KPSC Recruitment: ಹೈದರಾಬಾದ್ ಕರ್ನಾಟಕ ವೃಂದ ನೇಮಕಾತಿ: 273 ಹುದ್ದೆ, ವೇತನ ವಿವರ

ಬೆಂಗಳೂರು, ಸೆಪ್ಟೆಂಬರ್ 24: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹೈದರಾಬಾದ್-ಕರ್ನಾಟಕ ವೃಂದದಲ್ಲಿ 273 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಕೃಷಿ ಇಲಾಖೆಯ ಹುದ್ದೆಗಳು ಇದಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 7/10/2024 ರಿಂದ 7/11/2024ರ ತನಕ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಅನ್ವಯ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಕೆಪಿಎಸ್‌ಸಿ ಕೃಷಿ ಇಲಾಖೆಯ ಕೃಷಿ ಅಧಿಕಾರಿಗಳು 42, ಸಹಾಯಕ ಕೃಷಿ ಅಧಿಕಾರಿಗಳು 231 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಕೃಷಿ ಅಧಿಕಾರಿಗಳ ಹುದ್ದೆಗೆ 43,100-83,900 ರೂ. ವೇತನವನ್ನು ನಿಗದಿ ಮಾಡಲಾಗಿದೆ. ಸಹಾಯಕ ಕೃಷಿ ಅಧಿಕಾರಿಗಳು 40,900-78,200 ರೂ. ವೇತನ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.

KPSC Recruitment Agriculture Officer Assistant Agriculture Officer Post Hyderabad Karnataka Region

ವಯೋಮಿತಿ, ಅರ್ಜಿ ಶುಲ್ಕ ವಿವರ: ಅರ್ಜಿಗಳನ್ನು ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ನಿಗದಿತ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ನಿಗದಿಪಡಿಸಿದ ವಿದ್ಯಾರ್ಹತೆಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಸಹ ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಕೆ ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.

ರಾಜ್ಯ ಸರ್ಕಾರ ದಿನಾಂಕ 10-9-2024ರಂದು ಜಾರಿಗೊಳಿಸಿರುವ ಆದೇಶದಲ್ಲಿ ಎಲ್ಲಾ ಪ್ರವರ್ಗಗಳಿಗೆ ಒಂದು ಬಾರಿಗೆ ಅನ್ವಯಿಸುವಂತೆ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಿರುತ್ತದೆ. ಅದನ್ನು ಅಳವಡಿಕೊಂಡ ನಂತರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆ 38 ವರ್ಷಗಳು. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 41 ವರ್ಷ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 43 ವರ್ಷಗಳು.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡಲಾಗುವುದಿಲ್ಲಅಥವ ಆಯೋಗ ನಡೆಸುವ ಇತರೆ ಪರೀಕ್ಷೆ, ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ. ಶುಲ್ಕವನ್ನು ಪಾವತಿಸದ ಅರ್ಜಿಗಳನ್ನು ಸಹ ತಿರಸ್ಕಾರ ಮಾಡಲಾಗುತ್ತದೆ.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ., ಪ್ರವರ್ಗ 2ಎ/ 2ಬಿ/ 3ಎ/ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 300 ರೂ.ಗಳು. ಮಾಜಿ ಸೈನಿಕರಿಗೆ 50 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ವಿಶೇಷ ಸೂಚನೆಗಳು

* ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆ ನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದು.

* ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿನ, ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು ಎಂದು ತಿಳಿಸಲಾಗಿದೆ.

* ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರ/ ಇತರೆ ಪ್ರಮಾಣ ಪತ್ರಗಳನ್ನು ತಮ್ಮ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಅಧಿಸೂಚನೆಯಲ್ಲಿ ಸೂಚಿಸಿರುವ ನಮೂನೆಗಳಲ್ಲಿಯೇ ಕಡಾಯವಾಗಿ ಪಡೆದಿಟ್ಟುಕೊಂಡು ಸದರಿ ದಾಖಲೆಗಳನ್ನು ಅರ್ಜಿ ಸಲ್ಲಿಸುವಾಗ ಅಪ್‌ಲೋಡ್ ಮಾಡತಕ್ಕದು, (ದಾಖಲೆಗಳು ಸ್ಪಷ್ಟವಾಗಿರುಬೇಕು) ತಪ್ಪಿದ್ದಲಿ ಅವರ ಮೀಸಲಾತಿ/ ಅಭ್ಯರ್ಥಿತ್ವವನ್ನು ತಿರಸ್ಕರಿಸಲಾಗುತ್ತದೆ.

* ಅರ್ಜಿ ಸಲ್ಲಿಸುವ ಸಮಯದಲ್ಲಿ ಮೀಸಲಾತಿಯನ್ನು ಕೋರದೆ ತದನಂತರದಲ್ಲಿ, ಮೀಸಲಾತಿಯನ್ನು ಪರಿಗಣಿಸುವಂತೆ ಕೋರಿ ಸಲ್ಲಿಸುವ ಮನವಿ/ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.

* ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಿ, ಭಾವಚಿತ್ರ ಸಹಿ (ವಯೋಮಿತಿ/ ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ UPI ಮೂಲಕ ಸಂದಾಯ ಮಾಡಬಹುದಾಗಿರುತ್ತದೆ. ಶುಲ್ಕವನ್ನು ಪಾವತಿಸದ ಹಾಗೂ ದಾಖಲೆಗಳನ್ನು ಭಾವಚಿತ್ರ ಸಹಿಯನ್ನು ಅಪ್ಲೋಡ್ ಮಾಡದೇ ಇರುವ ಅಸ್ಪಷ್ಟ ದಾಖಲೆಗಳನ್ನು ಅಪ್‌ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.

ಹೆಚ್ಚನ ಮಾಹಿತಿಗಾಗಿ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ವಿಭಾಗದಲ್ಲಿ notification for the post of AO and AAo In the department of Agriculture(HK) ಮೇಲೆ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+