ಕೆಪಿಎಸ್‌ಸಿ ನೇಮಕಾತಿ; 1112 ಎಫ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಫೆಬ್ರವರಿ 01 : ಕ ರ್ನಾಟಕ ಲೋಕಸೇವಾ ಆಯೋಗ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಲು 6/3/2020 ಕೊನೆಯ ದಿನವಾಗಿದೆ.

ಹೈದರಾಬಾದ್ ಕರ್ನಾಟಕದಲ್ಲಿ 137, ಉಳಿದಂತೆ 975 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಒಟ್ಟು 1112 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ನೇಮಕಾತಿ ಪ್ರಾಧಿಕಾರಿಗಳು ದೃಢಿಕರಿಸಿ ನೀಡಿರುವ ಹುದ್ದೆಗಳ ವರ್ಗೀಕರಣದನ್ವಯ ಇಲಾಖಾವಾರು ಹುದ್ದೆಗಳ ಸಂಖ್ಯೆ ಮತ್ತು ವರ್ಗೀಕರಣವು ಅನಿವಾರ್ಯವಾದ ಸಂದರ್ಭದಲ್ಲಿ ಬದಲಾವಣೆಗೆ ಒಳಪಟ್ಟಿರುತ್ತದೆ. ಅರ್ಜಿ ಸಲ್ಲಿಸಿದವರು ಶುಲ್ಕವನ್ನು ಪಾವತಿ ಮಾಡಲು 7/3/2020 ಕೊನೆಯ ದಿನವಾಗಿದೆ.

ಕನ್ನಡ ಭಾಷಾ ಪರೀಕ್ಷೆಯನ್ನು 9/5/2020 ಮತ್ತು ಸ್ಪರ್ಧಾತ್ಮಕ ಪರೀಕ್ಷೆಯನ್ನು 10/5/2020ರಂದು ನಡೆಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರು www.kpsc.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಅಲ್ಲಿ ನೀಡಿರುವ ಸೂಚನೆಗಳನ್ನು ಪಾಲಿಸಬೇಕು.

ಯಾವ-ಯಾವ ಇಲಾಖೆಗಳು

ಯಾವ-ಯಾವ ಇಲಾಖೆಗಳು

ಕರ್ನಾಟಕ ಲೋಕಸೇವಾ ಆಯೋಗ ಶಿಕ್ಷಣ, ಉದ್ಯೋಗ ಮತ್ತು ತರಬೇತಿ, ಮುಖ್ಯ ಕಾರ್ಯದರ್ಶಿಗಳು ಸಚಿವಾಲಯ ವಿಧಾನಸೌಧ, ತೋಟಗಾರಿಕಾ ಇಲಾಖೆ ಬೆಂಗಳೂರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ಒಟ್ಟು 27 ವಿವಿಧ ಇಲಾಖೆಗಳ ಕಚೇರಿಗಳಲ್ಲಿ ಖಾಲಿ ಇರುವ 1112 ಸಹಾಯಕ ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ವಿದ್ಯಾರ್ಹತೆ, ವೇತನ

ವಿದ್ಯಾರ್ಹತೆ, ವೇತನ

ಸಹಾಯಕ/ಪ್ರಥಮ ದರ್ಜೆ ಸಹಾಯಕ ಎರಡೂ ಹುದ್ದೆಗಳಿಗೂ ಅರ್ಜಿ ಸಲ್ಲಿಸಲು ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವೇತನ

* ಸಹಾಯಕ ಹುದ್ದೆಗೆ 30350-58250 ರೂ. ತಿಂಗಳ ವೇತನ

* ಪ್ರಥಮ ದರ್ಜೆ ಸಹಾಯಕ ಹುದ್ದೆ 27650-52650 ರೂ. ವೇತನ ನಿಗದಿ ಮಾಡಲಾಗಿದೆ.

ವಯೋಮಿತಿ ವಿವರಗಳು

ವಯೋಮಿತಿ ವಿವರಗಳು

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದವರಿಗೆ 35, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38, ಎಸ್‌ಸಿ/ಎಸ್‌ಟಿ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ವಿಶೇಷ ಸೂಚನೆಗಳು

ವಿಶೇಷ ಸೂಚನೆಗಳು

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿರುವ ಬಗ್ಗೆ ಖಚಿತಪಡಿಸಿಕೊಂಡು ನಂತರ ಒಂದು ಪ್ರತಿಯನ್ನು ಕಡ್ಡಾಯವಾಗಿ ಡೌನ್ ಲೋಡ್ ಮಾಡಿಕೊಂಡು ನೇಮಕಾತಿ ಪ್ರತಿಕ್ರಿಯೆ ಮುಗಿಯುವ ತನಕ ಭದ್ರವಾಗಿ ಇಟ್ಟುಕೊಳ್ಳಬೇಕು.

ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕು. ಸಾಮಾನ್ಯ ವರ್ಗಕ್ಕೆ 600 ರೂ. + ಪ್ರೊಸೆಸಿಂಗ್ ಚಾರ್ಜ್ 35 ರೂ. ಶುಲ್ಕ, ಪ್ರವರ್ಗ 2(ಎ), 2 (ಬಿ), 3 (ಎ), 3(ಬಿ) ಅಭ್ಯರ್ಥಿಗಳಿಗೆ 300 ರೂ. + 35 ರೂ. ಪ್ರೊಸೆಸಿಂಗ್ ಶುಲ್ಕ, ಮಾಜಿ ಸೈನಿಕ (ಸಾಮಾನ್ಯ ಅರ್ಹತೆ ಮತ್ತು 2 (ಎ), 2 (ಬಿ), 3 (ಎ), 3 (ಬಿ)ಗೆ ಸೇರಿದವರಿಗೆ 50 ರೂ. + 35 ರೂ. ಪ್ರೊಸೆಸಿಂಗ್ ಶುಲ್ಕ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ. ಆದರೆ, ಪ್ರೊಸೆಸಿಂಗ್ ಶುಲ್ಕ 35 ರೂ. ಪಾವತಿಸಬೇಕು.

ಫೆಬ್ರವರಿ 6ರಿಂದ ಅರ್ಜಿ

ಫೆಬ್ರವರಿ 6ರಿಂದ ಅರ್ಜಿ

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಫೆಬ್ರವರಿ 6ರಿಂದ ಮಾರ್ಚ್ 6ರ ತನಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವ ವಿಳಾಸವನ್ನು www.kpsc.kar.nic.in ವೆಬ್‌ಸೈಟ್‌ನಲ್ಲಿ ಫೆಬ್ರವರಿ 6ರಂದು ಅಪ್‌ ಡೇಟ್ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+