ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್‌ಸಿ ನೇಮಕಾತಿ; ಹೈ-ಕ ಭಾಗದ 6 ಕಾರ್ಮಿಕ ನಿರೀಕ್ಷಕ ಹುದ್ದೆಗಳು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 12; ಕರ್ನಾಟಕ ಲೋಕಸೇವಾ ಆಯೋಗ (KPSC) ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ನಿಯಮಗಳು ಹಾಗೂ ತಿದ್ದುಪಡಿ ನಿಯಮ 2022ರ ಅನ್ವಯ ಹೈದರಾಬಾದ್-ಕರ್ನಾಟಕ ವೃಂದ ಗ್ರೂಪ್ 'ಸಿ' ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರ 6 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ 30/10/2022ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 31/10/2022 ಕೊನೆಯ ದಿನಾಂಕವಾಗಿದೆ.

ಗ್ರಾಮ ಲೆಕ್ಕಿಗ ನೇಮಕಾತಿ; ಸಮಿತಿ ರಚನೆ ತೀರ್ಮಾನ ಸ್ವಾಗತಿಸಿದ ಶಾಸಕ ಗ್ರಾಮ ಲೆಕ್ಕಿಗ ನೇಮಕಾತಿ; ಸಮಿತಿ ರಚನೆ ತೀರ್ಮಾನ ಸ್ವಾಗತಿಸಿದ ಶಾಸಕ

ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಲು ಮೊದಲು ಎಲ್ಲಾ ವಿವರಗಳನ್ನು ಅರ್ಥೈಸಿಕೊಂಡು ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡಬೇಕು. ಒಮ್ಮೆ ಅರ್ಜಿ ಸಲ್ಲಿಕೆ ಮಾಡಿದ ನಂತರ ಅರ್ಜಿಯಲ್ಲಿನ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ಮಾಡುವ ಮನವಿಗಳನ್ನು ತಿರಸ್ಕಾರ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಕೆಪಿಎಸ್‌ಸಿ ನೇಮಕಾತಿ; ಸಹಾಯಕ ಕಾರ್ಯಪಾಲಕ ಇಂಜಿನಿಯರ್ 18 ಹುದ್ದೆಗಳು ಕೆಪಿಎಸ್‌ಸಿ ನೇಮಕಾತಿ; ಸಹಾಯಕ ಕಾರ್ಯಪಾಲಕ ಇಂಜಿನಿಯರ್ 18 ಹುದ್ದೆಗಳು

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡುವಾಗ ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಮತ್ತು ಇತರ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಚಾಲ್ತಿಯಲ್ಲಿರುವಂತೆ ಸಲ್ಲಿಕೆ ಮಾಡಬೇಕು. ಅಪ್‌ಲೋಡ್ ಮಾಡುವ ಎಲ್ಲಾ ದಾಖಲೆಗಳು ಸಹ ಸ್ಪಷ್ಟವಾಗಿರಬೇಕು.

ಗ್ರಾಮ ಲೆಕ್ಕಿಗರ ನೇಮಕಾತಿಯಲ್ಲಿ ಬದಲಾವಣೆ, ಸ್ಪರ್ಧಾತ್ಮಕ ಪರೀಕ್ಷೆ?ಗ್ರಾಮ ಲೆಕ್ಕಿಗರ ನೇಮಕಾತಿಯಲ್ಲಿ ಬದಲಾವಣೆ, ಸ್ಪರ್ಧಾತ್ಮಕ ಪರೀಕ್ಷೆ?

ಅಭ್ಯರ್ಥಿಗಳು ಏನು ಓದಿರಬೇಕು?

ಅಭ್ಯರ್ಥಿಗಳು ಏನು ಓದಿರಬೇಕು?

ಅರ್ಜಿಗಳನ್ನು ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ತಿಳಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು. ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಯುವ ಕಾನೂನಿನಡಿ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಯಲ್ಲಿ ಅರ್ಹತೆ ಹೊಂದಲು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಹೊಂದುವುದು ಹಾಗೂ ಸ್ಮರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳಲ್ಲಿ ಕನಿಷ್ಟ ಪಕ್ಷ ಶೇ 35ರಷ್ಟು ಅಂಕಗಳನ್ನುಗಳಿಸುವುದು ಕಡ್ಡಾಯವಾಗಿದೆ.
ಅರ್ಜಿ ಶುಲ್ಕದ ಮಾಹಿತಿ

ಅರ್ಜಿ ಶುಲ್ಕದ ಮಾಹಿತಿ

ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪ್ರವರ್ಗ 2(ಎ), 2 (ಬಿ), 3 (ಎ), 3 (ಬಿ) ಅಭ್ಯರ್ಥಿಗಳು 300 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಮಾಜಿ ಸೈನಿಕರಿಗೆ 50 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಎಲ್ಲಾ ವರ್ಗದ ಅಭ್ಯರ್ಥಿಗಳು 35 ರೂ. ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು. ಅರ್ಜಿ ಶುಲ್ಕ ಪಾವತಿ ಮಾಡದಿದ್ದರೆ ಅರ್ಜಿ ತಿರಸ್ಕಾರ ಮಾಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 33,450-62,600 ವೇತನ ನಿಗದಿ ಮಾಡಲಾಗಿದೆ.

ವಯೋಮಿತಿ ವಿವರಗಳು

ವಯೋಮಿತಿ ವಿವರಗಳು

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದವರಿಗೆ 35 ವರ್ಷಗಳು. ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ) ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮ 1977ರಲ್ಲಿ ನಿರ್ದಿಷ್ಟಪಡಿಸಿರುವಂತೆ ಸದರಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಲಾಗುತ್ತದೆ.

ಮಾಹಿತಿಗಾಗಿ ವೆಬ್‌ಸೈಟ್‌, ಸಹಾಯವಾಣಿ

ಮಾಹಿತಿಗಾಗಿ ವೆಬ್‌ಸೈಟ್‌, ಸಹಾಯವಾಣಿ

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಗಳು ಕೇಂದ್ರ ಕಚೇರಿಯ ಸಹಾಯವಾಣಿ 080-30574957/ 30574901. ಮೈಸೂರು 0821-2545956, ಬೆಳಗಾವಿ 0831-2475345, ಕಲಬುರಗಿ 08472-227944, ಶಿವಮೊಗ್ಗ 08182-228099.

English summary
Karnataka Public Service Commission (KPSC) invited applications for 6 labor inspector post at Hyderabad Karnataka region. Candidates can apply till October 30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X