KPSC Recruitment; ಲೆಕ್ಕ ಸಹಾಯಕರ 242 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗ ಲೆಕ್ಕ ಸಹಾಯಕರ 242 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು 23/4/2023ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ಬೆಂಗಳೂರು, ಮಾರ್ಚ್ 15; ಕರ್ನಾಟಕ ಲೋಕಸೇವಾ ಆಯೋಗ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 242 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ 23/3/2022 ರಿಂದ 23/4/2023ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಿದವರು ಅರ್ಜಿ ಶುಲ್ಕವನ್ನ ಪಾವತಿ ಮಾಡಲು ಕೊನೆಯ ದಿನಾಂಕ 24/4/2023 ಆಗಿದೆ.

ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ನಿಯಮಗಳು ಹಾಗೂ ತಿದ್ದುಪಡಿ ನಿಯಮ 2022ರ ಅನ್ವಯ ಈ ಉಳಿಕೆ ಮೂಲ ವೃಂದದ ಗ್ರೂಪ್ 'ಸಿ' ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದು. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ, ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.

KPSC Recruitment 2023 Apply For 242 Account Assistant Post

ಅಭ್ಯರ್ಥಿಗಳು ಒಟ್ಟು ಮೂರು ಹಂತದಲ್ಲಿ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು. ಮೊದಲ ಹಂತದಲ್ಲಿ ಪ್ರೊಫೈಲ್ ಕ್ರಿಯೇಷನ್/ ಅಪ್‌ಡೇಷನ್. ಎರಡನೇ ಹಂತದಲ್ಲಿ ಅರ್ಜಿ ಸಲ್ಲಿಕೆ ಮತ್ತು ಮೂರನೇ ಹಂತದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ., ಪ್ರವರ್ಗ 2(ಎ), 2 (ಬಿ), 3 (ಎ) ಮತ್ತು 3 (ಬಿ) ಅಭ್ಯರ್ಥಿಗಳು 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಶುಲ್ಕ ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. 35 ರೂ. ಪ್ರಕ್ರಿಯೆ ಶುಲ್ಕವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಪಾವತಿಸಬೇಕು. ಶುಲ್ಕ ಪಾವತಿ ಮಾಡದ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ.

ವಿದ್ಯಾರ್ಹತೆಯ ಮಾಹಿತಿ; ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸೂಚಿಸಿರುವ ವಿದ್ಯಾರ್ಹತೆಯನ್ನು ಹೊಂದಿರಲೇಬೇಕು, ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅರ್ಜಿ ಸಲ್ಲಿಸುವವರು Must posses B.Com or B.B.M or B.B.A Degree, or Posses any other equivalent qualification notified as such by U.G.C. ಇಲಾಖೆಯ ಸೃಷ್ಟೀಕರಣದಂತೆ BBS/ BBM/ BBE Restructured as BBA or B.Com or B.Com (Hons), BIBF be Restructured as BBA or B.Com (International Business & Finance) ವಿದ್ಯಾರ್ಹತೆಗಳು ತತ್ಸಮಾನ (Equivalent) ವಿದ್ಯಾರ್ಹತೆಗಳಾಗಿರುತ್ತವೆ.

ಅರ್ಜಿ ಹಾಕುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ವಯೋಮಿತಿ ಹೊಂದಿರಬೇಕು. ಕನಿಷ್ಠ ವಿದ್ಯಾರ್ಹತೆ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆಗೆ 35 ವರ್ಷಗಳು. ಪ್ರವರ್ಗ 2(ಎ), 2 (ಬಿ), 3 (ಎ), 3 (ಬಿ) 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ಕ್ಕೆ 40 ವರ್ಷಗಳು. ಆಯ್ಕೆಯಾದ ಅಭ್ಯರ್ಥಿಗಳಿಗೆ 27,650 ರಿಂದ 52,650 ರೂ. ತನಕ ವೇತನ ನಿಗದಿ ಮಾಡಲಾಗಿದೆ.

kpsc

ಕನ್ನಡ ಪರೀಕ್ಷೆ ಕಡ್ಡಾಯ; ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಉಪನಿಯಮ (7) ರನ್ವಯ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಕಡ್ಡಾಯವಾಗಿದೆ. ಸದರಿ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಹೊರತು, ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆಪತ್ರಿಕೆಯನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು, ಈ ಪ್ರಶ್ನೆ ಪತ್ರಿಕೆಯನ್ನು SSLC ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗುವುದು.

ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹರಾದ ನಂತರ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಹಾಗೂ ತಿದ್ದುಪಡಿ ನಿಯಮ 2022ರ ಉಪ ನಿಯಮ 5(ಡಿ)ರಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಗೆ ಅರ್ಹತೆ ಹೊಂದಲು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಹೊಂದುವುದು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳಲ್ಲಿ ಕನಿಷ್ಠ ಪಕ್ಷ ಶೇಕಡ 35 ರಷ್ಟು ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿರುತ್ತದೆ ಎಂದು ನೇಮಕಾತಿ ಅಧಿಸೂಚನೆ ತಿಳಿಸಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ KPSC ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+