ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಟಿಸಿಎಲ್ ನೇಮಕಾತಿ; ಬೆಂಗಳೂರಲ್ಲಿ ಕೆಲಸ

|
Google Oneindia Kannada News

ಬೆಂಗಳೂರು, ಜನವರಿ 05 : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 20 ಜನವರಿ 2020 ಕೊನೆಯ ದಿನವಾಗಿದೆ.

ಕೆಪಿಟಿಸಿಎಲ್ ಜ್ಯೂನಿಯರ್ ಇಂಜಿನಿಯರ್ (ಸಿವಿಲ್) 1, ಜ್ಯುನಿಯರ್ ಪರ್ಸನಲ್ ಅಸಿಸ್ಟೆಂಟ್ (ಜೆಪಿಎ) 4 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಇಸ್ರೋದಲ್ಲಿ 21 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಇಸ್ರೋದಲ್ಲಿ 21 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸು ಆಗಿರಬೇಕು. ಸಿವಿಲ್ ಇಂಜಿನಿಯರ್‌ನಲ್ಲಿ ಡಿಪ್ಲೋಮಾ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

BECIL ನೇಮಕಾತಿ 2020: 4000 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ BECIL ನೇಮಕಾತಿ 2020: 4000 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

KPTCL Recruitment 2020 Apply For Various Post

ಜ್ಯುನಿಯರ್ ಇಂಜಿನಿಯರ್ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. 20 ಜನವರಿ 2020ಕ್ಕೆ ಅನ್ವಯವಾಗುವಂತೆ. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಕೆಪಿಎಸ್‌ಸಿ ನೇಮಕಾತಿ; 1236 ಗ್ರೂಪ್ ಸಿ ಹುದ್ದೆಗಳ ಭರ್ತಿ ಕೆಪಿಎಸ್‌ಸಿ ನೇಮಕಾತಿ; 1236 ಗ್ರೂಪ್ ಸಿ ಹುದ್ದೆಗಳ ಭರ್ತಿ

ಅರ್ಜಿಗಳನ್ನು ಸಲ್ಲಿಸುವ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 500 ರೂ., ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳು 300 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.

ಅರ್ಜಿಗಳನ್ನು ಸಲ್ಲಿಸುವವರು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Karnataka Power Transmission Corporation Limited (KPTCL) invited applications for the Junior Engineer and Junior Personal Assistant post. Candidates can apply before January 20, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X