ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

912 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಟಿಸಿಎಲ್‌

|
Google Oneindia Kannada News

ಬೆಂಗಳೂರು, ಏ. 28 : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸಹಾಯಕ ಇಂಜಿನಿಯರ್, ಸಹಾಯಕ ಲೆಕ್ಕಾಧಿಕಾರಿ, ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15, 2015.

ಒಟ್ಟು 912 ಹುದ್ದೆಗಳಿವೆ. ಸಹಾಯಕ ಇಂಜಿನಿಯರ್ (ಎಲೆಕ್ಟ್ರಿಕಲ್) 345, ಸಹಾಯಕ ಇಂಜಿನಿಯರ್ (ಸಿವಿಲ್) 4, ಸಹಾಯಕ ಲೆಕ್ಕಾಧಿಕಾರಿ 13, ಜೂನಿಯರ್ ಇಂಜಿನಿಯರ್ 446 ಹುದ್ದೆಗಳಿವೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. [ನೇಮಕಾತಿ ಆದೇಶ ಇಲ್ಲಿದೆ]

KPTCL

ವಯೋಮಿತಿ : ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ 18 ವರ್ಷ ತುಂಬಿರಬೇಕು.
ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 35 ವರ್ಷ, 2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ/ಎಸ್‌ಟಿ/ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು. [ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ]

ಅರ್ಜಿ ಶುಲ್ಕದ ವಿವರ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮತ್ತು ಪ್ರವರ್ಗ 1/2ಎ/2ಬಿ/3ಬಿ ಅಭ್ಯರ್ಥಿಗಳಿಗೆ 500 ರೂ., ಎಸ್‌ಸಿ/ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕ ನಿಗದಿಗೊಳಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 15ರ ಸಂಜೆ 5 ಗಂಟೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. [ವೆಬ್ ಸೈಟ್ ವಿಳಾಸ]

ಇಂಗ್ಲಿಶ್‌ನಲ್ಲಿ ಓದಿ

English summary
Karnataka Power Transmission Corporation Limited (KPTCL) has invited online applications for the posts of Assistant Engineers, Assistant Accounts Officers and Junior Engineer posts. 15th May 2015 last date for submit application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X