ಇಂಧನ ಇಲಾಖೆಯಲ್ಲಿ 8 ಸಾವಿರ ಹುದ್ದೆ ಭರ್ತಿ, ವಿವರಗಳು

ಬೆಂಗಳೂರು, ಜೂ. 10 : ಇಂಧನ ಇಲಾಖೆಯಲ್ಲಿ 8 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಎರಡು ದಿನಗಳ ಹಿಂದೆ ಹೇಳಿದ್ದರು. ಬುಧವಾರ ನೇಮಕಾತಿ ಆದೇಶ ಹೊರಬಿದ್ದಿದ್ದು, ಜೂನ್ 12ರ ನಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಜ್ಯೂನಿಯರ್ ಸ್ಟೇಷನ್ ಅಸಿಸ್ಟೆಂಟ್ಸ್‌, ಜ್ಯೂನಿಯರ್ ಲೈನ್ ಮ್ಯಾನ್‌ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಲೈನ್ ಮ್ಯಾನ್ ಹುದ್ದೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ನಿಗದಿಗೊಳಿಸಲಾಗಿದೆ.

jobs

ಹುದ್ದೆಗಳ ಹಂಚಿಕೆ ಹೀಗಿದೆ : ಕೆಪಿಟಿಸಿಎಲ್ 1,300, ಬೆಸ್ಕಾಂ 1,275, ಜೆಸ್ಕಾಂ 1,213, ಮೆಸ್ಕಾಂ 2030, ಹೆಸ್ಕಾಂ 1405, ಚೆಸ್ಕಾಂ 857 ಹುದ್ದೆಗಳು. ಅಭ್ಯರ್ಥಿಗಳು ಯಾವುದಾದದರೂ ಒಂದು ಸರಬರಾಜು ಕಂಪನಿಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. [1,129 ಹುದ್ದೆಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ]

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೈಸೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಕಲಬುರಗಿ, ಬೆಂಗಳೂರಿನಲ್ಲಿ ಪರೀಕ್ಷೆಗಳನ್ನು ಆಯೋಜಿಸಲಾಗುತ್ತದೆ. ಜೂನ್ 12ರ ನಂತರ ಆಯಾ ವಿಭಾಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+