ಕೆಪಿಎಸ್‌ಸಿ ವಿವಿಧ ಇಲಾಖೆಯ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು, ಅಕ್ಟೋಬರ್ 23: ಕರ್ನಾಟಕ ಲೋಕಸೇವಾ ಆಯೋಗ 2022 ರ ಮಾರ್ಚ್‌ನಲ್ಲಿ ಅಧಿಸೂಚನೆ ನೀಡಿದ್ದ ವಿವಿಧ ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಸೇರಿದಂತೆ ನಾಲ್ಕು ಇಲಾಖೆಗಳ ಹುದ್ದೆಗಳ ನೇಮಕಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಯ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ ಗ್ರೇಡ್-1 ಹುದ್ದೆಗಳು, ಪೊಲೀಸ್ ಇಲಾಖೆಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿನ ಗ್ರೂಪ್ ಎ ವೃಂದದ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಇದೀಗ ನೇಮಕಾತಿ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು ವೇಳಾಪಟ್ಟಿಯನ್ನು ಈ ಕೆಳಗಿನಂತೆ ಗಮನಿಸಬಹುದು.
410 ಸಿ ದರ್ಜೆಯ ಹುದ್ದೆಗಳ ನೇಮಕ ಸೇರಿದಂತೆ ಮಾರ್ಚ್ 9ರಂದು ಅಧಿಸೂಚನೆ ಹೊರಡಿಸಿದ್ದ ಆಯುಷ್ ಇಲಾಖೆಯಲ್ಲಿನ ಔಷಧ ವಿಶ್ಲೇಷಕ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನವೆಂಬರ್ 29 ಮತ್ತು 30 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಸಲಾಗುತ್ತದೆ.

ಮಾರ್ಚ್ 17ರಂದು ಅಧಿಸೂಚನೆ ಹೊರಡಿಸಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ 136 ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಡಿಸೆಂಬರ್ 24, 25 ರಂದು ಬೆಂಗಳೂರಿನ ಪರೀಕ್ಷೆ ನಿಗದಿ ಮಾಡಲಾಗಿದೆ.
ಮಾರ್ಚ್ 29ರಂದು ಅಧಿಸೂಚನೆ ಹೊರಡಿಸಿದ್ದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ (ನಗರಸಭೆ / ಪುರಸಭೆ / ಪಟ್ಟಣ ಪಂಚಾಯಿತಿ) ವಿವಿಧ ಗ್ರೂಪ್ ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ 2023ರ ಜನವರಿ 21, 22 ರಂದು ಪರೀಕ್ಷೆ ನಡೆಸಲಾಗುತ್ತದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ ಗ್ರೇಡ್-1 ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಹುದ್ದೆಗಳಿಗೆ 2023ರ ಫೆಬ್ರುವರಿ 11, 12ರಂದು ಪರೀಕ್ಷೆ ನಡೆಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ನ ಬಲಭಾಗದಲ್ಲಿರುವ ಅರ್ಜಿದಾರರ ಗಮನಕ್ಕೆ ಎಂದಿರುವ ಆಯ್ಕೆಗಳಲ್ಲಿ ವೇಳಾಪಟ್ಟಿ ಆಯ್ಕೆಯನ್ನು ಕ್ಲಿಕ್‌ಮಾಡಿ.












Click it and Unblock the Notifications