KPTCL Recruitment 2025: ಕೆಪಿಟಿಸಿಎಲ್‌ನಲ್ಲಿ ಖಾಲಿಯಿರುವ 35,000 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ನಿರ್ಧಾರ
KPTCL Recruitment 2025: ರಾಜ್ಯದಲ್ಲಿ ಉದ್ಯೋಗಗಳಿಗೆ ಸಂಬಂಧಿಸಿದಂತೆ ಸರ್ಕಾರ ಅಪ್ಡೇಟ್ ಮಾಹಿತಿಗಳನ್ನು ನೀಡುತ್ತಲಿರುತ್ತದೆ. ಹಾಗೆಯೇ ಇದೀಗ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿ ಖಾಲಿಯಿರುವ 35,000 ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲಾಗುವುದು. ಜೊತೆಗೆ 532 ಪೌರಕಾರ್ಮಿಕರ ಹುದ್ದೆಗಳನ್ನು ಸಹ ಖಾಯಂ ಮಾಡುವುದಾಗಿಯೂ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್)ನ ಪ್ಲಾಟಿನಂ ಮಹೋತ್ಸವ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ನೌಕರರು ಇಟ್ಟಿರುವ ಬೇಡಿಕೆಗಳನ್ನು ಸರ್ಕಾರ ಅಧ್ಯಯನ ಮಾಡಿ ಅವುಗಳನ್ನು ಪರಿಹರಿಸಲಿದೆ ಎಂದು ಭರವಸೆ ನೀಡಿದರು.

ಕೇಂದ್ರ ಸರ್ಕಾರ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯ ಸರ್ಕಾರ ವೃದ್ಧಾಪ್ಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದನ್ನು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು ಎಂದು ಸಿಎಂ ಸಿದ್ದರಾಯಮ್ಮ ಅವರು ತಿಳಿಸಿದರು.
ಕರ್ನಾಟಕವು 34,000 ಮೆಗಾವ್ಯಾಟ್ ವಿದ್ಯುತ್ ಅನ್ನು ಉತ್ಪಾದಿಸುತ್ತಿದ್ದು, ಅದನ್ನು 60,000 ಮೆಗಾವ್ಯಾಟ್‌ಗೆ ಹೆಚ್ಚಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ರೈತರಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮತ್ತು ಸೌರಶಕ್ತಿ ಆಧಾರಿತ ಐಪಿ ಸೆಟ್‌ಗಳ ಅಳವಡಿಕೆಗೆ ಸಬ್ಸಿಡಿಗಳು ಸಿಗುವುದನ್ನು ಖಚಿತಪಡಿಸಿಕೊಳ್ಳಲು ಕೂಡ ಪ್ರಯತ್ನ ಮಾಡಲಾಗುತ್ತಿದೆ ಎಂದು ಎಂದು ಹೇಳಿದರು.
ಇಂಧನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, ಗೃಹ ಜ್ಯೋತಿ ಯೋಜನೆ 1.65 ಕೋಟಿ ಮನೆಗಳನ್ನು ತಲುಪಿದೆ. ಅಲ್ಲದೆ, ಕುಸುಮ್-ಸಿ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವು ಶೇಕಡ 50ರಷ್ಟು ಸಬ್ಸಿಡಿಯನ್ನು ನೀಡುತ್ತಿದೆ ಮತ್ತು ಕೆಪಿಟಿಸಿಎಲ್ ಹೆಚ್ಚುವರಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುತ್ತಿದೆ ಎಂದು ಹೇಳಿದರು.












Click it and Unblock the Notifications