KPSC: 50 ಹುದ್ದೆ ನೇಮಕಾತಿ, ವೇತನ 33 ರಿಂದ 62 ಸಾವಿರ
ಬೆಂಗಳೂರು, ಮಾರ್ಚ್ 18: ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ 'ಸಿ'ಉಳಿಕೆ ಮೂಲ ವೃಂದದ 50 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 28/5/2024 ಕೊನೆಯ ದಿನವಾಗಿದೆ.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ 50 'ಕೈಗಾರಿಕಾ ವಿಸ್ತರಣಾಧಿಕಾರಿ' ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. 29/4/2024ರಿಂದ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ವಿದ್ಯಾರ್ಹತೆ, ವೇತನ ವಿವರ: ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ Must be holder of Degree in Science or Commerce or Business Administration or any Branch of Bachelor of Engineering.
ಆಯ್ಕೆಯಾದ ಅಭ್ಯರ್ಥಿಗಳಿಗೆ 33,450 ರಿಂದ 62,600 ರೂ. ವೇತನವನ್ನು ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳ ಮೀಸಲಾತಿ ಹೀಗಿದೆ. ಪರಿಶಿಷ್ಟ ಜಾತಿ 9, ಪರಿಶಿಷ್ಟ ಪಂಗಡ 4, ಪ್ರವರ್ಗ-1 2, 2ಎ 7, 2ಬಿ 2, 3ಎ 2, 3ಬಿ 2, ಸಾಮಾನ್ಯ ಅಭ್ಯರ್ಥಿ 22.
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ ವಿದ್ಯಾರ್ಹತೆ 18 ವರ್ಷ. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35. ಪ್ರವರ್ಗ 2ಎ, 2ಬಿ, 3ಎ, 3ಬಿ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 40 ವರ್ಷಗಳ ಗರಿಷ್ಠ ವಯೋಮಿತಿ ನಿಗಡಿ ಮಾಡಲಾಗಿದೆ.
ವಿದ್ಯಾರ್ಹತೆ ಕುರಿತು ಪ್ರಮುಖ ಸೂಚನೆಯೊಂದಿದೆ. ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ನಿಗದಿಪಡಿಸಿದ ಅಂಕಪಟ್ಟಿ/ ಪ್ರಮಾಣ ಪತ್ರ/ ಘಟಿಕೋತ್ಸವ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆದಿಟ್ಟುಕೊಂಡು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಅರ್ಜಿ ಶುಲ್ಕ ಪಾವತಿ ಮಾಡದ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿ 600 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿ 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯತಿ ಇದೆ.
ಸ್ಮರ್ಧಾತ್ಮಕ ಮತ್ತು ಕನ್ನಡ ಭಾಷಾ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕನ್ನಡ ಭಾಷಾ ಪರೀಕ್ಷೆ/ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯೋಗವು ನಿಗದಿಪಡಿಸಿದ ಯಾವುದೇ ಕೇಂದ್ರ ಸ್ಥಳದಲ್ಲಿ ನಡೆಸಲಾಗುತ್ತದೆ ಹಾಗೂ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದ ಆಯ್ಕೆಯ ಅವಕಾಶ ಇರುವುದಿಲ್ಲ.
ಈ ಅಧಿಸೂಚನೆ ಜಾರಿಯಾದ ಮೇಲೆ ಅಧಿಸೂಚನೆಯಲ್ಲಿ ನಮೂದಿಸಿರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರವು ಯಾವುದೇ ನಿಯಮಗಳು ಮತ್ತು ನಿರ್ದೇಶನಗಳನ್ನು ಜಾರಿ ಮಾಡಿದಲ್ಲಿ/ ತಿದ್ದುಪಡಿ ಮಾಡಿದಲ್ಲಿ/ ಪರಿಷ್ಕರಣೆ ಮಾಡಿದಲ್ಲಿ ಅವುಗಳನ್ನು ನೇಮಕಾತಿ ಪ್ರಕ್ರಿಯೆಯ ಸಮುಚಿತ ಹಂತದಲ್ಲಿ ಸೇರಿಸಿಕೊಳ್ಳಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ನ ಅಧಿಸೂಚನೆ ವಿಭಾಗದಲ್ಲಿ NOTIFICATION FOR VARIOUS GROUP-C(RPC) POSTS WITH DEGREE QUALIFICATION IN VARIOUS DEPTS ಮೇಲೆ ಕ್ಲಿಕ್ ಮಾಡಬಹುದು.












Click it and Unblock the Notifications