ಆಯುಷ್ ಇಲಾಖೆ ನೇಮಕಾತಿ; 275 ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಆಗಸ್ಟ್ 30: ಕರ್ನಾಟಕ ಲೋಕಸೇವಾ ಆಯೋಗ ಆಯುಷ್ ಇಲಾಖೆಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 14/9/2020ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Recommended Video
ಕೆಪಿಎಸ್‌ಸಿ 275 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಬಿಎಎಂಎಸ್, ಬಿಯುಎಂಎಸ್, ಬಿಎಚ್‌ಎಂಎಸ್, ಬಿಎನ್‌ವೈಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 45 ವರ್ಷಗಳು. ಓಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 35 ರೂ. ಶುಲ್ಕ ನಿಗದಿ ಮಾಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ., 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 300 ರೂ., ನಿವೃತ್ತ ಯೋಧರಿಗೆ 50 ರೂ. ಶುಲ್ಕವಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ನಿಗದಿ ಮಾಡಿಲ್ಲ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications