ಕೆಪಿಎಸ್‌ಸಿ ನೇಮಕಾತಿ; ಪದವಿ ಪೂರ್ವ ವಿದ್ಯಾರ್ಹತೆ ಹುದ್ದೆಗಳ ವಿವರ

ಬೆಂಗಳೂರು, ಆಗಸ್ಟ್ 25 : ಕೆಪಿಎಸ್‌ಸಿ ಗ್ರೂಪ್ 'ಸಿ' ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಕರೆದಿದೆ. ಪದವಿ ಪೂರ್ವ ವಿದ್ಯಾರ್ಹತೆ ಉಳ್ಳವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Recommended Video

      ತಮ್ಮನ ಅರ್ಹತೆ ಬಗ್ಗೆ ಮಾತನಾಡಿದ Priyanka Vadra... | Oneindia Kannada

      ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ ಮೂಲಕ ಅರ್ಜಿಗಳನ್ನು ಸಲ್ಲಿಸಲು 19/9/2020 ಕೊನೆಯ ದಿನ. ಅರ್ಜಿ ಶುಲ್ಕವನ್ನು 21/9/2020ರ ತನಕ ಪಾವತಿಸಬಹುದು.

      ಪದವಿ ಪೂರ್ವ ಮತ್ತು ಪದವೀಧರರಿಗೆ ಎಂದು ಎರಡು ಹಂತದಲ್ಲಿ ಹುದ್ದೆಗಳನ್ನು ವಿಭಾಗ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಮೊದಲು ಆಯೋಗ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಓದಿಕೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.

      KPSC Recruitment 2020 Jobs For Non Graduates

      ಹುದ್ದೆಗಳ ವಿವರ: ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರು 24, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕರವಸೂಲಿಗಾರರು 10, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ 45 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

      ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಲ್ಲಿನ ಟೈಡ್ ವಾಚರ್ 1, ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿನ ಗ್ರಂಥಾಲಯ ಸಹಾಯಕರು 1, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಗೃಹಪಾಲಕ/ಗಹ ಪಾಲಕಿ ಹುದ್ದೆಗಳನ್ನು ತುಂಬಲಾಗುತ್ತಿದೆ.

      ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳನ್ನು ಅರ್ಜಿಗಳನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+