ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

KPSC ನೇಮಕಾತಿ; ಜಲ ಸಂಪನ್ಮೂಲ ಇಲಾಖೆ 169 ಇಂಜಿನಿಯರ್ ಹುದ್ದೆಗಳು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 17; ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಜಲ ಸಂಪನ್ಮೂಲ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 17/11/2022 ಕೊನೆಯ ದಿನವಾಗಿದೆ.

ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಮತ್ತು ತಿದ್ದುಪಡಿ ನಿಯಮ 2022 ರ ಅನ್ವಯ ಹೈದರಾಬಾದ್-ಕರ್ನಾಟಕ ವೃಂದದಲ್ಲಿನ ಗ್ರೂಪ್ 'ಸಿ' ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

KPSC Recruitment 2022 : ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳು KPSC Recruitment 2022 : ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳು

ಕಿರಿಯ ಇಂಜಿನಿಯರ್ (ಸಿವಿಲ್) 166 ಮತ್ತು ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು On-line ಮೂಲಕ 19/10/2022ರಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 18/11/2022 ಕೊನೆಯ ದಿನವಾಗಿದೆ.

ಕೆಪಿಎಸ್‌ಸಿ ನೇಮಕಾತಿ; ಕಾರ್ಮಿಕ ನಿರೀಕ್ಷಕರ ಹುದ್ದೆಗಳು ಕೆಪಿಎಸ್‌ಸಿ ನೇಮಕಾತಿ; ಕಾರ್ಮಿಕ ನಿರೀಕ್ಷಕರ ಹುದ್ದೆಗಳು

ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡಬೇಕು. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ಸ್ವೀಕಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; 1137 ಹುದ್ದೆಗಳು ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; 1137 ಹುದ್ದೆಗಳು

ಅರ್ಜಿ ಸಲ್ಲಿಕೆ ಮಾಡಿದ ಬಳಿಕ ನಂತರ ದಾಖಲೆಗಳ ಪರಿಶೀಲನೆ ಮಾಡಲಾಗುತ್ತದೆ. ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣಪತ್ರ/ ಇತರೆ ಪ್ರಮಾಣಪತ್ರಗಳನ್ನು ತಮ್ಮ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಕಡಾಯವಾಗಿ ಪಡೆದಿಟ್ಟುಕೊಂಡು ಸ್ಪಷ್ಟವಾದ ದಾಖಲೆಗಳನ್ನು ಅಪ್‌ಲೋಡ್ ಮಾಡತಕ್ಕದ್ದು ಎಂದು ಸೂಚನೆ ನೀಡಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆಯ ವಿವರಗಳು

ಶೈಕ್ಷಣಿಕ ವಿದ್ಯಾರ್ಹತೆಯ ವಿವರಗಳು

ಅರ್ಜಿಗಳನ್ನು ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ನಮೂದಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌ಗಳಿಂದ ಸಿವಿಲ್ ಇಂಜಿನಿಯರಿಂಗ್‌ (ಜನರಲ್) ನಲ್ಲಿ ಡಿಪ್ಲೊಮಾ ಪದವಿ ಪಡೆದಿರಬೇಕು. ಬೇರೆ ತತ್ಸಮಾನ ಎಂದು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿಯ ವಿವರಗಳು

ವಯೋಮಿತಿಯ ವಿವರಗಳು

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ನಮೂದಿಸಿರುವ ಕನಿಷ್ಟ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

ಅರ್ಜಿಗಳನ್ನು ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗ ಗರಿಷ್ಠ ವಯೋಮಿತಿ 35 ವರ್ಷಗಳು. ಪ್ರವರ್ಗ (2)ಎ, (2)ಬಿ, 3(ಎ), 3(ಬಿ) 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು 40 ವರ್ಷಗಳು.

ಕಡ್ಡಾಯವಾಗಿ ಅರ್ಜಿ ಶುಲ್ಕ ಪಾವತಿಸಬೇಕು

ಕಡ್ಡಾಯವಾಗಿ ಅರ್ಜಿ ಶುಲ್ಕ ಪಾವತಿಸಬೇಕು

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕಡ್ಡಾಯವಾಗಿ ಶುಲ್ಕವನ್ನು ಪಾವತಿ ಮಾಡಬೇಕು. ಒಮ್ಮೆ ಶುಲ್ಕ ಪಾವತಿ ಮಾಡಿದ ನಂತರ ಅದನ್ನು ವಾಪಸ್ ನೀಡಲಾಗುವುದಿಲ್ಲ. ಯಾವುದೇ ಸಂದರ್ಭದಲ್ಲಿಯೂ ವಾಪಸ್ ನೀಡಲಾಗುವುದಿಲ್ಲ. ಆಯೋಗ ನಡೆಸುವ ಇತರ ಪರೀಕ್ಷೆ, ನೇಮಕಾತಿಗೆ ಹೊಂದಿಸಿಕೊಳ್ಳುವುದಿಲ್ಲ. ಶುಲ್ಕ ಪಾವತಿ ಮಾಡದ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ.

ಸಾಮಾನ್ಯ ಅರ್ಹತೆಗೆ ಅರ್ಜಿ ಶುಲ್ಕ 600 ರೂ.ಗಳು. ಪ್ರವರ್ಗ (2)ಎ, (2)ಬಿ, 3(ಎ), 3(ಬಿ) 300 ರೂ.ಗಳು. ಮಾಜಿ ಸೈನಿಕರಿಗೆ 50 ರೂ.ಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ. ಆದರೆ ಎಲ್ಲಾ ವರ್ಗದ ಅಭ್ಯರ್ಥಿಗಳು 35 ರೂ. ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು.

ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದೆ

ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದೆ

ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಉಪನಿಯಮ 5(ಡಿ)ರಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ನಯ ಆಯ್ಕೆ ಮಾಡಲಾಗುವುದು, ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಗೆ ಅರ್ಹತೆ ಹೊಂದಲು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಹೊಂದುವುದು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳಲ್ಲಿ ಕನಿಷ್ಠ ಪಕ್ಷ ಶೇಕಡ 35 ರಷ್ಟು ಅಂಕಗಳನ್ನು ಗಳಿಸುವುದು ಕಡಾಯವಾಗಿರುತ್ತದೆ.

ಸ್ಮರ್ಧಾತ್ಮಕ ಪರೀಕ್ಷೆಯನ್ನು ಆಫ್ ಲೈನ್-ಓಎಂಆರ್ ಮಾದರಿ ಅಥವಾ ಗಣಕಯಂತ್ರದ ಮೂಲಕ ಸ್ಮರ್ಧಾತ್ಮಕ ಪರೀಕ್ಷೆ ಮುಖಾಂತರ ನಡೆಸಲಾಗುವುದು. ಈ ವಿಷಯದಲ್ಲಿ ಆಯೋಗದ ತೀರ್ಮಾನವೇ ಅಂತಿಮವಾಗಿರುತ್ತದೆ. ಗಣಕಯಂತ್ರದ ಮೂಲಕ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದರೆ ಅಭ್ಯರ್ಥಿಗಳಿಗೆ ಈ ಸಂಬಂಧ ಸೂಚನೆಗಳನ್ನು ಹಾಗೂ ಅಣಕು ಪರೀಕ್ಷೆಯನ್ನು ತೆಗೆದುಕೊಳ್ಳುವ ಬಗ್ಗೆ ಮಾಹಿತಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.

ಕನ್ನಡ ಭಾಷಾ ಪರೀಕ್ಷೆ ಅರ್ಹತೆಯನ್ನು ಪಡೆದ ಹೊರತು, ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪರೀಕ್ಷೆಯು ಗರಿಷ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು.

ಅರ್ಜಿ ಸಲ್ಲಿಕೆ, ಸಹಾಯವಾಣಿ

ಅರ್ಜಿ ಸಲ್ಲಿಕೆ, ಸಹಾಯವಾಣಿ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ 33,450 ರಿಂದ 62,600 ರೂ. ವೇತನವನ್ನು ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಚಿತ್ರದಲ್ಲಿರುವ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

English summary
Karnataka Public Service Commission (KPSC) invited applications for water resources department engineer recruitment. Candidates can submit applications online till 17/11/2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X