ಕೆಪಿಎಸ್‌ಸಿ ನೇಮಕಾತಿ; ದೆಹಲಿ ಕರ್ನಾಟಕ ಭವನದಲ್ಲಿ ಕೆಲಸ
ಬೆಂಗಳೂರು, ಫೆಬ್ರವರಿ 05 : ಕೆಪಿಎಸ್‌ಸಿ ನವದೆಹಲಿಯ ಕರ್ನಾಟಕ ಭವನದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 6/3/2020 ಕೊನೆಯ ದಿನವಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ ನಿವಾಸಿ ಆಯುಕ್ತರ ಕಚೇರಿ, ಕರ್ನಾಟಕ ಭವನ ನವದೆಹಲಿಯಲ್ಲಿ ಕಾರ್ಯ ನಿರ್ವಹಿಸಬೇಕಾದ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಹೈದರಾಬಾದ್-ಕರ್ನಾಟಕ ವೃಂದದ 1 ಹುದ್ದೆ, ಉಳಿಕೆ ಮೂಲ ವೃಂದದ 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 30350 ರಿಂದ 58250 ರೂ.ಗಳ ತನಕ ವೇತನವನ್ನು ನಿಗದಿ ಮಾಡಲಾಗಿದೆ. ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ 9/5/2020ರಂದು ಮತ್ತು ಸ್ಮರ್ಧಾತ್ಮಕ ಪರೀಕ್ಷೆ 10/5/2020ರಂದು ನಡೆಯಲಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತಿ ಸ್ಥಾಪಿತವಾದ ಪದವಿ ಪರೀಕ್ಷೆಯಲ್ಲಿ ಅಥವ ತತ್ಸಮಾನ ಎಂದು ಗುರುತಿಸುವ ಯಾವುದೇ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಅರ್ಜಿ ಸಲ್ಲಿಸುವವರಿಗೆ ಕನಿಷ್ಠ ವಯೋಮಿತಿ 21 ವರ್ಷಗಳು. ಸಾಮಾನ್ಯ ವರ್ಗಕ್ಕೆ 35, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38, ಎಸ್‌ಸಿ/ಎಸ್‌ಟಿ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.
ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಿ ಅಲ್ಲಿರುವ ಸೂಚನೆಗಳನ್ನು ಕಡ್ಡಾಯವಾಗಿ ಓದಿಕೊಂಡು ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ












Click it and Unblock the Notifications