KPSC Recruitment; ವಾಣಿಜ್ಯ ತೆರಿಗೆ ಪರಿವೀಕ್ಷಕ, 230 ಹುದ್ದೆ, ವಿವರ
ಬೆಂಗಳೂರು, ಆಗಸ್ಟ್ 29; ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ನಿಯಮಗಳು ಹಾಗೂ ತಿದ್ದುಪಡಿ ನಿಯಮ 2022ರನ್ವಯ ಉಳಿಕೆ ಮೂಲ ವೃಂದದ ಗ್ರೂಪ್ 'ಸಿ' ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ವಾಣಿಜ್ಯ ತೆರಿಗೆಗಳ ಇಲಾಖೆಯ ವಾಣಿಜ್ಯ ತೆರಿಗೆ ಪರಿವೀಕ್ಷಕ 230 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 1/9/2023 ರಿಂದ 30/9/2023ರ ತನಕ ಆನ್‌ಲೈನ್ ಮೂಲಕ ಮಾತ್ರ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕಿದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.
ದಾಖಲೆಗಳ ಪರಿಶೀಲನೆ ಮಾಡುವುದರಿಂದ ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಮೀಸಲಾತಿ ಪ್ರಮಾಣ ಪತ್ರ/ ಇತರೆ ಪ್ರಮಾಣ ಪತ್ರಗಳನ್ನು ಅಭ್ಯರ್ಥಿ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಕಡ್ಡಾಯವಾಗಿ ಪಡೆದಿಟ್ಟುಕೊಂಡು, ಅರ್ಜಿ ಸಲ್ಲಿಸುವಾಗ ಅಪ್‌ಲೋಡ್ ಮಾಡತಕ್ಕದು ಎಂದು ಸೂಚಿಸಲಾಗಿದೆ.
ವಿದ್ಯಾರ್ಹತೆ ಮತ್ತು ವಯೋಮಿತಿ; ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದರೂ ಸಹ ಪರಿಗಣಿಸಲಾಗುವುದಿಲ್ಲ.
ಅರ್ಜಿ ಸಲ್ಲಿಕೆ ಮಾಡುವವರು Should have obtained a degree of a University established by Law in India with Economics or Mathematics as one of the subject or in Commerce or should possess a qualification declared by the Government to be equivalent to such degree.
ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ 33,450-62,6000 ಎಂದು ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆ 35, ಪ್ರವರ್ಗ 2 (ಎ), 2 (ಬಿ), ಎ (ಎ), 3 (ಬಿ) 38 ವರ್ಷಗಳು. ಪ. ಜಾ/ ಪ. ಪಂ/ ಪ್ರವರ್ಗ-1 40 ವರ್ಷಗಳು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ., ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ) ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.
ಅಭ್ಯರ್ಥಿಗಳು ನಿಗದಿಪಡಿಸಿದ ಶುಲ್ಕವನ್ನು ಪಾವತಿ ಮಾಡಲೇಬೇಕು. ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡಲಾಗುವುದಿಲ್ಲ ಅಥವ ಅದನ್ನು ಆಯೋಗ ನಡೆಸುವ ಇತರ ಪರೀಕ್ಷೆ ಅಥವ ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ. ಶುಲ್ಕ ಪಾವತಿ ಮಾಡದ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ.
ಆಯ್ಕೆ ವಿಧಾನ ಹೇಗೆ?; ಅರ್ಜಿ ಸಲ್ಲಿಸುವ ಎಲಾ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಕಡ್ಡಾಯವಾಗಿದ್ದು, ಸದರಿ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಹೊರತು, ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪ್ರಶ್ನೆ ಪತ್ರಿಕೆಯನ್ನು SSLC ಹಂತದಲ್ಲಿನ ಪ್ರಥಮಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗುವುದು.
ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹರಾದ ನಂತರ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಹಾಗೂ ತಿದ್ದುಪಡಿ ನಿಯಮ 2022 ರ ಉಪ ನಿಯಮ 5(ಡಿ)ರಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಗೆ ಅರ್ಹತೆ ಹೊಂದಲು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಹೊಂದುವುದು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳಲ್ಲಿ ಕನಿಷ್ಠ ಪಕ್ಷ ಶೇಕಡ 35 ರಷ್ಟು ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿರುತ್ತದೆ.
ಆಸಕ್ತ, ಅರ್ಹರು ಕೆಪಿಎಸ್‌ಸಿ ವೆಬ್‌ಸೈಟ್ (https://kpsc.kar.nic.in/) ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು. ಸಹಾಯವಾಣಿ ಸಂಖ್ಯೆ ಕೇಂದ್ರ ಕಛೇರಿ ಮಾಹಿತಿ ಕೇಂದ್ರ, 080-30574957/30574901.












Click it and Unblock the Notifications