ಕೆಪಿಎಸ್‌ಸಿ ನೇಮಕಾತಿ; ಪದವೀಧರರಿಗೆ ಉದ್ಯೋಗಗಳು

ಬೆಂಗಳೂರು, ಆಗಸ್ಟ್ 24: ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ 'ಸಿ' ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಪದವೀಧರರಿಗೆ ಹಲವಾರು ಹುದ್ದೆಗಳಿವೆ.

Recommended Video

      ಜೋಕೆ..!! ಸದ್ಯಕಿಲ್ಲ ಕೊರೋನಾದಿಂದ ಮುಕ್ತಿ | Oneindia Kannada

      ಆಸಕ್ತ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 19/9/2020 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕಗಳನ್ನು ಪಾವತಿ ಮಾಡಲು 21/9/2020 ಕೊನೆಯ ದಿನವಾಗಿದೆ.

      ಪದವಿ ವಿದ್ಯಾರ್ಹತೆ ಮತ್ತು ಪದವಿ ಪೂರ್ವ ವಿದ್ಯಾರ್ಹತೆ ಎಂದು ಎರಡು ಹಂತದಲ್ಲಿ ಹುದ್ದೆಗಳನ್ನು ವಿಭಾಗ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಸುವ ಮೊದಲು ಆಯೋಗ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಓದಿಕೊಳ್ಳಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

      ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

      ಯಾವ-ಯಾವ ಇಲಾಖೆಗಳು

      ಯಾವ-ಯಾವ ಇಲಾಖೆಗಳು

      ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿ ಪ್ರಾರೂಪಣಾ ಸಹಾಯಕರು 3, ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು 26, ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅಕೌಂಟೆಂಟ್ 21 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

      ಯಾವ ಹುದ್ದೆಗಳಿಗೆ ನೇಮಕಾತಿ

      ಯಾವ ಹುದ್ದೆಗಳಿಗೆ ನೇಮಕಾತಿ

      ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಾಂಖ್ಯಿಕ ನಿರೀಕ್ಷಕರು 17, ರಾಜ್ಯ ಲೆಕ್ಕ ಪರಿಶೋಧನಾ ಇಲಾಖೆಯಲ್ಲಿನ ಲೆಕ್ಕ ಪರಿಶೋಧಕರು 20, ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು 66 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.

      ಆನ್‌ಲೈನ್ ಮೂಲಕ ಅರ್ಜಿ ಹಾಕಿ

      ಆನ್‌ಲೈನ್ ಮೂಲಕ ಅರ್ಜಿ ಹಾಕಿ

      ಕೃಷಿ ಮಾರಾಟ ಇಲಾಖೆಯಲ್ಲಿನ ಮಾರುಕಟ್ಟೆ ಮೇಲ್ವಿಚಾರಕರು 6, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಗಣತಿದಾರರು 6, ಪ.ರ್ಗಗಳ ಕಲ್ಯಾಣ ನಿರ್ದೇಶನಾಲಯದಲ್ಲಿನ ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು (ವಾರ್ಡನ್) 3, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿಲಯ ಮೇಲ್ವಿಚಾರಕರು ಪುರುಷ 4, ಮಹಿಳೆ 8 ಹುದ್ದೆಗಳು, ಸಮಾಜ ಕಲ್ಯಾಣ ಇಲಾಖೆಯಲ್ಲಿನ ವಿದ್ಯಾರ್ಥಿ ನಿಲಯದ ವಾರ್ಡನ್ 140 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

      ಅರ್ಜಿಗಳನ್ನು ಸಲ್ಲಿಸಲು ವಿಳಾಸ

      ಅರ್ಜಿಗಳನ್ನು ಸಲ್ಲಿಸಲು ವಿಳಾಸ

      ಆಸಕ್ತ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್ ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು 19/9/2020ರ ತನಕ ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸಲು ವಿಳಾಸಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+