ಲೋಕೋಪಯೋಗಿ ಇಲಾಖೆಯಲ್ಲಿ 870 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಮಾರ್ಚ್ 14 : ಕರ್ನಾಟಕ ಲೋಕೋಪಯೋಗಿ ಇಲಾಖೆ 870 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 10/4/2019ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
ಲೋಕೋಪಯೋಗಿ ಇಲಾಖೆ ಅಸಿಸ್ಟೆಂಟ್ ಇಂಜಿನಿಯರ್, ಜ್ಯುನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಪದವಿ, ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಅಥವ ಮಾನ್ಯತೆ ಪಡೆದ ಸಂಸ್ಥೆಯಿಂದ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 40 ವರ್ಷಗಳು.
ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ 33450 ರಿಂದ 83,900 ರೂ. ವೇತನ ಶ್ರೇಣಿ ನಿಗದಿ ಮಾಡಲಾಗಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications