ಕೆಪಿಎಸ್‌ಸಿ ನೇಮಕಾತಿ; 1236 ಗ್ರೂಪ್ ಸಿ ಹುದ್ದೆಗಳ ಭರ್ತಿ
ಬೆಂಗಳೂರು, ಡಿಸೆಂಬರ್ 17 : ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ -ಸಿ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟಿಸಲಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಕೆಪಿಎಸ್ ವಿವಿಧ ಇಲಾಖೆಗಳಲ್ಲಿ 1236 ಗ್ರೂಪ್-ಸಿ ವೃಂದದ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಈ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆ ಇದೆ. ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಆಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಸಬ್ ರಿಜಿಸ್ಟರ್ 107, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ 174, ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ 93, ವಸತಿ ಶಿಕ್ಷಣ 156, ಕಂದಾಯ ಇಲಾಖೆ 177, ಸಮಗ್ರ ಶಿಶು ಅಭಿವೃದ್ಧಿ ಯೋಜನೆ 102 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ಸೈಟ್‌ನಲ್ಲಿ ಜನವರಿ 2ರ ಬಳಿಕ ಅಧಿಸೂಚನೆ ಪ್ರಕಟವಾಗಲಿದೆ. ಇವುಗಳ ಜೊತೆಗೆ ಲೋಕೋಪಯೋಗಿ ಇಲಾಖೆಯ 870 ಇಂಜಿನಿಯರ್‌ಗಳ ನೇಮಕವೂ ನಡೆಯುವ ನಿರೀಕ್ಷೆ ಇದೆ.
ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವವರು ಸ್ಮರ್ಧಾತ್ಮಕ ಪರೀಕ್ಷೆಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳಬಹುದಾಗಿದೆ. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬಹುದಾಗಿದೆ.












Click it and Unblock the Notifications