ಕೆಪಿಎಸ್‌ಸಿ ನೇಮಕಾತಿ; 54 ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಫೆಬ್ರವರಿ 04 : ಕರ್ನಾಟಕ ಲೋಕಸೇವಾ ಆಯೋಗ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು 6/3/2020 ಕೊನೆಯ ದಿನವಾಗಿದೆ.

ಕೆಪಿಎಸ್ 54 ಸಹಾಯಕ ನಿಯಂತ್ರಕರು ಸಮೂಹ 'ಎ' ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರುತ್ತದೆ.

ಆಸಕ್ತ ಅಭ್ಯರ್ಥಿಗಳು 6/2/2020ರಿಂದ 6/3/2020ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಪಾವತಿಸಲು 7/3/2020 ಕೊನೆಯ ದಿನವಾಗಿದೆ. ಪೂರ್ವಭಾವಿ ಪರೀಕ್ಷೆ 24/5/2020ರಲ್ಲಿ ನಡೆಯಲಿದೆ. ಮುಖ್ಯ ಪರೀಕ್ಷೆ 2020ರ ಆಗಸ್ಟ್ ಅಥವ ಸೆಪ್ಟೆಂಬರ್‌ನಲ್ಲಿ ನಡೆಸಲಾಗುತ್ತದೆ.

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಶ್ವವಿದ್ಯಾಲಯದಿಂದ ವಾಣಿಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ (ಎಂ. ಕಾಂ) ಅಥವ ಎಂಬಿಎ ಆರ್ಥಿಕ/ಆರ್ಥಿಕ ನಿರ್ವಹಣೆ ಅಥವ ಎಂಬಿಎ/ಎ.ಕಾಂ (ಅಂತರಾಷ್ಟ್ರೀಯ ವ್ಯವಹಾರ/ಆರ್ಥಿಕ ವಿಶ್ಲೇಷಣೆ ಅಥವ ಯುಜಿಸಿ ಮೇಲ್ಕಂಡ ಸ್ನಾತಕೋತ್ತರ ಪದವಿಗೆ ತತ್ಸಮಾನವೆಂದು ಪರಿಗಣಿಸಿ ಅಧಿಸೂಚಿಸಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

KPSC Recruitment Apply For Assistant Controller Post

ಅಭ್ಯರ್ಥಿಗಳು ಮೇಲ್ಕಂಡ ಯಾವುದಾದರೂ ಪರೀಕ್ಷೆಗೆ ಹಾಜರಾಗಿದ್ದಲ್ಲಿ ಮತ್ತು ಆ ಪರೀಕ್ಷೆಯಲ್ಲಿ ಉತ್ತೀರ್ಣರಾದಲ್ಲಿ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಶೈಕ್ಷಣಿಕವಾಗಿ ಅರ್ಹರಾಗುವುದಾದಲ್ಲಿ ಆದರೆ, ಆ ಪರೀಕ್ಷೆಯ ಫಲಿತಾಂಶ ಪ್ರಕಟಗೊಳ್ಳದೇ ಇದ್ದಲ್ಲಿ ಅಂತಹ ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆಗೆ ಪ್ರವೇಶ ಪಡೆಯಲು ಅರ್ಹರಾಗುತ್ತಾರೆ.

ಮುಖ್ಯ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು ಎಂದು ಆಯೋಗವು ಘೋಷಿಸಿದ ಅರ್ಹರಾದ ಎಲ್ಲಾ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ಸಂಬಂಧಿಸಿದ ವಿದ್ಯಾರ್ಹತಾ ಪರೀಕ್ಷೆಯನ್ನು ಪಾಸು ಮಾಡಿರುವ ಬಗ್ಗೆ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡತಕ್ಕದ್ದು. ತಪ್ಪಿದಲ್ಲಿ ಪ್ರವೇಶ ಪರೀಕ್ಷೆಗೆ ಅವಕಾಶವಿಲ್ಲ.

ವಯೋಮಿತಿ ವಿವರ: ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 21 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದವರಿಗೆ 35, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38, ಎಸ್‌ಸಿ/ಎಸ್‌ಟಿ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದವರಿಗೆ 600 ರೂ., ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕರಿಗೆ 50 ರೂ. ಶುಲ್ಕ ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಶುಲ್ಕದ ಜೊತೆಗೆ 35 ರೂ. ಪ್ರೊಸೆಸಿಂಗ್ ಶುಲ್ಕವನ್ನು ಪಾವತಿಸಬೇಕು.

ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+