KPSC Recruitment: 10 ಹುದ್ದೆ, ವೇತನ, ವಿದ್ಯಾರ್ಹತೆ ವಿವರ

ಬೆಂಗಳೂರು, ಮಾರ್ಚ್ 17: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸಾರ್ವಜನಿಕ ಗ್ರಂಥಾಲಯ ಇಲಾಖೆ 'ಗ್ರಂಥಪಾಲಕ' 10 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತರು 29/4/2024 ರಿಂದ 28/5/2024ರ ತನಕ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕ ಪಾವತಿ ಮಾಡಲು 28/5/2024 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 37,900-70,850 ರೂ. ವೇತನವನ್ನು ನಿಗದಿ ಮಾಡಲಾಗಿದೆ.

KPSC Recruitment Apply For 10 Librarian Post

ವಿದ್ಯಾರ್ಹತೆ ವಿವರಗಳು: ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಭಾರತೀಯ ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಲೈಬ್ರರಿ ಸೈನ್ಸ್‌ ವಿಷಯದಲ್ಲಿ ಪದವಿ ಪಡೆದಿರಬೇಕು.

ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ನಿಗದಿಪಡಿಸಿದ ಅಂಕಪಟ್ಟಿ/ ಪ್ರಮಾಣ ಪತ್ರ/ ಘಟಿಕೋತ್ಸವ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆದಿಟ್ಟುಕೊಂಡು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು. ನಿಗದಿಪಡಿಸಿ ವಿದ್ಯಾರ್ಹತೆ ಬಿಟ್ಟು ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.

ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ ವಿದ್ಯಾರ್ಹತೆ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 40 ವರ್ಷಗಳು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಮಾಡುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳು 300 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯತಿ ಇದೆ. ಮಾಜಿ ಸೈನಿಕರು 50 ರೂ. ಶುಲ್ಕ ಪಾವತಿಸಬೇಕು.

ಅಭ್ಯರ್ಥಿಗಳು ಕಡ್ಡಾಯವಾಗಿ ಶುಲ್ಕವನ್ನು ಪಾವತಿ ಮಾಡಬೇಕು. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಒಂದೇ ಶುಲ್ಕವನ್ನು ಪಾವತಿಸಬೇಕು. ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ಸಹ ವಾಪಸ್ ನೀಡಲಾಗುವುದಿಲ್ಲ. ಶುಲ್ಕ ಪಾವತಿ ಮಾಡದ ಅಭ್ಯರ್ಥಿಗಳ ಅರ್ಜಿ ತಿರಸ್ಕಾರ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಸ್ಮರ್ಧಾತ್ಮಕ ಮತ್ತು ಕನ್ನಡ ಭಾಷಾ ಪರೀಕ್ಷೆಗಳನ್ನು ಆಯೋಗವು ನಿಗದಿಪಡಿಸಿದ ಯಾವುದೇ ಕೇಂದ್ರದಲ್ಲಿ ನಡೆಸಲಾಗುತ್ತದೆ. ಅಭ್ಯರ್ಥಿಗಳಿಗೆ ಪರೀಕ್ಷೆ ಕೇಂದ್ರದ ಆಯ್ಕೆಯ ಅವಕಾಶವಿಲ್ಲ.

ಇವು ಗ್ರೂಪ್ 'ಸಿ' ಹುದ್ದೆಯಾದ ಕಾರಣ ಆನ್‌ಲೈನ್ ಅರ್ಜಿಯೊಂದಿಗೆ ಅಗತ್ಯ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು. ದಾಖಲಾತಿಗಳ ಆಧಾರದ ಮೇಲೆಯೇ ಆಯ್ಕೆ ಮಾಡಲಾಗುತ್ತದೆ. ಅವಶ್ಯಕ ಸಂದರ್ಭದಲ್ಲಿ ಆಯೋಗವು ಮೂಲ ದಾಖಲೆಗಳ ಪರಿಶೀಲನೆಯನ್ನು ನಡೆಸಲು ತೀರ್ಮಾನ ಮಾಡಿದಲ್ಲಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ ಪ್ರಮಾಣ ಪತ್ರಗಳ ಮೂಲ ದಾಖಲಾತಿಗಳನ್ನು ಹಾಜರುಪಡಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ನ ಅಧಿಸೂಚನೆ ಟ್ಯಾಬ್‌ನಲ್ಲಿ NOTIFICATION FOR VARIOUS GROUP-C(RPC) POSTS WITH DEGREE QUALIFICATION IN VARIOUS DEPTS ಮೇಲೆ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+