KPSC Recruitment: 70 ಹುದ್ದೆ, ವೇತನ 33 ರಿಂದ 62 ಸಾವಿರ

ಬೆಂಗಳೂರು, ಮಾರ್ಚ್ 20: ಕರ್ನಾಟಕ ಲೋಕಸೇವಾ ಆಯೋಗ 70 ಗ್ರೂಪ್ 'ಸಿ' ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು 22/4/2024 ರಿಂದ 21/5/2024ರ ತನಕ ಅರ್ಜಿ ಸಲ್ಲಿಸಬಹುದು.

ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು 70 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 33,450-62,600 ರೂ. ವೇತನ ನಿಗದಿ ಮಾಡಲಾಗಿದೆ.

KPSC Recruitment Apply For 70 Motor Vehicle Inspector Post

ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡುವ ಮೊದಲು ಎಲ್ಲಾ ವಿವರ ಓದಿಕೊಂಡು ತಮಗೆ ಅನ್ವಯವಾಗುವ ವಿವರಗಳನ್ನು ಮಾತ್ರ ಭರ್ತಿ ಮಾಡಬೇಕಿದೆ. ಒಮ್ಮೆ ಅರ್ಜಿ ಸಲ್ಲಿಕೆ ಮಾಡಿದ ಬಳಿಕ ಅರ್ಜಿಯಲ್ಲಿ ಮೀಸಲಾತಿ ಸೇರಿದಂತೆ ಯಾವುದೇ ವಿವರ ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಮನವಿಗಳನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ವಿದ್ಯಾರ್ಹತೆ, ಇತರ ಮಾಹಿತಿ: ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಒಮ್ಮೆ ಶುಲ್ಕವನ್ನು ಪಾವತಿ ಮಾಡಿದ ಬಳಿಕ ಯಾವುದೇ ಕಾರಣಕ್ಕೂ ಅದನ್ನು ವಾಪಸ್ ನೀಡಲಾಗುವುದಿಲ್ಲ. ಆಯೋಗ ನಡೆಸುವ ಇತರ ಪರೀಕ್ಷೆ, ನೇಮಕಾತಿಗೆ ಹೊಂದಿಕೆ ಮಾಡಿಕೊಳ್ಳುವುದಿಲ್ಲ. ಅರ್ಜಿ ಶುಲ್ಕ ಪಾವತಿ ಮಾಡದಿದ್ದರೆ ಅರ್ಜಿ ತಿರಸ್ಕಾರ ಮಾಡಲಾಗುತ್ತದೆ ಎಂದು ಸೂಚನೆ ನೀಡಲಾಗಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ ವರ್ಗದವರು 600 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕರು 50 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ಅಂಕಪಟ್ಟಿ, ಪ್ರಮಾಣ ಪತ್ರ, ಘಟಿಕೋತ್ಸವ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು. ನಿಗದಿಗಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು Must have passed SSLC Examination or Possess Equivalent Qualification.

Must possess a Diploma In Automobile Engineering of three years duration or a Diploma in Mechanical Engineering of three years duration awarded by any Institutulon recognised by the Central Government or State Government

a degree in Automobile Engineering from a University established by law or a degree in Mechanical Engineering from a University established by law.

ಇಲಾಖೆಯ ಸ್ಪಷ್ಟೀಕರಣದನ್ವಯ ಕಾನೂನಾತ್ಮಕವಾಗಿ ಸ್ಥಾಪಿಸಲಾದ ವಿಶ್ವವಿದ್ಯಾಲಯದಿಂದ B.Tech (Automobile Engineering) or B.Tech (Mechanical Engineering) ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದು.

Holding a Driving License authorizing to drive Motor Cycle with gear and Light Motor Vehicles.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಎ, 3ಬಿ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಒಬ್ಬ ಅಭ್ಯರ್ಥಿಯು ನಕಲಿ ವ್ಯಕ್ತಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವನೆಂದು ಅಥವಾ ನೇಮಕಾತಿ ಉದ್ದೇಶಗಳಿಗಾಗಿ ನಡೆಸಲಾದ ಸಂದರ್ಶನದಲ್ಲಿ ಅನುಚಿತ ಮಾರ್ಗವನ್ನು ಅನುಸರಿಸುತ್ತಿರುವನೆಂದು ಅಥವಾ ಅನುಸರಿಸಲು ಪ್ರಯತ್ನಿಸಿರುವನೆಂದು ಅಥವಾ ಅವರ ನೇಮಕಾತಿಯ ಸಂಬಂಧದಲ್ಲಿ, ಯಾವುದೇ ಇತರೆ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಭಿಸಿರುವನೆಂದು ಕಂಡುಬಂದಲ್ಲಿ ಅವನು/ ಅವಳು ಸ್ವತ: ಕ್ರಿಮಿನಲ್‌ ವ್ಯವಹಾರಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೆ ಹುದ್ದೆಯ ಸಂದರ್ಶನದಿಂದ/ ಆಯ್ಕೆಯಿಂದ ಅಭ್ಯರ್ಥಿತ್ತ್ವವನ್ನು ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ವಿಭಾಗದಲ್ಲಿ NOTIFICATION FOR POST OF MOTOR VEHICLE INSPECTOR(RPC) ಅಧಿಸೂಚನೆ ನೋಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+