರೂ. ಪಾವತಿಸಬೇಕು.

      ಆಯ್ಕೆಯಾದ ಅಭ್ಯರ್ಥಿಗಳಿಗೆ 21400 ರಿಂದ 42000 ರೂ. ತನಕ ವೇತನ ಶ್ರೇಣಿ ಇದೆ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್http://www.kpsc.kar.nic.in/

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+