KPSC; ಸಹಾಯಕ ನಿರ್ದೇಶಕರ ಹುದ್ದೆ, ಸೆಪ್ಟೆಂಬರ್ 15ರಿಂದ ಅರ್ಜಿ ಹಾಕಿ

ಬೆಂಗಳೂರು, ಸೆಪ್ಟೆಂಬರ್ 07: ಕರ್ನಾಟಕ ಲೋಕಸೇವಾ ಆಯೋಗ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 14/10/2022 ಕೊನೆಯ ದಿನವಾಗಿದೆ. ಸೆಪ್ಟೆಂಬರ್ 15ರ ಗುರುವಾರದಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಕೆಪಿಎಸ್‌ಸಿ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಮತ್ತು ತಿದ್ದುಪಡಿ ನಿಯಮ 2022 ಹಾಗೂ ಕರ್ನಾಟಕ ಸಾಮಾನ್ಯ ಸೇವೆಗಳು (ಆರ್ಥಿಕ ಮತ್ತು ಸಾಂಖ್ಯಿಕ) ನಿರ್ದೇಶನಾಲಯ (ನೇಮಕಾತಿ) ನಿಯಮಗಳು 2009ರ ಅನ್ವಯ ಗ್ರೂಪ್ 'ಬಿ' ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಒಟ್ಟು ಹುದ್ದೆಗಳ ಸಂಖ್ಯೆ 10. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಒಮ್ಮೆ ಅರ್ಜಿ ಸಲ್ಲಿಕೆ ಮಾಡಿದ ಬಳಿಕ ಅರ್ಜಿಯಲ್ಲಿನ ವಿವರ ತಿದ್ದುಪಡಿ/ ಸೇರ್ಪಡೆ ಮಾಡುವ ಮನವಿಯನ್ನು ಪುರಸ್ಕರಿಸಲಾಗುವುದಿಲ್ಲ ಎಂದು ನೇಮಕಾತಿ ಅಧಿಸೂಚನೆ ಸ್ಪಷ್ಟಪಡಿಸಿದೆ.

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿಯೊಂದಿಗೆ ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ/ ಇತರ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಕೆ ಮಾಡಲು ನಿಗಿದಿಪಡಿಸಿರುವ ಕೊನೆಯ ದಿನಾಂಕಕ್ಕೆ ಚಾಲ್ತಿಯಲ್ಲಿರುವಂತೆ ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು. ತಪ್ಪಿದ್ದಲ್ಲಿ ಅರ್ಜಿ ತಿರಸ್ಕಾರ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ ಮಾಡುವ ಪ್ರಕ್ರಿಯೆ

ಅರ್ಜಿ ಸಲ್ಲಿಕೆ ಮಾಡುವ ಪ್ರಕ್ರಿಯೆ

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ನಿರ್ದೇಶಕ 10 ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿಲ್ಲ.

ಅಭ್ಯರ್ಥಿಗಳು ಮೂರು ಹಂತಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು. ಮೊದಲ ಹಂತದಲ್ಲಿ profile creation/ updation ಇದೆ. ಎರಡನೇ ಹಂತದಲ್ಲಿ application submission ಇರುತ್ತದೆ. ಮೂರನೇ ಹಂತದಲ್ಲಿ Fee payment ಇದೆ. ಅರ್ಜಿ ಸಲ್ಲಿಸಿ ಶುಲ್ಕ ಪಾವತಿ ಮಾಡದಿದ್ದರೆ ಅಂತಹ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ.

ಅರ್ಜಿ ಶುಲ್ಕದ ವಿವರಗಳು

ಅರ್ಜಿ ಶುಲ್ಕದ ವಿವರಗಳು

ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕರು 50 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ಆದರೆ ಎಲ್ಲಾ ವರ್ಗದ ಅಭ್ಯರ್ಥಿಗಳು ಕಡ್ಡಾಯವಾಗಿ 35 ರೂ. ಪ್ರೊಸೆಸಿಂಗ್ ಶುಲ್ಕ ಪಾವತಿ ಮಾಡಬೇಕು. ಅಭ್ಯರ್ಥಿಗಳು ಪಾವತಿಸಿದ ಶುಲ್ಕವನ್ನು ಯಾವುದೇ ಸಂದರ್ಭದಲ್ಲಿಯೂ ವಾಪಸ್ ನೀಡಲಾಗುವುದಿಲ್ಲ. ಆಯೋಗ ನಡೆಸುವ ಇತರ ಪರೀಕ್ಷೆ ಅಥವ ನೇಮಕಾತಿಗಳಿಗೆ ಹೊಂದಿಸಿಕೊಳ್ಳುವುದಿಲ್ಲ.

ಅರ್ಜಿ ಸಲ್ಲಿಕೆ ಮಾಡಿದ ಬಳಿಕ Pay Now ಲಿಂಕ್ ಕ್ಲಿಕ್ ಮಾಡಿದರೆ ಆನ್‌ಲೈನ್ ಪೇಮೆಂಟ್ ಆಯ್ಕೆಗಳು ಸಿಗುತ್ತವೆ. ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಲು 15/10/2022 ಕೊನೆಯ ದಿನವಾಗಿದೆ.

ನೇಮಕಾತಿ ವಿಧಾನದ ಮಾಹಿತಿ

ನೇಮಕಾತಿ ವಿಧಾನದ ಮಾಹಿತಿ

ಈ ಹುದ್ದೆಗಳನ್ನು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ನಿಯಮ 5 (ಡಿ) ಪ್ರಕಾರ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳ ಅನ್ವಯ ನಡೆಸಲಾಗುತ್ತದೆ.

ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮ ಉಪ ನಿಯಮ 7ರಲ್ಲಿ ನಿಗದಿಮಾಡಿದಂತೆ ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಾಗಿರುವುದಿಲ್ಲ. ಈ ಪರೀಕ್ಷೆ ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿದೆ. ಅಭ್ಯರ್ಥಿ ಪರೀಕ್ಷೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕಿದೆ. ಈ ಪರೀಕ್ಷೆ ಪ್ರಶ್ನೆ ಪತ್ರಿಕೆಯನ್ನು ಎಸ್‌ಎಸ್‌ಎಲ್‌ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವಾಗಿಟ್ಟುಕೊಂಡು ಸಿದ್ದಪಡಿಸಲಾಗುತ್ತದೆ.

ವಿದ್ಯಾರ್ಹತೆ ಮತ್ತು ವಯೋಮಿತಿ ವಿವರಗಳು

ವಿದ್ಯಾರ್ಹತೆ ಮತ್ತು ವಯೋಮಿತಿ ವಿವರಗಳು

ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ನಮೂದಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ನಿಗದಿಪಡಿಸಿದ ವಿದ್ಯಾರ್ಹತೆ ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಸಹ ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ವಯೋಮಿತಿ ವಿವರಗಳು; ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ 35 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ. ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷಗಳು.

ವೇತನ, ವಿದ್ಯಾರ್ಹತೆಗಳ ವಿವರಗಳು

ವೇತನ, ವಿದ್ಯಾರ್ಹತೆಗಳ ವಿವರಗಳು

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ನಿರ್ದೇಶಕ ಹುದ್ದೆಗಳ ವೇತನ, ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ವಿದ್ಯಾರ್ಹತೆ, ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. ಸಹಾಯವಾಣಿ ಸಂಖ್ಯೆ 18005728707, ಮೈಸೂರು 0821-2545956, ಬೆಳಗಾವಿ 0831-2475345, ಶಿವಮೊಗ್ಗ 08182-228099, ಕಲಬುರಗಿ 08472-227944 ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+