ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಟಿಸಿಎಲ್ ನೇಮಕಾತಿ ವಿವರಗಳು; 1492 ಹುದ್ದೆಗಳಿಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 02; ಕರ್ನಾಟಕದ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 7/3/2022 ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.

ಕವಿಪ್ರನಿನಿ, ಬೆಸ್ಕಾಂ, ಸೆಸ್ಕ್, ಹೆಸ್ಕಾಂ, ಮೆಸ್ಕಾಂ ಮತ್ತು ಜೆಸ್ಕಾಂ ಆಡಳಿತ ವ್ಯಾಪ್ತಿಯ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಒಟ್ಟು 1492 ಹುದ್ದೆಗಳಿದ್ದು, ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.

ಸಹಾಯಕ ಇಂಜಿನಿಯರ್ 399, ಸಹಾಯಕ ಇಂಜಿನಿಯರ್ (ಸಿವಿಲ್) 21, ಕಿರಿಯ ಇಂಜಿನಿಯರ್ 486, ಕಿರಿಯ ಇಂಜಿನಿಯರ್ (ಸಿವಿಲ್) 21, ಕಿರಿಯ ಸಹಾಯಕ 357 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ 106 ಸಹಾಯಕ ಇಂಜಿನಿಯರ್, 7 ಸಹಾಯಕ ಇಂಜಿನಿಯರ್ (ಸಿವಿಲ್), 84 ಕಿರಿಯ ಇಂಜಿನಿಯರ್, 8 ಕಿರಿಯ ಇಂಜಿನಿಯರ್ (ಸಿವಿಲ್), 3 ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಅಂಚೆ ಅಥವ ಖುದ್ದಾಗಿ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶವಿಲ್ಲ.

ಅರ್ಜಿಗಳನ್ನು ಕಡ್ಡಾಯವಾಗಿ ಕವಿಪ್ರನಿನಿ ವೆಬ್ ಸೈಟ್ https://kptcl.karnataka.gov.in ಮೂಲಕ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಕೆ ಮಾಡಲು 7/2/2022 ರಿಂದ 7/3/2022ರ ಸಂಜೆ 5 ಗಂಟೆಯ ತನಕ ಅವಕಾಶ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಅಭ್ಯರ್ಥಿಗಳಿಗೆ ಸೂಚನೆಗಳು

ಅಭ್ಯರ್ಥಿಗಳಿಗೆ ಸೂಚನೆಗಳು

ಆಯ್ಕೆಗೊಂಡ ಅಭ್ಯರ್ಥಿಗಳನ್ನು ರಾಜ್ಯಾದ್ಯಂತ ಕವಿಪ್ರನಿನಿ ಅಥವ ಎಸ್ಕಾಂಗಳ ಅವಶ್ಯಕತೆಗನುಗುಣವಾಗಿ ಖಾಲಿ ಹುದ್ದೆಗೆ ತೈನಾತಿಸುವ ಹಕ್ಕನ್ನು ಕವಿಪ್ರನಿನಿ ಹೊಂದಿರುತ್ತದೆ. ಅರ್ಹ ಅಭ್ಯರ್ಥಿಗಳ ಕೊರತೆಯಿಂದ ಭರ್ತಿಯಾಗದೇ ಉಳಿಯುವ ಹುದ್ದೆಗಳನ್ನು ಸರ್ಕಾರದಲ್ಲಿ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನಾನುಸಾರ ಬ್ಯಾಕ್ ಲಾಗ್ ಎಂದು ಪರಿಗಣಿಸಲಾಗುತ್ತದೆ. ಅನುಚ್ಛೇಧ 371 (ಜೆ) ಅಡಿಯಲ್ಲಿ ಆಯ್ಕೆಗೊಳ್ಳುವ ಅಭ್ಯರ್ಥಿಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ.

ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳು ಸ್ಥಳೀಯ ವೃಂದದ ಹುದ್ದೆ ಹಾಗೂ ಮಿಕ್ಕುಳಿದ ವೃಂದದ ಹುದ್ದೆ ಈ ಎರಡೂ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ ಹಾಗೂ ಮಿಕ್ಕುಳಿದ ವೃಂದಗಳೆಡಕ್ಕೂ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿಯಲ್ಲಿ ಈ ಅಂಶವನ್ನು ಸ್ಪಷ್ಟವಾಗಿ ತಿಳಿಸಬೇಕು.

ಅರ್ಜಿ ಶುಲ್ಕಗಳು, ವಯೋಮಿತಿ ವಿವರ

ಅರ್ಜಿ ಶುಲ್ಕಗಳು, ವಯೋಮಿತಿ ವಿವರ

ಎಲ್ಲಾ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಈ ಕೆಳಕಂಡ ವಯೋಮಿತಿ ಮೀರಿರಬಾರದು. ಸಾಮಾನ್ಯ ವರ್ಗ 35 ವರ್ಷಗಳು. ಪ್ರವರ್ಗ-2 (ಎ)/ 2 (ಬಿ), 3 (ಎ) ಮತ್ತು 3 (ಬಿ) ಅಭ್ಯರ್ಥಿಗಳು 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ನಿಗಮ/ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ನೌಕರರಿಗೆ, ಮಾಜಿ ಸೈನಿಕರಿಗೆ ವಯೋಮಿತಿ ಸಡಿಲಿಕೆ ನೇಮಕಾತಿ ಆದೇಶದ ಪ್ರಕಾರ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡಲಾಗುವುದಿಲ್ಲ. ಸಾಮಾನ್ಯ ಅಭ್ಯರ್ಥಿಗಳು 600 ರೂ. (ಸರಕು ಮತ್ತು ಸೇವಾ ತೆರಿಗೆ ಹಾಗೂ ಅಂಚೆ ಸೇವಾ ಶುಲ್ಕ ಒಳಗೊಂಡಂತೆ). ಪ್ರವರ್ಗ-2 (ಎ)/ 2 (ಬಿ), 3 (ಎ) ಮತ್ತು 3 (ಬಿ) ಅಭ್ಯರ್ಥಿಗಳು 600 ರೂ. ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ಅಭ್ಯರ್ಥಿಗಳು 350 ರೂ.ಗಳು. ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇದೆ.

ವಿದ್ಯಾರ್ಹತೆಯ ವಿವರಗಳು

ವಿದ್ಯಾರ್ಹತೆಯ ವಿವರಗಳು

ಸಹಾಯಕ ಇಂಜಿನಿಯರ್ ಹುದ್ದೆಗೆ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ ಸಂಸ್ಥೆ (ಎ. ಐ. ಸಿ. ಟಿ. ಇ ಯಿಂದ ಮಾನ್ಯತೆ ಪಡೆದಿರುವ) ಎಲೆಕ್ಟ್ರಿಕಲ್ ಅಥವ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್‌ನಲ್ಲಿ ಬಿ. ಇ/ ಬಿ. ಟೆಕ್ ಪದವಿ ಹೊಂದಿರ ತಕ್ಕದ್ದು ಅಥವ ಎ. ಎಂ. ಐ. ಇ (ಭಾಗ-ಎ ಮತ್ತು ಬಿ ಎಲೆಕ್ಟ್ರಿಕಲ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು.

ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗೆ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ ಸಂಸ್ಥೆ (ಎ. ಐ. ಸಿ. ಟಿ. ಇ ಯಿಂದ ಮಾನ್ಯತೆ ಪಡೆದಿರುವ) ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಬಿ. ಇ/ ಬಿ. ಟೆಕ್ ಪದವಿ ಹೊಂದಿರಬೇಕು ಅಥವ ಎ. ಎಂ. ಐ. ಇ (ಭಾಗ-ಎ ಮತ್ತು ಬಿ ಸಿವಿಲ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು.

ಕಿರಿಯ ಇಂಜಿನಿಯರ್ ಹುದ್ದೆಗೆ ಕರ್ನಾಟಕ ರಾಜ್ಯದ ಪಾಲಿಟೆಕ್ನಿಕ್‌ನಿಂದ ವ್ಯಾಸಂಗ ಮಾಡಿ ಕರ್ನಾಟಕ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಎಲೆಕ್ಟ್ರಿಕಲ್ ಅಥವ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.

ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗೆ ಕರ್ನಾಟಕ ರಾಜ್ಯದ ಪಾಲಿಟೆಕ್ನಿಕ್‌ನಿಂದ ವ್ಯಾಸಂಗ ಮಾಡಿ ಕರ್ನಾಟಕ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.

ಕಿರಿಯ ಸಹಾಯಕ ಹುದ್ದೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವ ಸಿ. ಬಿ. ಎಸ್. ಇ. ಮತ್ತು ಐ. ಎಸ್‌. ಸಿ. ಪರೀಕ್ಷಾ ಮಂಡಳಿಗಳಿಂದ ನಡೆಸಲಾಗುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು.

ಅಭ್ಯರ್ಥಿಗಳ ಆಯ್ಕೆ ವಿಧಾನ

ಅಭ್ಯರ್ಥಿಗಳ ಆಯ್ಕೆ ವಿಧಾನ

ಸಹಾಯಕ ಇಂಜಿನಿಯರ್ (ವಿದ್ಯುತ್/ ಸಿವಿಲ್), ಕಿರಿಯ ಇಂಜಿನಿಯರ್ (ವಿದ್ಯುತ್/ ಸಿವಿಲ್) ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ನೇಮಕಾತಿಯನ್ನು ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಅರ್ಹತೆಯ ಆಧಾರದ ಮೇಲೆ ಮಾತ್ರ ಕರ್ನಾಟಕ ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾದ ಮೀಸಲಾತಿ ನಿಯಮಗಳನ್ನು ಆಧರಿಸಿ ಮಾಡಲಾಗುತ್ತದೆ.

ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ ಕನಿಷ್ಠ ಶೇ 35ರಷ್ಟು ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳು ಮಾತ್ರ ಸಹಾಯಕ ಇಂಜಿನಿಯರ್ (ವಿದ್ಯುತ್/ ಸಿವಿಲ್), ಕಿರಿಯ ಇಂಜಿನಿಯರ್ (ವಿದ್ಯುತ್/ಸಿವಿಲ್) ಮತ್ತು ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹರು. ಆಪ್ಟಿಟ್ಯೂಡ್ ಪರೀಕ್ಷೆ ದಿನಾಂಕ ಮತ್ತು ವಿಧಾನವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ.

ಅಭ್ಯರ್ಥಿಗಳಿಗೆ ವಿಶೇಷ ಸೂಚನೆಗಳು

ಅಭ್ಯರ್ಥಿಗಳಿಗೆ ವಿಶೇಷ ಸೂಚನೆಗಳು

ಎಲ್ಲಾ ಹುದ್ದೆಗಳಿಗೆ ನಿರ್ದಿಷ್ಟಪಡಿಸಿರುವ ನಿಗದಿತ ವಿದ್ಯಾರ್ಹತೆ ಹೊರತುಪಡಿಸಿ ಇತರೆ ವಿಷಯ/ ವಿಭಾಗಗಳ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳ ಅರ್ಜಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ. ವಿದ್ಯಾರ್ಹತೆ ಬಿಟ್ಟು ಇತರೆ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.

ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಮಾಡುವ ಮೊದಲು ನೇಮಕಾತಿ ಆದೇಶವನ್ನು ಸರಿಯಾಗಿ ಓದಿಕೊಳ್ಳಬೇಕು. ಅರ್ಜಿ ಶುಲ್ಕದ ನಮೂನೆಯನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ರಾಜ್ಯದ ಯಾವುದಾದರೂ ಅಂಚೆ ಕಚೇರಿಯ ಮೂಲಕ ಅರ್ಜಿ ಶುಲ್ಕ ಭರ್ತಿ ಮಾಡಬಹುದು. ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿ ಮಾಡಲು 9/3/2022 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿ ಮಾಡದ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ.

English summary
The Karnataka Power Transmission Corporation Limited (KPTCL) realsed notification for recruitment of 1492 post. Candidates can apply online till March 7, 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X