KPSC Recruitment; 410 ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಮಾರ್ಚ್ 21; ಕರ್ನಾಟಕ ಲೋಕಸೇವಾ ಆಯೋಗ ಪೌರಾಡಳಿತ ನಿರ್ದೇಶನಾಲಯ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಸ್ಮರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ 29/4/2022.

ಪೌರಾಡಳಿತ ನಿರ್ದೇಶನಾಲಯ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳಲ್ಲಿನ (ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿ) ಗ್ರೂಪ್‌ 'ಸಿ' ವೃಂದದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.

ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಅನ್ವಯ ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಅಧಿಸೂಚನೆಯನ್ನು ಚೆನ್ನಾಗಿ ಓದಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕ 31/3/2022ರಿಂದ 29/4/2022ರ ರಾತ್ರಿ 11.45ರ ತನಕ ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 30/4/2022 ಕೊನೆಯ ದಿನವಾಗಿದೆ ಎಂದು ಅಧಿಸೂಚನೆ ತಿಳಿಸಿದೆ.

ಹುದ್ದೆಗಳ ವಿವರಗಳು

ಹುದ್ದೆಗಳ ವಿವರಗಳು

* ಕಿರಿಯ ಅಭಿಯಂತರ (ಸಿವಿಲ್) ಉಳಿಕೆ ಮೂಲವೃಂದ 74, ಕಲ್ಯಾಣ ಕರ್ನಾಟಕ 15, ಒಟ್ಟು 89.

* ಕಿರಿಯ ಆರೋಗ್ಯ ನಿರೀಕ್ಷಕರು. ಉಳಿಕೆ ಮೂಲವೃಂದ 55, ಕಲ್ಯಾಣ ಕರ್ನಾಟಕ 2, ಒಟ್ಟು 57.

* ಎಲೆಕ್ಟ್ರೀಷಿಯನ್ ಗ್ರೇಡ್ -1. ಕಲ್ಯಾಣ ಕರ್ನಾಟಕ 2. ಒಟ್ಟು 2. ಎಲೆಕ್ಟ್ರೀಷಿಯನ್ ಗ್ರೇಡ್ -2. ಕಲ್ಯಾಣ ಕರ್ನಾಟಕ 10. ಒಟ್ಟು 10.

* ನೀರು ಸರಬರಾಜು ಆಪರೇಟರ್. ಕಲ್ಯಾಣ ಕರ್ನಾಟಕ 89. ಒಟ್ಟು 89 ಹುದ್ದೆಗಳು.

* ಸಹಾಯಕ ನೀರು ಸರಬರಾಜು ಆಪರೇಟರ್. ಕಲ್ಯಾಣ ಕರ್ನಾಟಕ 163. ಒಟ್ಟು 163 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ವಿದ್ಯಾರ್ಹತೆ, ಅರ್ಜಿ ಶುಲ್ಕಗಳು

ವಿದ್ಯಾರ್ಹತೆ, ಅರ್ಜಿ ಶುಲ್ಕಗಳು

ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಆಯಾ ಹುದ್ದೆಗಳ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ. ನಿಗದಿಪಡಿಸಿದ ವಿದ್ಯಾರ್ಹತೆ ಹೊರತುಪಡಿಸಿ ಯಾವುದೇ ತತ್ಸಮಾನ ವಿದ್ಯಾರ್ಹತೆ ಸಹ ಪರಿಗಣಿಸಲಾಗುವುದಿಲ್ಲ.

ಅರ್ಜಿ ಶುಲ್ಕದ ವಿವರಗಳು; ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ., ಪ್ರವರ್ಗ 2(ಎ), 2 (ಬಿ), 3(ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕರು 50 ರೂ. ಶುಲ್ಕ ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ. ಆದರೆ 35 ರೂ. ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು.

ಅಭ್ಯರ್ಥಿಗಳು ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು. ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡಲಾಗುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

ವಯೋಮಿತಿಯ ವಿವರಗಳು

ವಯೋಮಿತಿಯ ವಿವರಗಳು

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಆಯಾ ಹುದ್ದೆಗಳ ಮುಂದೆ ನಮೂದಿಸಿರುವ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ 35 ವರ್ಷಗಳು. ಪ್ರವರ್ಗ 2ಎ, 2 ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮ 1977ರಲ್ಲಿ ನಿರ್ದಿಷ್ಟಪಡಿಸಿರುವಂತೆ ಕೆಲವು ವಿನಾಯಿತಿಗಳನ್ನು ನೀಡಲಾಗುತ್ತದೆ. ಸದರಿ ನಿಯಮಗಳಲ್ಲಿ ಗರಿಷ್ಠ ವಯೋಮಿತಿಯನ್ನು ಅಧಿಸೂಚನೆಯಲ್ಲಿ ತಿಳಿಸಿರುವಷ್ಟರ ಮಟ್ಟಿಗೆ ಹೆಚ್ಚಿಸಲಾಗುತ್ತದೆ.

ಆಯ್ಕೆ ವಿಧಾನ ಹೇಗಿರುತ್ತದೆ?

ಆಯ್ಕೆ ವಿಧಾನ ಹೇಗಿರುತ್ತದೆ?

ಅಭ್ಯರ್ಥಿಗಳನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಉಪ ನಿಯಮ (7)ರ ಅನ್ವಯ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದೆ. ಸದರಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಹೊರತು, ಆಯ್ಕೆಗೆ ಅರ್ಹರಿರುವುದಿಲ್ಲ.

ಅರ್ಜಿ ಸಲ್ಲಿಕೆ ವಿವರಗಳು

ಅರ್ಜಿ ಸಲ್ಲಿಕೆ ವಿವರಗಳು

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ಸೈಟ್‌ನಲ್ಲಿ https://kpsc.kar.nic.in/ ಹೊಸದು ಏನು? ಬಾಕ್ಸ್‌ನಲ್ಲಿ ಕಾಣುವ ಅಧಿಸೂಚನೆ ಓದಿಕೊಳ್ಳುವ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+