ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್‌ಸಿ ನೇಮಕಾತಿ; 925 ಹುದ್ದೆಗಳ ಭರ್ತಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 13: ಕರ್ನಾಟಕ ಲೋಕಸೇವಾ ಆಯೋಗ ಸಹಾಯಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 15 ದಿನಗಳ ತನಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ಕರ್ನಾಟಕ ಸರ್ಕಾರ ವಿಶೇಷ ನೇಮಕಾತಿ ನಿಯಮ ಮತ್ತು ಸಾಮಾನ್ಯ ನೇಮಕಾತಿ ನಿಯಮಗಳಡಿ ಗ್ರೂಪ್ 'ಬಿ' ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಗ್ರೂಪ್ 'ಸಿ' ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ಕೆಪಿಎಸ್‌ಸಿ ನೇಮಕಾತಿ; 1112 ಎಫ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನಕೆಪಿಎಸ್‌ಸಿ ನೇಮಕಾತಿ; 1112 ಎಫ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನ

600 ಸಹಾಯಕ ಇಂಜಿನಿಯರ್, 325 ಕಿರಿಯ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯಪತ್ರದ ಮೂಲಕ 10/2/2020ರಂದು ಅಧಿಸೂಚನೆ ಪ್ರಕಟಗೊಂಡಿದ್ದು, 15 ದಿನದಲ್ಲಿ ಆಕ್ಷೇಪಣೆ ಸಲ್ಲಿಸಬಹುದು.

ಕೆಪಿಎಸ್‌ಸಿ ನೇಮಕಾತಿ; ದೆಹಲಿ ಕರ್ನಾಟಕ ಭವನದಲ್ಲಿ ಕೆಲಸಕೆಪಿಎಸ್‌ಸಿ ನೇಮಕಾತಿ; ದೆಹಲಿ ಕರ್ನಾಟಕ ಭವನದಲ್ಲಿ ಕೆಲಸ

ಆಕ್ಷೇಪಣೆಗಳನ್ನು ಸ್ವೀಕಾರ ಮಾಡಿದ ಬಳಿಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಕೆಪಿಎಸ್‌ಸಿ ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ವಿವರಗಳು ಚಿತ್ರದಲ್ಲಿವೆ.

ಕರ್ನಾಟಕದ 3 ಸಾವಿರ ಉದ್ಯೋಗಕ್ಕೆ ಕತ್ತರಿ ಹಾಕಿದ ಕೇಂದ್ರಕರ್ನಾಟಕದ 3 ಸಾವಿರ ಉದ್ಯೋಗಕ್ಕೆ ಕತ್ತರಿ ಹಾಕಿದ ಕೇಂದ್ರ

ಆಕ್ಷೇಪಣೆ ಸಲ್ಲಿಸಲು ವಿಳಾಸ

ಆಕ್ಷೇಪಣೆ ಸಲ್ಲಿಸಲು ವಿಳಾಸ

ಇಂಜಿನಿಯರ್ ನೇಮಕಾತಿ ಕುರಿತು ಆಕ್ಷೇಪಣೆ ಸಲ್ಲಿಸಲು ವಿಳಾಸ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕರ್ನಾಟಕ ಸರ್ಕಾರ, ಲೊಕೋಪಯೋಗಿ, ಬಂದರು ಮತ್ತು ಒಳನಾಡು ನೀರು ಸರಬರಾಜು ಇಲಾಖೆ, ವಿಕಾಸಸೌಧ ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು 560001.

ಒಟ್ಟು 925 ಹುದ್ದೆಗಳು

ಒಟ್ಟು 925 ಹುದ್ದೆಗಳು

ಕರ್ನಾಟಕ ಲೋಕಸೇವಾ ಆಯೋಗ ಅಸಿಸ್ಟೆಂಟ್ ಇಂಜಿನಿಯರ್ (ಗ್ರೇಡ್ -1) 600 ಹುದ್ದೆಗಳು, ಜ್ಯೂನಿಯರ್ ಇಂಜಿನಿಯರ್ 325 ಸೇರಿ ಒಟ್ಟು 925 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ವಿದ್ಯಾರ್ಹತೆ

ವಿದ್ಯಾರ್ಹತೆ

ಸಹಾಯಕ ಮತ್ತು ಕಿರಿಯ ಇಂಜಿನಿಯರ್‌ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವರು ಬಿಇ/ಬಿಟೆಕ್ ಪದವಿಗಳನ್ನು ಹುದ್ದೆಗಳಿಗೆ ಅಗತ್ಯ ಇರುವ ಬ್ರಾಂಚ್‌ಗಳಲ್ಲಿ ಪಡೆದಿರಬೇಕು ಎಂದು ನೇಮಕಾತಿ ಆದೇಶ ಹೇಳಿದೆ.

ವಯೋಮಿತಿ ವಿವರ

ವಯೋಮಿತಿ ವಿವರ

ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ 21 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 35 ವರ್ಷಗಳು. ಅರ್ಹರಿಗೆ ವಯೋಮಿತಿಯಲ್ಲಿ ಸಡಿಲಿಕೆ ಮಾಡುಲಾಗುತ್ತದೆ ಎಂದು ತಿಳಿಸಲಾಗಿದೆ.

English summary
Karnataka Public Service Commission (KPSC) issued notification for the assistant engineer and junior engineer post. People can submit objection till February 25, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X