ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಟಿಸಿಎಲ್ ನೇಮಕಾತಿ 3646 ಹುದ್ದೆಗಳಿಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 24 : ಕವಿಪ್ರನಿನಿ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 30 ಕೊನೆಯ ದಿನವಾಗಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) ಫೆಬ್ರವರಿ 20ರಂದು 3646 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಆದೇಶವನ್ನು ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.

ಕರ್ನಾಟಕ ಕಾರಾಗೃಹಗಳ ಇಲಾಖೆ ನೇಮಕಾತಿ, 662 ಹುದ್ದೆಗಳುಕರ್ನಾಟಕ ಕಾರಾಗೃಹಗಳ ಇಲಾಖೆ ನೇಮಕಾತಿ, 662 ಹುದ್ದೆಗಳು

ಕವಿಪ್ರನಿನಿ, ಬೆಸ್ಕಾಂ, ಸೆಸ್ಕ್, ಹೆಸ್ಕಾಂ, ಮೆಸ್ಕಾಂ ಮತ್ತು ಜೆಸ್ಕಾಂ ಸೇರಿ 3646 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಹೈದರಾಬಾದ್-ಕರ್ನಾಟಕ ಪ್ರದೇಶ ಮೀಸಲಾತಿ, ಹುದ್ದೆಗಳ ವರ್ಗೀಕರಣ ಮುಂತಾದ ವಿವರಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.

44 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಕಲಬುರಗಿ ಜಿ.ಪಂಚಾಯಿತಿ44 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಕಲಬುರಗಿ ಜಿ.ಪಂಚಾಯಿತಿ

ಕವಿಪ್ರನಿನಿ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ವೆಬ್‌ಸೈಟ್‌ಗಳ ಮೂಲಕ ನಿಗದಿತ ನಮೂನೆಯಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ ಎಂದು ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.... ಅರ್ಜಿ ಸಲ್ಲಿಸಲು ವಿಳಾಸಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

131 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ131 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ಯಾವ-ಯಾವ ಹುದ್ದೆಗಳು

ಯಾವ-ಯಾವ ಹುದ್ದೆಗಳು

ಕವಿಪ್ರನಿನಿಯಲ್ಲಿ 658, ಬೆಸ್ಕಾಂನಲ್ಲಿ 479, ಸೆಸ್ಕ್‌ನಲ್ಲಿ 628, ಹೆಸ್ಕಾಂನಲ್ಲಿ 757, ಮೆಸ್ಕಾಂನಲ್ಲಿ 727, ಹೆಸ್ಕಾಂನಲ್ಲಿ 397 ಹುದ್ದೆಗಳು ಸೇರಿ 3646 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಎಲ್ಲಿ ಎಷ್ಟು ಹುದ್ದೆಗಳಿವೆ

ಎಲ್ಲಿ ಎಷ್ಟು ಹುದ್ದೆಗಳಿವೆ

ಸಹಾಯಕರ ಕಾರ್ಯನಿರ್ವಾಹಕ ಇಂಜಿನಿಯರ್ (ವಿದ್ಯುತ್) 94, ಸಹಾಯಕ ಇಂಜಿನಿಯರ್ (ವಿದ್ಯುತ್) 505, ಸಹಾಯಕ ಇಂಜಿನಿಯರ್ (ಸಿವಿಎಲ್) 28, ಕಿರಿಯ ಇಂಜಿನಿಯರ್ (ವಿದ್ಯುತ್) 570, ಕಿರಿಯ ಇಂಜಿನಿಯರ್ (ಸಿವಿಎಲ್) 28, ಕಿರಿಯ ಆಪ್ತ ಸಹಾಯಕ 63, ಕಿರಿಯ ಸಹಾಯಕ 360, ಚಾಲಕ ದರ್ಜೆ -2 126, ಕಿರಿಯ ಸ್ಟೇಷನ್ ಪರಿಚಾರಕ 103, ಕಿರಿಯ ಪವರ್ ಮ್ಯಾನ್ (ಕಿರಿಯ ಮಾರ್ಗದಾಳು) 1769 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ವಯೋಮಿತಿ ವಿವರ

ವಯೋಮಿತಿ ವಿವರ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವಿದ್ಯಾರ್ಹತೆ

ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 12ನೇ ತರಗತಿ (ದ್ವಿತೀಯ ಪಿಯುಸಿ) ಹಾಗೂ ಯಾವುದಾದರೂ ಪದವಿ ವಿದ್ಯಾರ್ಹತೆಯನ್ನು ನಿಗದಿ ಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಮನ್ನ ನೇಮಕಾತಿ ಆದೇಶವನ್ನು ಸ್ಪಷ್ಟವಾಗಿ ಓದಿಕೊಳ್ಳುವಂತೆ ಸೂಚಿಸಲಾಗಿದೆ.

English summary
Karnataka Power Transmission Corporation (KPTCL) invited applications for various post. Candidates can apply online before March 30, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X