ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಟಿಸಿಎಲ್

Posted By:
Subscribe to Oneindia Kannada

ಬೆಂಗಳೂರು, ಜುಲೈ 21 : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 5ರ ನಂತರ ನೇಮಕಾತಿ ಆದೇಶವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಮಾರ್ಗದಾಳು (junior lineman) ಮತ್ತು ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಕಿರಿಯ ಸ್ಟೇಷನ್ ಪರಿಚಾರಕ (junior station attendant ) ಹುದ್ದೆಯ ಬ್ಯಾಕ್‌ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.[ಚಿತ್ರದುರ್ಗದಲ್ಲಿ ಕೆಲಸ ಖಾಲಿ ಇದೆ]

kptcl

ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ಎಸ್‌ಎಸ್‌ಎಲ್‌ಸಿ ಅಥವ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಕಿರಿಯ ಸ್ಟೇಷನ್ ಪರಿಚಾರಕ (ಬ್ಯಾಕ್‌ ಲಾಗ್) 61 ಹುದ್ದೆ, ಕಿರಿಯ ಮಾರ್ಗದಾಳು 350 ಹುದ್ದೆಗಳು.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಕಿರಿಯ ಮಾರ್ಗದಾಳು (ಬ್ಯಾಕ್‌ ಲಾಗ್) 53, ಕಿರಿಯ ಮಾರ್ಗದಾಳು 2,550 ಹುದ್ದೆ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಕಿರಿಯ ಮಾರ್ಗದಾಳು (ಬ್ಯಾಕ್ ಲಾಗ್) 43, ಕಿರಿಯ ಮಾರ್ಗದಾಳು 1075 ಹುದ್ದೆಗಳು.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕಿರಿಯ ಮಾರ್ಗದಾಳು (ಬ್ಯಾಕ್ ಲಾಗ್) 46, ಕಿರಿಯ ಮಾರ್ಗದಾಳು 1405 ಹುದ್ದೆಗಳು.

jobs

ಆಯಾ ಕಂಪನಿಯ ವೆಬ್‌ಸೈಟ್ ಮೂಲಕ ನಿಗದಿತ ನಮೂನೆಯಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವರ್ಗೀಕರಣ, ಮೀಸಲಾತಿ, ವೇತನ, ವಯಸ್ಸು, ಅರ್ಹತೆ, ಕಡೆಯ ದಿನಾಂಕ ಮುಂತಾದ ವಿವರಗಳು ಆಗಸ್ಟ್ 5ರ ನಂತರ ಆಯಾ ಕಂಪನಿ ವೆಬ್‌ಸೈಟ್‌ನಲ್ಲಿ ದೊರೆಯಲಿವೆ.

ಸೂಚನೆ

* ಅಭ್ಯರ್ಥಿಗಳು ಯಾವುದಾದರೂ ಒಂದು ನಿಗಮ ಅಥವ ಕಂಪನಿಗೆ ಅರ್ಜಿ ಸಲ್ಲಿಸುವುದು
* ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಮಾರ್ಗದಾಳು ಹುದ್ದೆಗಳ ಆಯ್ಕೆಗೆ ಸಹನ ಶಕ್ತಿ ಪರೀಕ್ಷೆಯನ್ನು ಕವಿಪ್ರನಿನಿ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಏಕಕಾಲಕ್ಕೆ ನಡೆಸಲಾಗುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka Power Transmission Corporation Limited (KPTCL) invited applications for Junior Station Attendant and Junior Lineman post.
Please Wait while comments are loading...