KPSC Jobs 2023: ಸರ್ಕಾರಿ ಉದ್ಯೋಗವಕಾಶ, ಕರ್ನಾಟಕದಲ್ಲೇ ಪೋಸ್ಟಿಂಗ್‌, ವೇತನ, ವಿವರ

ಬೆಂಗಳೂರು, ಆಗಸ್ಟ್ 31: ಕರ್ನಾಟಕ ಲೋಕಸೇವಾ ಆಯೋಗವು (KPSC) ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಅರ್ಹರಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬೇಕು. ಈ ಮೂಲಕ ಸರ್ಕಾರ ಕೆಲಸ ಹುಡುತ್ತಿರುವವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೆಪಿಎಸ್‌ಸಿ ತಿಳಿಸಿದೆ.

ಕರ್ನಾಟಕ ಲೋಕಸೇವಾ ಆಯೋಗ ವ್ಯಾಪ್ತಿಯಲ್ಲಿ ಒಟ್ಟು 15 ಹುದ್ದೆಗಳು ಖಾಲಿ ಇದ್ದು, ಅವುಗಳ ನೇಮಕಾತಿ ಪ್ರಕ್ರಿಯೆ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 15 ಕಮರ್ಷಿಯಲ್ ಟ್ಯಾಕ್ಸ್​ ಇನ್ಸ್​ಪೆಕ್ಟರ್ (HK) ಹುದ್ದೆಗಳು ಖಾಲಿ ಇವೆ. ಆಸಕ್ತರು ಅಕ್ಟೋಬರ್ 3 ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು, ಆಯ್ಕೆ ಆಗುವವರಿಗೆ ಕರ್ನಾಟಕದಲ್ಲಿಯೇ ಪೋಸ್ಟಿಂಗ್ ನೀಡಲಾಗುವುದು.

kpsc-recruitment-2023

ನೇಮಕಾತಿ ಪೂರ್ಣ ಮಾಹಿತಿ

ಸಂಸ್ಥೆ: ಕೆಪಿಎಸ್‌ಸಿ

ಹುದ್ದೆ ಹೆಸರು: ಕಮರ್ಷಿಯಲ್ ಟ್ಯಾಕ್ಸ್​ ಇನ್ಸ್​ಪೆಕ್ಟರ್ (HK)

ಖಾಲಿ ಹುದ್ದೆ ಎಷ್ಟಿವೆ: 15

ಮಾಸಿಕ ವೇತನ: ರೂ.33,450 ನಿಂದ 62,600 ರೂಪಾಯಿ

ಅರ್ಜಿ ಸಲ್ಲಿಕೆ ಕೊನೆ ದಿನ: ಅಕ್ಟೋಬರ್ 3

ವಿದ್ಯಾರ್ಹತೆ

ಸಕಾ್ರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯದಲ್ಲಿ ಕಡ್ಡಾಯವಾಗಿ ಪದವಿ, ಎಲ್​ಎಲ್​ಬಿ ಪೂರ್ಣಗೊಳಿಸಿರಬೇಕು ಎಂದು ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯಸ್ಸಿನ ಮಿತಿ

ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸಿನವರು ಆಗಿರಬೇಕು.ಇನ್ನೂ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು ಎಂದು ಕೆಪಿಎಸ್‌ಸಿ ತಿಳಿಸಿದೆ.

kpsc-recruitment-2023

ಅರ್ಜಿ ಸಲ್ಲಿಕೆ ವಿಧಾನ ಮತ್ತು ಶುಲ್ಕ ವಿವರ

ಆಸಕ್ತರು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50ರೂಪಾಯಿ, ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳಿಗೆ 300 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಇನ್ನೂ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕ ತುಂಬಬೇಕಿದೆ.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಕನ್ನಡ ಭಾಷಾ ಪರೀಕ್ಷೆ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ಅಲ್ಲಿ ಆಯ್ಕೆ ಆಗುವವರಿಗೆ ನೇರ ಸಂದರ್ಶನ ಆಯೋಜಿಸಲಾಗುವುದು. ಹೆಚ್ಚಿನ ಮಾಹಿತಿಗೆ, ಆನ್‌ಲೈನ್ ಮೂಲಕ ಅಜಿ ಸಲ್ಲಿಕೆಗೆ https://www.kpsc.kar.nic.in/indexk.html ವೆಬ್‌ಸೈಟ್‌ಗೆ ಬೇಟಿ ಕೊಡಬೇಕು ಎಂದು ಕೆಪಿಎಸ್‌ಸಿ ಹೇಳಿದೆ.

ನೆನಪಿಡಬೇಕಾದ ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭ: 2023 ಆಗಸ್ಟ್ 30

ಅರ್ಜಿ ಸಲ್ಲಿಕೆ ಕಡೆಯ ದಿನ: 2023 ಅಕ್ಟೋಬರ್ 3

ಕನ್ನಡ ಭಾಷಾ ಪರೀಕ್ಷೆ: 2023 ಡಿಸೆಂಬರ್ 2

ಸ್ಪರ್ಧಾತ್ಮಕ ಪರೀಕ್ಷೆ: 2023 ಡಿಸೆಂಬರ್ 3

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+