ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್‌ಸಿ ನೇಮಕಾತಿ; ಕಾರ್ಮಿಕ ನಿರೀಕ್ಷಕರ ಹುದ್ದೆಗಳು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 03; ಕರ್ನಾಟಕ ಲೋಕಸೇವಾ ಆಯೋಗ (KPSC) ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ 30/10/2022 ಆಗಿದೆ.

ಕೆಪಿಎಸ್‌ಸಿ ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ನಿಯಮಗಳು ಹಾಗೂ ತಿದ್ದುಪಡಿ ನಿಯಮ 2022ರನ್ವಯ ಹೈದರಾಬಾದ್ ಕರ್ನಾಟಕ ವೃಂದ ಗೂಪ್ 'ಸಿ' ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಗ್ರಾಮ ಪಂಚಾಯಿತಿ ನೇಮಕಾತಿ; ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ ಗ್ರಾಮ ಪಂಚಾಯಿತಿ ನೇಮಕಾತಿ; ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

ಅರ್ಜಿಗಳನ್ನು 1-10-2022 ರಿಂದ 30-10-2022ರ ತನಕ ಸಲ್ಲಿಸಬೇಕು. ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 31-10-2022. ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು.

ಕರ್ನಾಟಕ; ಒಟ್ಟು ಮಂಜೂರಾಗಿರುವ, ಖಾಲಿ ಇರುವ ಹುದ್ದೆಗಳ ವಿವರ ಕರ್ನಾಟಕ; ಒಟ್ಟು ಮಂಜೂರಾಗಿರುವ, ಖಾಲಿ ಇರುವ ಹುದ್ದೆಗಳ ವಿವರ

ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುತ್ತದೆ. ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರ ಇತರೆ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಸಲ್ಲಿಸಬೇಕು.

KPSC Recruitment; ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳುKPSC Recruitment; ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ 6

ಒಟ್ಟು ಹುದ್ದೆಗಳ ಸಂಖ್ಯೆ 6

ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು 6 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನಿನಡಿ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 33,450-62,600 ರೂ. ವೇತನ ನಿಗದಿ ಮಾಡಲಾಗಿದೆ.

ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಹಾಗೂ ತಿದ್ದುಪಡಿ ನಿಯಮ 2022ರ ಉಪನಿಯಮ 6(2)(ಎ) ರನ್ವಯ ಪದವಿ ವಿದ್ಯಾರ್ಹತೆಗಳು ಅಗತ್ಯವಿರುವ ಗ್ರೂಪ್ 'ಸಿ' ಹುದ್ದೆಗಳಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ, ಪ್ರತಿಯೊಂದು ಪತ್ರಿಕೆಯು ಗರಿಷ್ಟ 100 ಅಂಕಗಳೊಂದಿಗೆ ಲಿಖಿತ ಪ್ರಶ್ನೆಗಳನ್ನು ಒಳಗೊಂಡಿದ್ದು ವಸ್ತುನಿಷ್ಠ ಬಹುಆಯ್ಕೆ ಮಾದರಿಯಲ್ಲಿರುತ್ತವೆ. ಈ ಎರಡು ಪತ್ರಿಕೆಗಳಲಿ ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳನ್ನು ಪರಿಗಣಿಸಿ ಅಭ್ಯರ್ಥಿಯು ಗಳಿಸುವ ಒಟ್ಟು ಅಂಕಗಳನ್ನು ಪರಿಗಣಿಸಲಾಗುತ್ತದೆ.

ವಯೋಮಿತಿಯ ವಿವರಗಳು

ವಯೋಮಿತಿಯ ವಿವರಗಳು

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಆಯಾ ಹುದ್ದೆಗಳ ಮುಂದೆ ನಮೂದಿಸಿರುವ ಕನಿಷ್ಟ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಅರ್ಜಿ ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 18 ವರ್ಷಗಳು.

ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35 ವರ್ಷಗಳು. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 38 ವರ್ಷಗಳು. ಪ.ಜಾ/ ಪ. ಪಂ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು. ಹುದ್ದೆಗಳಿಗೆ ನಿಗದಿಪಡಿಸಿರುವ ವಯೋಮಿತಿ ವಿದ್ಯಾರ್ಹತೆ ಮೀಸಲಾತಿ ಇತ್ಯಾದಿಗಳಿಗನುಗುಣವಾಗಿ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ. ತಪ್ಪು ಮಾಹಿತಿ ನೀಡಿದಲ್ಲಿ ಅಂತಹ ಅಭ್ಯರ್ಥಿಗಳನ್ನು ಆಯೋಗವು ನಡೆಸುವ ಯಾವುದೇ ನೇಮಕಾತಿ, ಪರೀಕ್ಷೆಗಳಿಂದ 3 ವರ್ಷಕ್ಕೆ ಡಿಬಾರ್ ಮಾಡಲಾಗುವುದು.

ಆಯ್ಕೆ ವಿಧಾನದ ಮಾಹಿತಿ

ಆಯ್ಕೆ ವಿಧಾನದ ಮಾಹಿತಿ

ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಉಪನಿಯಮ (7) ರನ್ವಯ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಕಡ್ಡಾಯವಾಗಿದ್ದು ಸದರಿ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಹೊರತು, ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪರೀಕ್ಷೆಯು ಗರಿಷ್ಯ 150 ಅಂಕಗಳ ಒಂದು ಪ್ರಶ್ನೆಪತ್ರಿಕೆಯನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಟ 50 ಅಂಕಗಳನ್ನು ಗಳಿಸಬೇಕು.

ಈ ಪ್ರಶ್ನೆ ಪತ್ರಿಕೆಯನ್ನು SSLC ಹಂತದಲ್ಲಿನ ಪ್ರಥಮಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗುವುದು. ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹರಾದ ನಂತರ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ)ನಿಯಮಗಳು 2021 ಹಾಗೂ ತಿದ್ದುಪಡಿ ನಿಯಮ 2022 ರ ಉಪ ನಿಯಮ 5(ಡಿ)ರಂತ ಸ್ಮರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ಮಯ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕದ ಮಾಹಿತಿ

ಅರ್ಜಿ ಶುಲ್ಕದ ಮಾಹಿತಿ

ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 300 ರೂ. ಮತ್ತು ಮಾಜಿ ಸೈನಿಕರಿಗೆ 50 ರೂ. ಶುಲ್ಕವಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ -1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ. 35 ರೂ. ಪ್ರಕ್ರಿಯೆ ಶುಲ್ಕವನ್ನು ಎಲ್ಲ ವರ್ಗದ ಅಭ್ಯರ್ಥಿಗಳು ಕಡ್ಡಾಯವಾಗಿ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವ ಮುನ್ನ ಎಲ್ಲಾ ಮಾಹಿತಿಯು ಸರಿಯಾಗಿದೆ ಎಂದು ಖಚಿತಪಡಿಸಿಕೊಂಡು ದೃಢೀಕರಣ ನೀಡುವಾಗ ಎಚ್ಚರ ವಹಿಸಬೇಕು. ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ಮಾಡಲಾಗುವುದಿಲ್ಲ. ಬೇರೆ ಪರೀಕ್ಷೆಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ.

ಸಹಾಯವಾಣಿ ಸಂಖ್ಯೆ ವಿಳಾಸ

ಸಹಾಯವಾಣಿ ಸಂಖ್ಯೆ ವಿಳಾಸ

ಆಯೋಗವು ಅಭ್ಯರ್ಥಿಗಳೊಂದಿಗೆ ಯಾವುದೇ ಪತ್ರ ವ್ಯವಹಾರವನ್ನು ನಡೆಸುವುದಿಲ್ಲ. ವಿಳಾಸ ಬದಲಾವಣೆ ಇಲಿ. ಅಭ್ಯರ್ಥಿಗಳು ಲಿಖಿತ ಮನವಿಯ ಮೂಲಕ ಆಯೋಗದ ಗಮನಕ್ಕೆ ತರತಕ್ಕದ್ದು, ಈ ವಿಳಾಸ ಬದಲಾವಣೆಯನ್ನು ಪರಿಗಣಿಸಲು ಆಯೋಗವು ಪ್ರಯತ್ನಿಸುವುದು, ಆದಾಗೂ ಈ ವಿಚಾರದಲ್ಲಿ ಆಯೋಗವು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ಸೈಟ್ ನೋಡಬಹುದಾಗಿದೆ. ದೂರವಾಣಿ ಸಂಖ್ಯೆಗಳು080-305749571 30574901 0821-2545956 0831-2475345 08472-227944 08182-228099

English summary
Karnataka Public Service Commission (KPSC) invited applications for the post of labour inspector. Candidates can apply till 30/10/2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X