ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್‌ಸಿ ನೇಮಕಾತಿ; 990 ಹುದ್ದೆಗಳಿಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಜುಲೈ 31: ಕರ್ನಾಟಕ ಲೋಕಸೇವಾ ಆಯೋಗ ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್ 'ಬಿ' ಮತ್ತು ಗ್ರೂಪ್ 'ಸಿ' ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 16/9/2020 ಕೊನೆಯ ದಿನವಾಗಿದೆ.

ಗ್ರೂಪ್ 'ಬಿ'ನಲ್ಲಿ ಲೋಕೋಪ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಗ್ರೇಡ್ -1) (ಸಿವಿಲ್), ಗ್ರೂಪ್ 'ಸಿ' ವೃಂದದಲ್ಲಿ ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳ ವರ್ಗೀಕರಣವು ಅನಿವಾರ್ಯ ಸಂದರ್ಭದಲ್ಲಿ ಬದಲಾವಣೆಗೆ ಒಳಪಟ್ಟಿರುತ್ತದೆ.

NIRDPR ನೇಮಕಾತಿ 510 ಹುದ್ದೆಗಳಿವೆ, ಅರ್ಜಿ ಹಾಕಿ NIRDPR ನೇಮಕಾತಿ 510 ಹುದ್ದೆಗಳಿವೆ, ಅರ್ಜಿ ಹಾಕಿ

ಅರ್ಜಿಗಳನ್ನು ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ, ಒಂದೇ ಶುಲ್ಕವನ್ನು ಪಾವತಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 SBI Recruitment 2020: ಎಸ್‌ಬಿಐನಲ್ಲಿ 3,850 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ SBI Recruitment 2020: ಎಸ್‌ಬಿಐನಲ್ಲಿ 3,850 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಆಸಕ್ತ ಅಭರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಒಟ್ಟು 3 ಹಂತಗಳಿವೆ. ಅರ್ಜಿ ಶುಲ್ಕಗಳನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು. ಪಾವತಿ ಮಾಡಿದ ಶುಲ್ಕಗಳನ್ನು ವಾಪಸ್ ಮಾಡಲಾಗುವುದಿಲ್ಲ. ಶುಲ್ಕ ಪಾವತಿ ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.

ಹಾವೇರಿ; ವಿವಿಧ ಹುದ್ದೆಗಳಿಗೆ ಆಗಸ್ಟ್ 3ರಂದು ನೇರ ಸಂದರ್ಶನ ಹಾವೇರಿ; ವಿವಿಧ ಹುದ್ದೆಗಳಿಗೆ ಆಗಸ್ಟ್ 3ರಂದು ನೇರ ಸಂದರ್ಶನ

990 ಹುದ್ದೆಗಳು

990 ಹುದ್ದೆಗಳು

ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ 'ಬಿ' ನಲ್ಲಿ ಸಹಾಯಕ ಇಂಜಿನಿಯರ್ (ಗ್ರೇಡ್ -1) (ಸಿವಿಲ್) ಉಳಿಕೆ ವೃಂದ 600, ಹೈ-ಕರ್ನಾಟಕ ವೃಂದ 60 ಸೇರಿ 600 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ಗ್ರೂಪ್ 'ಸಿ' ವೃಂದದಲ್ಲಿ ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆ ಭರ್ತಿ ಮಾಡಲಾಗುತ್ತಿದೆ. ಉಳಿಕೆ ವೃಂದ 325, ಹೈ-ಕರ್ನಾಟಕ 5 ಸೇರಿ ಒಟ್ಟು 330 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ವಯೋಮಿತಿಗಳ ವಿವರ

ವಯೋಮಿತಿಗಳ ವಿವರ

ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ ಮೀರಿರಬಾರದು ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ. ಕನಿಷ್ಠ ವಯೋಮಿತಿ 18, ಗರಿಷ್ಠ ವಯೋಮಿತಿ 35 ವರ್ಷಗಳು.

ಪ್ರವರ್ಗ -2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪ. ಜಾ., ಪ.ಪಂ, ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಶೈಕ್ಷಣಿಕ ವಿದ್ಯಾರ್ಹತೆ

ಶೈಕ್ಷಣಿಕ ವಿದ್ಯಾರ್ಹತೆ

ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಆಯಾ ಹುದ್ದೆಗಳ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದಿದ್ದರೂ ಪರಿಗಣಿಸಲಾಗುವುದಿಲ್ಲ.

ಅರ್ಜಿ ಶುಲ್ಕದ ವಿವರ

ಅರ್ಜಿ ಶುಲ್ಕದ ವಿವರ

ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪ್ರವರ್ಗ (2)ಎ, (2)ಬಿ, 3(ಎ), 3(ಬಿ) ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿಗಳನ್ನು ಸಲ್ಲಿಸಿದ ನಂತರ ಅರ್ಜಿಯ ಪಕ್ಕದಲ್ಲಿ 'ಪೇ ನೌ' ಎಂಬ ಲಿಂಕ್ ಕಾಣಿಸುತ್ತದೆ. ಅಲ್ಲಿ ಕ್ಲಿಕ್ ಮಾಡುವ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 7406086807/6363754183.

ಸ್ಪರ್ಧಾತ್ಮಕ ಪರೀಕ್ಷೆ ವಿಧಾನ

ಸ್ಪರ್ಧಾತ್ಮಕ ಪರೀಕ್ಷೆ ವಿಧಾನ

ಸ್ಪರ್ಧಾತ್ಮಕ ಪರೀಕ್ಷೆಯು ವಸ್ತು ನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಇದ್ದು ಋಣಾತ್ಮಕ ಮೌಲ್ಯ ಮಾಪನವಿರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ ಪ್ರಶ್ನೆಗೆ ನಿಗದಿಪಡಿಸಿದ ಅಂಕಗಳ 0.25 ರಷ್ಟು ಅಂಕಗಳನ್ನು ಕಳೆಯಲಾಗುತ್ತದೆ.

ಸಾಮಾನ್ಯ ಪತ್ರಿಕೆ 200 ಅಂಕಗಳು, ನಿರ್ದಿಷ್ಟ ಪತ್ರಿಕೆ 200 ಅಂಕಗಳು. ಗ್ರೂಪ್ 'ಸಿ' ಹುದ್ದೆಗಳಿಗೆ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಮೇರೆಗೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳ ಅನ್ವಯ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Karnataka Public Service Commission (KPSC) invited applications for PWD department engineer posts. Candidates can apply online applications till 16th September 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X