ಕೆಪಿಟಿಸಿಎಲ್ ನೇಮಕಾತಿ 2021: 200 ವಿವಿಧ ಹುದ್ದೆಗಳಿವೆ
ಬೆಂಗಳೂರು, ಜನವರಿ 03: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. 200ಕ್ಕೂ ಅಧಿಕ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 19 ಜನವರಿ 2021 ಕೊನೆಯ ದಿನವಾಗಿದೆ.
ಸಂಸ್ಥೆ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL)
ಹುದ್ದೆ ಹೆಸರು: ಪದವಿ/ ಟೆಕ್ನಿಷಿಯನ್ ಅಪ್ರೆಂಟಿಸ್
ಒಟ್ಟು ಹುದ್ದೆ: 200.
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 19 ಜನವರಿ 2021.
ಬಿಇಎಲ್ ನೇಮಕಾತಿ 2021: 41 ಇಂಜಿನಿಯರಿಂಗ್ ಹುದ್ದೆಗಳಿವೆ
ವಿದ್ಯಾರ್ಹತೆ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸು ಆಗಿರಬೇಕು. ಡಿಪ್ಲೋಮಾ/ಇಂಜಿನಿಯರಿಂಗ್ ಪದವಿಯನ್ನು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ವಯೋಮಿತಿ: ಅಧಿಸೂಚನೆಯನ್ನು ಪರಿಶೀಲಿಸಲು ಕೋರಲಾಗಿದೆ.
ನೇಮಕಾತಿ ಪ್ರಕ್ರಿಯೆ: ಶೈಕ್ಷಣಿಕ ಅರ್ಹತೆ, ಪ್ರಮಾಣ ಪತ್ರ ಪರಿಶೀಲನೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 04-01-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 19-01-2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ವಿವರಗಳಿಗಾಗಿ ಕ್ಲಿಕ್ ಮಾಡಿ