ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

KPSC Recruitment 2022 : ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 07; ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಹಾಗೂ ತಿದ್ದುಪಡಿ ನಿಯಮ 2022ರ ನಿಯಮಗಳನ್ವಯ ಹೈದರಾಬಾದ್ ಕರ್ನಾಟಕ ವೃಂದದ ಗೂಪ್ 'ಸಿ' ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ 13 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 7ರ ಶುಕ್ರವಾರದಿಂದ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.

ಕೆಪಿಎಸ್‌ಸಿ ನೇಮಕಾತಿ; ಸಹಾಯಕ ಕಾರ್ಯಪಾಲಕ ಇಂಜಿನಿಯರ್ 18 ಹುದ್ದೆಗಳು ಕೆಪಿಎಸ್‌ಸಿ ನೇಮಕಾತಿ; ಸಹಾಯಕ ಕಾರ್ಯಪಾಲಕ ಇಂಜಿನಿಯರ್ 18 ಹುದ್ದೆಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 5/11/2022. ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 7/11/2022. ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆನಂತರವೇ ತಮಗೆ ಅಧ್ಯಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು. ದಾಖಲೆಗಳು ಸ್ಪಷ್ಟವಾಗಿರುಬೇಕು ತಪ್ಪಿದಲ್ಲಿ ಅವರ ಮೀಸಲಾತಿ/ ಅಭ್ಯರ್ಥಿ ಅರ್ಜಿಯನ್ನು ತಿರಸ್ಕರಿಸಲಾಗುವುದು.

ಕರ್ನಾಟಕ; ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳು ಕರ್ನಾಟಕ; ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳು

ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿಗಳನ್ನು ಸಲ್ಲಿಸಿದ ಬಳಿಕ ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರ/ ಇತರೆ ಪ್ರಮಾಣ ಪತ್ರಗಳನ್ನು ತಮ್ಮ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಅಪ್‌ಲೋಡ್ ಮಾಡತಕ್ಕದ್ದು.

ಕರ್ನಾಟಕ; ವಿವಿಧ ಇಲಾಖೆಗಳಿಗೆ ಮಂಜೂರಾಗಿರುವ ಒಟ್ಟು ಹುದ್ದೆಗಳು ಕರ್ನಾಟಕ; ವಿವಿಧ ಇಲಾಖೆಗಳಿಗೆ ಮಂಜೂರಾಗಿರುವ ಒಟ್ಟು ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ

ಶೈಕ್ಷಣಿಕ ವಿದ್ಯಾರ್ಹತೆ

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು Must have passed PUC (10+2) ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸರ್ಕಾರಿ ಸುತ್ತೋಲೆ ಸಂಖ್ಯೆಯ ಅನ್ವಯ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯು ನಡೆಸುವ ಪಿಯುಸಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಗಳು ಸಿ. ಬಿ. ಎಸ್. ಇ ಮತ್ತು ಐಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ. ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ. ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್‌/ ಹೆಚ್.ಎಸ್.ಸಿ. ಮಾಡಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕದ ಮಾಹಿತಿ

ಅರ್ಜಿ ಶುಲ್ಕದ ಮಾಹಿತಿ

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಶುಲ್ಕವನ್ನು ಪಾವತಿ ಮಾಡಬೇಕು. ಶುಲ್ಕ ಪಾವತಿ ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ಪಾವತಿಸಬೇಕು. ಪರ್ವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 300 ರೂ. ಶುಲ್ಕ ಕಟ್ಟಬೇಕು. ಮಾಜಿ ಸೈನಿಕರಿಗೆ 50 ರೂ. ಶುಲ್ಕವಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ. ಆದರೆ ಎಲ್ಲಾ ವರ್ಗದ ಅಭ್ಯರ್ಥಿಗಳು 35 ರೂ.ಗಳ ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು.

ವಯೋಮಿತಿ ಎಷ್ಟು ನಿಗದಿ ಮಾಡಲಾಗಿದೆ?

ವಯೋಮಿತಿ ಎಷ್ಟು ನಿಗದಿ ಮಾಡಲಾಗಿದೆ?

ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಪ್ರವರ್ಗ 2ಎ/ 2ಬಿ/ 3ಎ/3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 21,400 ರಿಂದ 42,000 ರೂ. ವೇತನ ನಿಗದಿ ಮಾಡಲಾಗಿದೆ.

ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ

ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ

ಸ್ಪರ್ಧಾತ್ಮಕ ಪರೀಕ್ಷೆಯನ್ನು ಆನ್‌ಲೈನ್ -ಒಎಂಆರ್ ಮಾದರಿ ಅಥವಾ ಗಣಕ ಯಂತ್ರದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ ನಡೆಸಲಾಗುವುದು. ಈ ವಿಷಯದಲ್ಲಿ ಆಯೋಗದ ತೀರ್ಮಾನವೇ ಅಂತಿಮ. ಗಣಕ ಯಂತ್ರದ ಮೂಲಕ ಸ್ಪರ್ಧಾತ್ಮಕ (Computer based recruitment test-CBRT) ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದಲ್ಲಿ ಅಭ್ಯರ್ಥಿಗಳಿಗೆ ಈ ಸಂಬಂಧ ಸೂಚನೆಗಳನ್ನು ಹಾಗೂ ಅಣಕು ಪರೀಕ್ಷೆಯನ್ನು (Mock Test) ತೆಗೆದುಕೊಳ್ಳುವ ಬಗ್ಗೆ ಮಾಹಿತಿಯನ್ನು ಆಯೋಗದ ಅಂತರ್ಜಾಲದಲಿ ಪ್ರಕಟಿಸಲಾಗುತ್ತದೆ.

ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಪಠ್ಯಕ್ರಮ ವಿವರಗಳನ್ನು ಆಯೋಗದ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆಯೋಗದ ವೆಬ್‌ಸೈಟ್‌ನಿಂದ ಡೌನ್ ಲೋಡ್ ಮಾಡಿಕೊಳ್ಳಲು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗುವುದು ಹಾಗೂ ಈ ಬಗ್ಗೆ ಮಾಹಿತಿಯನ್ನು ಆಯೋಗದ ವೆಬ್ ಸೈಟ್‌ನಲ್ಲಿಯೂ ತಿಳಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಸಹಾಯವಾಣಿ ಸಂಖ್ಯೆ 18005728707.

ಕನ್ನಡ ಪರೀಕ್ಷೆ ಪಾಸ್ ಕಡ್ಡಾಯ

ಕನ್ನಡ ಪರೀಕ್ಷೆ ಪಾಸ್ ಕಡ್ಡಾಯ

ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಉಪನಿಯಮ (7)ರನ್ವಯ ಅರ್ಜಿ ಸಲ್ಲಿಸುವ ಎಲ್ಲಾಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದೆ. ಸದರಿ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಹೊರತು ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿರುತ್ತದೆ. ಅಭ್ಯರ್ಥಿ ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನುಗಳಿಸಬೇಕು.

English summary
Karnataka Public Service Commission (KPSC) invited applications for the enumerator cum data entry operator 13 post. Candidates can apply till 5/11/2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X