KPSC Recruitment; 97 ಹುದ್ದೆ, 52 ರಿಂದ 83 ಸಾವಿರ ವೇತನ

ಬೆಂಗಳೂರು, ಮಾರ್ಚ್ 04: ಕರ್ನಾಟಕ ಲೋಕಸೇವಾ ಆಯೋಗ ಕರ್ನಾಟಕ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 17/4/2024 ಕೊನೆಯ ದಿನವಾಗಿದೆ.

ಕರ್ನಾಟಕ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಗ್ರೂಪ್-ಎ (ಉಳಿಕೆ ಮೂಲ ವೃಂದ) ಸಹಾಯಕ ನಿಯಂತ್ರಕರು 43 ಹುದ್ದೆ. ಗ್ರೂಪ್-ಬಿ (ಉಳಿಕೆ ಮೂಲ ವೃಂದ) ಲೆಕ್ಕಪರಿಶೋಧನಾಧಿಕಾರಿ54 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

KPSC Recruitment Assistant Controller And Audit Officer Post

ಈ ಹುದ್ದೆಗಳಿಗೆ 18/3/2024 ರಿಂದ 17/4/2024ರ ತನಕ ಅರ್ಜಿ ಸಲ್ಲಿಸಬಹುದು. ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ದಿನಾಂಕ 2/6/2024 ಎಂದು ನಿಗದಿ ಮಾಡಲಾಗಿದೆ. ಸಹಾಯಕ ನಿಯಂತ್ರಕರು ಹುದ್ದೆಗೆ 52,650-97,100 ರೂ. ಮತ್ತು ಲೆಕ್ಕಪರಿಶೋಧನಾಧಿಕಾರಿ ಹುದ್ದೆಗೆ 43,100-83,900 ರೂ. ವೇತನ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ ವಿವರ: ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ವಿವರ. ಕಾನೂನು ರೀತ್ಯಾ ಸ್ಥಾಪಿಸಲ್ಪಟ್ಟಿರುವ ವಿಶ್ವವಿದ್ಯಾಲಯದಿಂದ ವಾಣಿಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ (ಎಂ.ಕಾಂ.) ಅಥವಾ ಎಂ.ಬಿ.ಎ. (ಆರ್ಥಿಕ) ಅಥವಾ ಎಂ.ಬಿ.ಎ. (ಆರ್ಥಿಕ ನಿರ್ವಾಹಣೆ) ಅಥವಾ ಎಂ.ಬಿ.ಎ./ ಎಂ.ಕಾಂ (ಆರ್ಥಿಕ ವಿಶ್ಲೇಷಣೆ) ಅಥವಾ ಯು.ಜಿ.ಸಿ ಯು 'ಆರ್ಥಿಕ' ಎಂಬುದನ್ನು ಒಂದು ವಿಷಯವನ್ನಾಗಿ ಅಭ್ಯಸಿಸಿರುವ ಕುರಿತು ಅಧಿಸೂಚನೆ ಹೊರಡಿಸಿರುವ ಯಾವುದೇ ಇತರ ಸ್ನಾತಕೋತ್ತರ ಪದವಿಯ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು ಅಥವಾ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಸದಸ್ಯರು ಅಥವಾ ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಅಸೋಸಿಯೇಟ್ ಸದಸ್ಯರು ಆಗಿರತಕ್ಕದ್ದು.

ಪರಂತು, ಅಭ್ಯರ್ಥಿಗಳು ಮೇಲ್ಕಂಡ ಯಾವುದಾದರೂ ಪರೀಕ್ಷೆಗೆ ಹಾಜರಾಗಿದ್ದಲ್ಲಿ ಮತ್ತು ಆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಲ್ಲಿ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಶೈಕ್ಷಣಿಕವಾಗಿ ಅರ್ಹರಾಗುವುದಾದಲ್ಲಿ ಆದರೆ ප ಪರೀಕ್ಷೆಯ ಫಲಿತಾಂಶ ಪ್ರಕಟಗೊಳ್ಳದೇ ಇದ್ದಲ್ಲಿ, ಅಂತಹ ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆಗೆ ಪ್ರವೇಶ ಪಡೆಯಲು ಅರ್ಹರಾಗುತ್ತಾರೆ.

ಮುಖ ಪರೀಕ್ಷೆಯನ್ನು ತೆಗೆದುಕೊಳ್ಳಬಹುದೆಂದು ಆಯೋಗವು ಘೋಷಿಸಿದ ಅರ್ಹರಾದ ಎಲ್ಲಾ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ಸಂಬಂಧಿಸಿದ ವಿದ್ಯಾರ್ಹತಾ ಪರೀಕ್ಷೆಯನ್ನು ಪಾಸು ಮಾಡಿರುವ ಬಗ್ಗೆ ಪ್ರಮಾಣ ಪತ್ರವನ್ನು ಅಪ್‌ಲೋಡ್ ಮಾಡತಕ್ಕದು, ತಪ್ಪಿದಲ್ಲಿ ಅಂತಹ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆಗೆ ಪ್ರವೇಶ ನೀಡುವುದಿಲ್ಲ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ ವಯೋಮಿತಿ 21 ವರ್ಷ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 600 ರೂ., ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ., ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆ ನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದು. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು.

ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರ/ ಇತರೆ ಪ್ರಮಾಣ ಪತ್ರಗಳನ್ನು ತಮ್ಮ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಕಡ್ಡಾಯವಾಗಿ ಪಡೆದಿಟ್ಟುಕೊಂಡು ಸದರಿ ದಾಖಲೆಗಳನ್ನು ಅರ್ಜಿ ಸಲ್ಲಿಸುವಾಗ ಅಪ್‌ಲೋಡ್ ಮಾಡತಕ್ಕದು (ದಾಖಲೆಗಳು ಸ್ಪಷ್ಟವಾಗಿರಬೇಕು) ತಪ್ಪಿದಲ್ಲಿ ಅವರ ಮೀಸಲಾತಿ/ ಅಭ್ಯರ್ಥಿತ್ವವನ್ನು ತಿರಸ್ಕರಿಸಲಾಗುತ್ತದೆ.

ಭಾವಚಿತ್ರ/ ಸಹಿ / ವಯೋಮಿತಿ/ ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ UPI ಮೂಲಕ ಸಂದಾಯ ಮಾಡಬಹುದಾಗಿರುತ್ತದೆ. ಶುಲ್ಕವನ್ನು ಪಾವತಿಸದ ಹಾಗೂ ದಾಖಲೆಗಳನ್ನು/ ಭಾವಚಿತ್ರ ಸಹಿಯನ್ನು ಅಪ್ಲೋಡ್ ಮಾಡದೇ ಇರುವ/ ಅಷ್ಟ ದಾಖಲೆಗಳನ್ನು ಅಪ್‌ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆಗಳು ಕೇಂದ್ರ ಕಛೇರಿಯ ಮಾಹಿತಿ ಕೇಂದ್ರ 080-30574957/30574901/ 080-30574935/ 080-30574927/ 22261092.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+