ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಜುಲೈನಲ್ಲಿ 1000ಕ್ಕೂ ಹೆಚ್ಚು ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲು KPSC ಸಿದ್ಧತೆ

ಕರ್ನಾಟಕ ಲೋಕಸೇವಾ ಆಯೋಗ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಲು ಮುಂದಾಗಿದೆ. ಜುಲೈ ತಿಂಗಳಲ್ಲಿ ಸುಮಾರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸರಣಿ ಅಧಿಸೂಚನೆಗಳನ್ನು ಹೊರಡಿಸಲು ಆಯೋಗವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಮೂಲಕ ತಮಗೆ ಅಂಟಿಕೊಂಡಿರುವ 'ವಿಳಂಬ ನೇಮಕಾತಿ' ಎಂಬ ಆರೋಪವನ್ನು ದೂರ ಮಾಡಲು ಕೆಪಿಎಸ್‌ಸಿ ಮುಂದಾಗಿದ್ದು, ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಗುರಿ ಹೊಂದಿದೆ.

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ), ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಮತ್ತು ಗ್ರೂಪ್ 'ಸಿ' ಹುದ್ದೆಗಳಿಗೂ ತ್ವರಿತಗತಿಯಲ್ಲಿ ನೇಮಕಾತಿ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಎಸ್‌ಸಿ ಕಾರ್ಯದರ್ಶಿ ಕೆ. ಜ್ಯೋತಿ, "ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಲು ಆಯೋಗವು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇಲಾಖೆಗಳಿಂದ ಪ್ರಸ್ತಾವನೆ ಬಂದ ತಕ್ಷಣವೇ ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು" ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಜನತೆ ತಮ್ಮ ಪರೀಕ್ಷಾ ಸಿದ್ಧತೆಯನ್ನು ಆರಂಭಿಸಬಹುದಾಗಿದೆ.

KPSC Recruitment

ಯಾವ್ಯಾವ ಹುದ್ದೆಗಳಿಗೆ ಕೆಪಿಎಸ್‌ಸಿ ನೇಮಕಾತಿ ಅಧಿಸೂಚನೆ?

ಜುಲೈನಲ್ಲಿ ಪ್ರಕಟವಾಗಲಿರುವ ಅಧಿಸೂಚನೆಯಲ್ಲಿ ಹಲವು ಪ್ರಮುಖ ಹುದ್ದೆಗಳು ಒಳಗೊಂಡಿವೆ. 400 ಗೆಜೆಟೆಡ್ ಪ್ರೊಬೇಷನರಿ (ಗ್ರೂಪ್ ಎ ಮತ್ತು ಬಿ) ಹುದ್ದೆಗಳು ಹಾಗೂ 115 ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹುದ್ದೆಗಳು ಭರ್ತಿಯಾಗಲಿವೆ. ಇದರ ಜೊತೆಗೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಫ್‌ಡಿಎ, ಎಸ್‌ಡಿಎ ಹಾಗೂ ಪದವಿ ಅರ್ಹತೆಯ ಗ್ರೂಪ್ 'ಸಿ' ಹುದ್ದೆಗಳ ನೇಮಕಾತಿ ನಡೆಯಲಿದೆ.

ಅಲ್ಲದೆ ಲೆಕ್ಕ ಪರಿಶೋಧನಾ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಹುದ್ದೆಗಳಿಗೂ ಅಧಿಸೂಚನೆ ಹೊರಬೀಳಲಿದೆ. ಶೇ.50ರಷ್ಟು ಮೀಸಲಾತಿ ಆದೇಶದ ಅನ್ವಯ ಹೊಸ ಅಧಿಸೂಚನೆಗಳನ್ನು ಪ್ರಕಟಿಸಲು ನ್ಯಾಯಾಲಯದಿಂದ ಸದ್ಯಕ್ಕೆ ಯಾವುದೇ ತಡೆ ಇಲ್ಲದ ಕಾರಣ, ಜುಲೈನಲ್ಲಿ ಅಧಿಕೃತ ವೇಳಾಪಟ್ಟಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಕೆಪಿಎಸ್‌ಸಿ ಪರೀಕ್ಷಾ ವಿಧಾನ ಮತ್ತು ಸರ್ಕಾರದ ಸೂಚನೆ

ಖಾಲಿ ಹುದ್ದೆಗಳ ಭರ್ತಿಗೆ ಆಯೋಗವು ಮೂರು ವಿಭಿನ್ನ ಪರೀಕ್ಷಾ ವಿಧಾನಗಳನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಿದೆ. ಗ್ರೂಪ್ 'ಎ' ಮತ್ತು 'ಬಿ' ಹುದ್ದೆಗಳಿಗೆ ಎಂದಿನಂತೆ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಇರಲಿದೆ. ಕೆಲವು ನಿರ್ದಿಷ್ಟ ಗ್ರೂಪ್ 'ಎ' ಹುದ್ದೆಗಳಿಗೆ ಕೇವಲ ಪರೀಕ್ಷೆ ನಡೆಸಿ ಜ್ಯೇಷ್ಠತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ತಾಂತ್ರಿಕ ಕೌಶಲ್ಯದ ಅಗತ್ಯವಿರುವ ಕೆಲವು ಗ್ರೂಪ್ 'ಬಿ' ಹುದ್ದೆಗಳಿಗೂ ಕೇವಲ ಪರೀಕ್ಷೆಗಳ ಮೂಲಕವೇ ನೇಮಕಾತಿ ನಡೆಸಲು ನಿರ್ಧರಿಸಲಾಗಿದೆ.

ಮತ್ತೊಂದು ಪ್ರಮುಖ ಬದಲಾವಣೆ ಎಂದರೆ, ವಿವರಣಾತ್ಮಕ ಪರೀಕ್ಷೆಗಳನ್ನು ಮಾತ್ರ ಕೆಪಿಎಸ್‌ಸಿ ನಡೆಸಲಿದ್ದು, ಒಎಂಆರ್ ಆಧಾರಿತ ಬಹುಆಯ್ಕೆಯ ಪರೀಕ್ಷೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವಂತೆ ಸರ್ಕಾರ ಸೂಚನೆ ನೀಡಿದೆ.

2024ರ ಕೆಎಎಸ್ ಫಲಿತಾಂಶ ವಿಳಂಬ

ಹೊಸ ನೇಮಕಾತಿಗಳಿಗೆ ಸಿದ್ಧತೆ ನಡೆಯುತ್ತಿರುವಾಗಲೇ, 2024ನೇ ಸಾಲಿನ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದರೂ ನನೆಗುದಿಗೆ ಬಿದ್ದಿದೆ. ಸಂದರ್ಶನ ಪ್ರಕ್ರಿಯೆ ಮುಗಿದು ತಾತ್ಕಾಲಿಕ ಆಯ್ಕೆ ಪಟ್ಟಿ ಸಿದ್ಧವಾಗಿದ್ದರೂ, ಮೀಸಲಾತಿ ವಿವಾದದ ಹಿನ್ನೆಲೆಯಲ್ಲಿ ಫಲಿತಾಂಶ ಪ್ರಕಟಿಸಲು ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಕಳೆದ ವಾರ ಆಯೋಗವು ವಿಭಾಗೀಯ ಪೀಠಕ್ಕೆ ಮನವಿ ಮಾಡಿದ್ದರೂ ಅನುಮತಿ ದೊರೆತಿಲ್ಲ.

ನ್ಯಾಯಾಲಯದಿಂದ ಸ್ಪಷ್ಟ ಆದೇಶ ಸಿಗುವವರೆಗೂ ಆಯೋಗವು ಈ ಫಲಿತಾಂಶವನ್ನು ಪ್ರಕಟಿಸುವಂತಿಲ್ಲ. ಹಳೆಯ ಫಲಿತಾಂಶ ವಿಳಂಬವಾಗುತ್ತಿರುವ ಕಾರಣದಿಂದಲೇ ಆಯೋಗವು ಸುಮ್ಮನೆ ಕೂರದೇ ಹೊಸ ನೇಮಕಾತಿ ಪ್ರಕ್ರಿಯೆಗಳನ್ನು ಕೈಗೆತ್ತಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+