ಕೆಪಿಎಸ್‌ಸಿ ನೇಮಕಾತಿ; ಅರ್ಜಿ ಸಲ್ಲಿಕೆಗೆ ಜೂನ್ 1ರ ತನಕ ಅವಕಾಶ
ಬೆಂಗಳೂರು, ಏಪ್ರಿಲ್ 27 : ಕರ್ನಾಟಕ ಲೋಕಸೇವಾ ಆಯೋಗ 2019-20ನೇ ಸಾಲಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿತ್ತು. ಈಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.
ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕ/ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್1, 2020ರ ತನಕ ಅವಕಾಶ ನೀಡಲಾಗಿದೆ.
29/2/2020ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು. 30/4/2020ರ ತನಕ ಅರ್ಜಿ ಸಲ್ಲಿಸಲು ಅವಕಾಶವಿತ್ತು. ಆದರೆ, ಲಾಕ್ ಡೌನ್ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

ಆನ್‌ಲೈನ್ ಮೂಲಕ ಅಭ್ಯರ್ಥಿಗಳು 1/6/2020ರ ತನಕ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ 2/6/2020.
ಹೈದರಾಬಾದ್-ಕರ್ನಾಟಕ ವೃಂದದ 199 ಹುದ್ದೆ, ಉಳಿಕೆ ಮೂಲ ವೃಂದದ 1080 ಹುದ್ದೆಗಳು ಸೇರಿ ಒಟ್ಟು 1279 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.
ದ್ವಿತೀಯ ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಶುಲ್ಕವನ್ನು ಸಹ ಪಾವತಿ ಮಾಡಬೇಕು.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು www.kpsc.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಭಾವಚಿತ್ರ/ ಸಹಿ/ ವಿದ್ಯಾರ್ಹತೆಯ ದಾಖಲೆ ಅಪ್ ಲೋಡ್ ಮಾಡಿದ ಬಳಿಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.












Click it and Unblock the Notifications