KPTCL Recruitment: ಅಭ್ಯರ್ಥಿಗಳಿಗೆ ಇಲ್ಲಿದೆ ಅಪ್‌ಡೇಟ್ ಮಾಹಿತಿ

ಬೆಂಗಳೂರು, ನವೆಂಬರ್ 21: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿನ ನೇಮಕಾತಿಯ ಕುರಿತು ಅಪ್‌ಡೇಟ್‌ ಮಾಹಿತಿಯಿಂದಿದೆ. 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್‌ಮ್ಯಾನ್ ಹುದ್ದೆ ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿನ 2,268 ಕಿರಿಯ ಪವರ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಈ ನೇಮಕಾತಿ ಕುರಿತು ಅಪ್‌ಡೇಟ್‌ ನೀಡಿದೆ. ಕವಿಪ್ರನಿನಿ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿ - ಅಂಚೆ ಚಲನ್‌ ಪಡೆಯುವ ಮತ್ತು ಅರ್ಜಿ ಶುಲ್ಕ ಪಾವತಿ ದಿನಾಂಕ ವಿಸ್ತರಿಸುವ ಬಗ್ಗೆ ಎಂಬ ವಿಷಯವನ್ನು ಪ್ರಕಟಣೆ ಒಳಗೊಂಡಿದೆ.

KPTCL Recruitment 2024 Application Fee Submission Date Extended

ನಿಗಮದ ದಿನಾಂಕ 14.10.2024ರ ಉದ್ಯೋಗ ಪ್ರಕಟಣೆಗೆ ಅನುಗುಣವಾಗಿ, ಕವಿಪ್ರನಿನಿ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು 20/11/2024 ಮತ್ತು ಅರ್ಜಿ ಶುಲ್ಕ ಪಾವತಿಸಲು 25/11/2024 ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿರುತ್ತದೆ.

ಆನ್-ಲೈನ್ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿ ಶುಲ್ಕವನ್ನು ಪಾವತಿಸಲು ಅಂಚೆ ಇಲಾಖೆಯ ಚಲನ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿ ಶುಲ್ಕ, ಪಾವತಿಸಬೇಕಿದ್ದು, ಅಂಚೆ ಚಲನ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳುವ ಮುನ್ನ ಅಭ್ಯರ್ಥಿಗಳು e-sign ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿರುತ್ತದೆ.

ಆದರೆ, e-sign ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲವೆಂದು ಹಲವಾರು ಅಭ್ಯರ್ಥಿಗಳು ತಿಳಿಸಿರುತ್ತಾರೆ. ಈ ಹಿನ್ನಲೆಯಲ್ಲಿ, ಅಭ್ಯರ್ಥಿಗಳ ಮನವಿಗಳನ್ನು ಪರಿಗಣಿಸಿ, ಅರ್ಜಿ ಸಲ್ಲಿಕೆಯ ಮೊದಲೆರಡು ಹಂತಗಳನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳಿಗೆ ಸೀಮಿತಗೊಳಿಸಿ, e-sign ಪ್ರಕ್ರಿಯೆ, ಅಂಚೆ ಕಚೇರಿ ಚಲನ್‌ ಡೌನ್‌ಲೋಡ್ ಮತ್ತು ಅರ್ಜಿ ಶುಲ್ಕ ಪಾವತಿ ದಿನಾಂಕಗಳನ್ನು ವಿಸ್ತರಿಸಲಾಗಿದೆ ಎಂದು ಹೇಳಿದೆ.

ದಿನಾಂಕ ವಿಸ್ತರಣೆ: e-sign ಪ್ರಕ್ರಿಯೆ ಅಂಚೆ ಕಚೇರಿ ಚಲನ್ ಡೌನ್ ಲೋಡ್ ಅಂತಿಮ ದಿನಾಂಕ 5/12/2024. ಅರ್ಜಿ ಶುಲ್ಕ ಪಾವತಿ ಅಂತಿಮ ದಿನಾಂಕ 10/12/2024.

ಆನ್-ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವು 20/11/2024ಕ್ಕೆ ಮುಕ್ತಾಯವಾಗಿದ್ದು, ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ನೇಮಕಾತಿಯಲ್ಲಿ ಬದಲಾವಣೆ: ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆ, ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿನ ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ 10ನೇ ತರಗತಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಆದರೆ ಐಟಿಐ ವ್ಯಾಸಂಗ ಮಾಡಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂದು ಬೇಡಿಕೆ ಸಲ್ಲಿಸಲಾಗಿದೆ.

ಲೈನ್‌ಮ್ಯಾನ್ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡಬೇಕು. ಬೇರೆ ರಾಜ್ಯಗಳಲ್ಲಿಯೂ ಸಹ ಇದೆ ರೀತಿಯಾದ ನೇಮಕಾತಿ ಪ್ರಕ್ರಿಯೆ ಇರುವುದರಿಂದ ಕರ್ನಾಟಕವೂ ಸಹ ಇದೆ ಮಾದರಿಯನ್ನು ಅನುಸರಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆದರೆ ಸಮರ್ಥ ಹಾಗೂ ಅರ್ಹ ಅಭ್ಯರ್ಥಿಗಳ ನೇಮಕ ಆಗುತ್ತದೆ ಎಂದು ಒತ್ತಾಯಿಸಲಾಗುತ್ತಿದೆ. ಆದರೆ ಈ ಕುರಿತು ಇನ್ನೂ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+