KPSC Recruitment: ಹೈದರಾಬಾದ್ ಕರ್ನಾಟಕ, 97 ಹುದ್ದೆ, ವಿವರಗಳು

ಬೆಂಗಳೂರು, ಮಾರ್ಚ್ 25: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹೈದರಾಬಾದ್-ಕರ್ನಾಟಕ ವೃಂದದ ಗ್ರೂಪ್-ಸಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 97 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು 28/5/2024 ಕೊನೆಯ ದಿನವಾಗಿದೆ.

ಒಟ್ಟು 10 ಇಲಾಖೆಗಳ ಕಿರಿಯ ಇಂಜಿನಿಯರ್, ನೀರು ಸರಬರಾಜುದಾರರು, ಸಹಾಯಕ ನೀರು ಸರಬರಾಜುದಾರರು, ಕಿರಿಯ ಆರೋಗ್ಯ ನಿರೀಕ್ಷಕರು, ಸಹಾಯಕ ಗ್ರಂಥಪಾಲಕ ಸೇರಿ 97 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

KPSC Recruitment Hyderabad Karnataka Region 97 Post

ಆಸಕ್ತ ಮತ್ತು ಅರ್ಹರು 29/4/2024 ರಿಂದ 28/5/2024ರ ತನಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಸಹ 28/5/2024 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಲು ಮೊದಲು ಎಲ್ಲಾ ವಿವರಗಳನ್ನು ಓದಿಕೊಂಡು ನಂತರ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡಬೇಕು.

ವಯೋಮಿತಿ, ವೇತನ ಮಾಹಿತಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ಕನಿಷ್ಠ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಕಿರಿಯ ಇಂಜಿನಿಯರ್ ಹುದ್ದೆಗೆ 33,450-62,600 ರೂ.ಗಳು, ನೀರು ಸರಬರಾಜುದಾರರು ಹುದ್ದೆಗೆ 27,650-52,650 ರೂ.ಗಳು. ಸಹಾಯಕ ನೀರು ಸರಬರಾಜುದಾರ ಹುದ್ದೆಗೆ 21,400-42,000 ರೂ.ಗಳು. ಕಿರಿಯ ಆರೋಗ್ಯ ನಿರೀಕ್ಷಕ ಹುದ್ದೆಗೆ 23,500-47,650 ರೂ. ಮತ್ತು ಸಹಾಯಕ ಗ್ರಂಥಪಾಲಕ 30,350-58,250 ರೂ.ಗಳ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಸಾಮಾನ್ಯ ವರ್ಗಕ್ಕೆ 600 ರೂ., ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕರಿಗೆ 50 ರೂ.ಗಳ ಶುಲ್ಕವನ್ನು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್‌ ನೀಡಲಾಗುವುದಿಲ್ಲ. ಅದನ್ನು ಇತರೆ ಯಾವುದೇ ನೇಮಕಾತಿ, ಪರೀಕ್ಷೆಗೆ ಹೊಂದಿಕೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಈ ಅಧಿಸೂಚನೆಯು ಜಾರಿಯಾದ ಮೇಲೆ ಈ ಅಧಿಸೂಚನೆಯಲ್ಲಿ ನಮೂದಿಸಿರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರವು ಯಾವುದೇ ನಿಯಮಗಳು ಮತ್ತು ನಿರ್ದೇಶನಗಳನ್ನು ಜಾರಿ ಮಾಡಿದಲ್ಲಿ, ತಿದ್ದುಪಡಿ ಮಾಡಿದಲ್ಲಿ, ಪರಿಷ್ಕರಿಸಿದಲ್ಲಿ, ಅವುಗಳನ್ನು ನೇಮಕಾತಿ ಪ್ರಕ್ರಿಯೆಯ ಸಮುಚಿತ ಹಂತದಲ್ಲಿ ಸೇರಿಸಿಕೊ ಳ್ಳಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.

ಆಯೋಗವು ಅಭ್ಯರ್ಥಿಗಳೊಂದಿಗೆ ಯಾವುದೇ ಪತ್ರ ವ್ಯವಹಾರವನ್ನು ನಡೆಸುವುದಿಲ್ಲ. ವಿಳಾಸ ಬದಲಾವಣೆ ಇದ್ದಲ್ಲಿ ಅಭ್ಯರ್ಥಿಗಳು ಲಿಖಿತ ಮನವಿಯ ಮೂಲಕ ಆಯೋಗದ ಗಮನಕ್ಕೆ ತರತಕ್ಕದ್ದು. ಈ ವಿಳಾಸ ಬದಲಾವಣೆಯನ್ನು ಪರಿಗಣಿಸಲು ಆಯೋಗವು ಪ್ರಯತ್ನಿಸುವುದು, ಆದಾಗ್ಯು ಈ ವಿಚಾರದಲ್ಲಿ ಆಯೋಗವು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ. ಈ ಬಗ್ಗೆ ಅಭ್ಯರ್ಥಿಗಳು ಎಚ್ಚರ ವಹಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು. 080-30574957/ 30574901 0821-2545956. 0831-2475345, 08472-227944, 08182-228099.

ಆಸಕ್ತ ಮತ್ತು ಅರ್ಹರು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ಟ್ಯಾಬ್‌ನಲ್ಲಿ NOTIFICATION FOR VARIOUS GROUP-C(HK) POSTS WITH BELOW DEGREE QUALIFICATION IN VARIOUS DEPTS ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+