ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಉದ್ಯೋಗ: ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಫೆಬ್ರವರಿ 22: ಕರ್ನಾಟಕದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಗ್ರೂಪ್ ಬಿ ವೃಂದದ ಮೊದಲ ಶ್ರೇಣಿ ಸಹಾಯಕ ಅಭಿಯಂತರರು(ಅಸಿಸ್ಟೆಂಟ್ ಇಂಜಿನಿಯರ್) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 188 ಸಹಾಯಕ ಅಭಿಯಂತರರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ಪರಿಷ್ಕೃತ ಪ್ರಸ್ತಾವನೆಯಂತೆ ಕರ್ನಾಟಕ ನಾಗರಿಕ ಸೇವಾ ನಿಯಮಗಳು 2021ರನ್ವಯ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊಡಸಿಲಾಗಿದೆ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ 249 ಹುದ್ದೆಗಳಿವೆಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ 249 ಹುದ್ದೆಗಳಿವೆ

ಫೆಬ್ರವರಿ 28ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಮಾರ್ಚ್ 30ರೊಳಗೆ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿದೆ. ಅರ್ಜಿ ಸಲ್ಲಿಕೆಯ ಶುಲ್ಕ ಪಾವತಿಸಲು ಮಾರ್ಚ್ 31, 2022 ಕೊನೆಯ ದಿನವಾಗಿರುತ್ತದೆ.

ನೇಮಕಾತಿ ವಿಧಾನ?

ನೇಮಕಾತಿ ವಿಧಾನ?

ಗ್ರೂಪ್ ಬಿ ವೃಂದದ ಗ್ರೇಡ್ 1 ಸಹಾಯಕ ಅಭಿಯಂತರರ ಹುದ್ದೆಗಳನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪರಿಪ್ಕೃತ ಪ್ರಸ್ತಾವನೆಯಂತೆ ಕರ್ನಾಟಕ ನಾಗರಿಕ ಸೇವಾ ನಿಯಮಗಳು 2021ರ ಉಪ ನಿಯಮ 5(ಇ) ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನಗಳಲ್ಲಿ ಗಳಿಸಿದ ಗರಿಷ್ಠ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುತ್ತದೆ.

ಅರ್ಜಿಯ ಶುಲ್ಕ ಪಾವತಿ ಬಗ್ಗೆ ಮಾಹಿತಿ

ಅರ್ಜಿಯ ಶುಲ್ಕ ಪಾವತಿ ಬಗ್ಗೆ ಮಾಹಿತಿ

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ನಂತರದಲ್ಲಿ 600 ರೂಪಾಯಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ. ಅದೇ ರೀತಿ ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 300 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ ಶುಲ್ಕ ವಿಧಿಸಲಾಗುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆದರೆ ಪ್ರಕ್ರಿಯೆ ಶುಲ್ಕ 35 ರೂಪಾಯಿ ಅನ್ನು ಎಲ್ಲಾ ವರ್ಗದ ಅಭ್ಯರ್ಥಿಗಳು ಪಾವತಿಸುವುದು ಕಡ್ಡಾಯವಾಗಿರುತ್ತದೆ.

ಎನ್‌ಎಚ್‌ಎಐ ನೇಮಕಾತಿ; 15 ಜನರಲ್ ಮ್ಯಾನೇಜರ್‌ ಹುದ್ದೆಗೆ ಅರ್ಜಿ ಹಾಕಿಎನ್‌ಎಚ್‌ಎಐ ನೇಮಕಾತಿ; 15 ಜನರಲ್ ಮ್ಯಾನೇಜರ್‌ ಹುದ್ದೆಗೆ ಅರ್ಜಿ ಹಾಕಿ

ವಯೋಮಿತಿ ಮತ್ತು ಶೈಕ್ಷಣಿಕ ವಿದ್ಯಾರ್ಹತೆ

ವಯೋಮಿತಿ ಮತ್ತು ಶೈಕ್ಷಣಿಕ ವಿದ್ಯಾರ್ಹತೆ

ಕರ್ನಾಟಕ ಸರ್ಕಾರ ಗುರುತಿಸಿರುವ ವಿಶ್ವವಿದ್ಯಾಲಯದಿಂದ ಸಿವಿಲ್ ಅಥವಾ ಎನ್ವಿರಾನ್ಮೆಂಟಲ್ ವಿಷಯದಲ್ಲಿ ಬಿ.ಇ ಪದವಿಯನ್ನು ಪಡೆದುಕೊಂಡಿರುವುದು ಕಡ್ಡಾಯವಾಗಿರುತ್ತದೆ. ಇದರ ಹೊರತಾಗಿ ಅನ್ಯ ರಾಜ್ಯ ಮತ್ತು ಸರ್ಕಾರ ಗುರುತಿಸಿರುವ ವಿಶ್ವವಿದ್ಯಾಲಯಗಳಲ್ಲಿ ಪದವಿಯನ್ನು ಪರಿಗಣಿಸಲಾಗುವುದಿಲ್ಲ. ಇದರ ಜೊತೆಗೆ ಅರ್ಜಿ ಸಲ್ಲಿಸಲು ಆಯೋಗ ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಈ ಕೆಳಗೆ ಉಲ್ಲೇಖಿಸಿದ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಛ ವಯೋಮಿತಿಯನ್ನು ಮೀರಿರಬಾರದು.- ಕನಿಷ್ಠ ವಯೋಮಿತಿ 18 ವರ್ಷ

- ಗರಿಷ್ಠ ವಯೋಮಿತಿ 35 ವರ್ಷ

- ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷ

- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ

ವೇತನ ಎಷ್ಟು?

ವೇತನ ಎಷ್ಟು?

ಕರ್ನಾಟಕದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಗ್ರೂಪ್ ಬಿ ವೃಂದದ ಮೊದಲ ಶ್ರೇಣಿ ಸಹಾಯಕ ಅಭಿಯಂತರರು(ಅಸಿಸ್ಟೆಂಟ್ ಇಂಜಿನಿಯರ್) ಹುದ್ದೆಗೆ 43,100 ರೂಪಾಯಿಯಿಂದ 83900 ರೂಪಾಯಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ವೆಬ್ ಸೈಟ್ http://kpsc.kar.nic.in/ ಕ್ಲಿಕ್ ಮಾಡಿರಿ.

Recommended Video

ಐಪಿಎಲ್ ಯಾವಾಗ ಶುರು ಆಗತ್ತೆ ಗೊತ್ತಾ! | Oneindia Kannada

English summary
KPSC recruitment: Apply for B Group Grade 1 Assistant Engineers to Rural Drinking Water and Sanitation Department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X