ಕೆಪಿಎಸ್‌ಸಿ ನೇಮಕಾತಿ 554 ಹುದ್ದೆಗಳು, ವಿವರಗಳು

ಬೆಂಗಳೂರು, ನವೆಂಬರ್ 27 : ಕರ್ನಾಟಕ ಲೋಕಸೇವಾ ಆಯೋಗ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ನೇರ ನೇಮಕಾತಿ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 22/12/2018 ಕೊನೆಯ ದಿನವಾಗಿದೆ.

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಗ್ರೂಪ್ 'ಬಿ' ತಾಂತ್ರಿಕ ಮತ್ತು ಗ್ರೂಪ್ 'ಸಿ' ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು ಹುದ್ದೆಗಳ ಸಂಖ್ಯೆ 554.

ಅಲ್ಪಸಂಖ್ಯಾತರ ಇಲಾಖೆಯ ಅಲ್ಪ ಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಗ್ರೂಪ್ 'ಬಿ' ಹುದ್ದೆಗಳು ಮುಖ್ಯೋಪಾಧ್ಯಾಯರು. ಗ್ರೂಪ್ 'ಸಿ' ಹುದ್ದೆಗಳು ಭಾಷಾ ಶಿಕ್ಷಕರು.

ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಸಕ್ತ ಅಭ್ಯರ್ಥಿಗಳು ಸಲ್ಲಿಸಬಹುದಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು 2019ರ ಫೆಬ್ರವರಿ ತಿಂಗಳ 3, 9 ಮತ್ತು 10ನೇ ದಿನಾಂಕದಂದು ನಡೆಸಲಾಗುತ್ತದೆ. ಹುದ್ದೆ ಮತ್ತು ಅರ್ಜಿ ಸಲ್ಲಿಸುವ ಮಾಹಿತಿ ಇಲ್ಲಿದೆ.....

554 ಹುದ್ದೆಗಳು

554 ಹುದ್ದೆಗಳು

ಕೆಪಿಎಸ್‌ಸಿ ಒಟ್ಟು 554 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಗ್ರೂಪ್ 'ಬಿ' ಹುದ್ದೆಗಳು ಮುಖ್ಯೋಪಾಧ್ಯಾಯರು ಒಟ್ಟು 80. ಭಾಷಾ ಶಿಕ್ಷಕರ ಹುದ್ದೆಗಳ ಎಷ್ಟಿವೆ ಎಂಬ ಮಾಹಿತಿ ಚಿತ್ರಗಳಲ್ಲಿವೆ ನೋಡಿ.

ವಯೋಮಿತಿಯ ವಿವರಗಳು

ವಯೋಮಿತಿಯ ವಿವರಗಳು

ಅರ್ಜಿಗಳನ್ನು ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅನುಸೂಚಿಯಲ್ಲಿ ಆಯಾ ಹುದ್ದೆಗಳ ಮುಂದೆ ವಿದ್ಯಾರ್ಹತೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸುವ ನಿಗದಿ ಪಡಿಸಿರುವ ವಯೋಮಿತಿ ವಿವರಗಳು ಚಿತ್ರದಲ್ಲಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿಗೆ ಭೇಟಿ ನೀಡಿ

ಸ್ಪರ್ಧಾತ್ಮಕ ಪರೀಕ್ಷೆಗಳು

ಸ್ಪರ್ಧಾತ್ಮಕ ಪರೀಕ್ಷೆಗಳು

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 22/12/2018 ಕೊನೆಯ ದಿನವಾಗಿದೆ. ಶುಲ್ಕವನ್ನು ಪಾವತಿ ಮಾಡಲು 24/12/2018 ಕೊನೆಯ ದಿನ. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ನಡೆಯಲಿದ್ದು ಬೆಂಗಳೂರು, ಕಲಬುರಗಿ, ಶಿವಮೊಗ್ಗ, ಧಾರವಾಡ, ಮೈಸೂರು, ಬೆಳಗಾವಿ ಮತ್ತು ಮಂಗಳೂರಿನಲ್ಲಿ ಪರೀಕ್ಷೆ ನಡೆಯಲದೆ. ಪರೀಕ್ಷೆಯ ದಿನಾಂಕ 2019ರ ಫೆಬ್ರವರಿ ತಿಂಗಳ 3, 9 ಮತ್ತು 10.

ಆನ್‌ಲೈನ್ ಮೂಲಕ ಅರ್ಜಿ

ಆನ್‌ಲೈನ್ ಮೂಲಕ ಅರ್ಜಿ

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಿ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಶುಲ್ಕವನ್ನು ಯಾವುದೇ ಕಾಮನ್ ಸರ್ವೀಸ್ ಸೆಂಟರ್ (ಸಿಎಸ್‌ಸಿ) ಅಥವ ನೆಟ್ ಬ್ಯಾಂಕಿಂಗ್/ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ ಮೂಲಕ ಸಂದಾಯ ಮಾಡಬಹುದಾಗಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡದಿದ್ದರೆ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ. ಅರ್ಜಿ ಶುಲ್ಕದ ವಿವರ ಚಿತ್ರಗಳಲ್ಲಿದೆ.

ಅಧಿಸೂಚನೆ ಓದಿಕೊಳ್ಳಿ

ಅಧಿಸೂಚನೆ ಓದಿಕೊಳ್ಳಿ

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ವಿವರವಾಗಿ ಓದಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+