ಎಸ್‌ಎಸ್‌ಎಲ್‌ಸಿ ಆದವರಿಗೆ ಕೊಂಕಣ ರೈಲ್ವೆಯಲ್ಲಿ ಕೆಲಸವಿದೆ
Recommended Video

ಬೆಂಗಳೂರು, ಆಗಸ್ಟ್ 31 : ಕೆಆರ್‌ಸಿಎಲ್ 100 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 16 ಸೆಪ್ಟೆಂಬರ್ 2018 ಕೊನೆಯ ದಿನವಾಗಿದೆ.
ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್ (ಕೆಆರ್‌ಸಿಎಲ್) ಟ್ರಾಕ್ ಮ್ಯಾನ್, ಪಾಯಿಂಟ್ಸ್ ಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ಮಹಾರಾಷ್ಟ್ರ,ಗೋವಾ, ಕರ್ನಾಟಕದಲ್ಲಿ ಕೆಲಸ ಮಾಡಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌ನಿಂದ ಎಸ್‌ಎಸ್‌ಎಲ್‌ಸಿ ಉತ್ತೀರ್ಣಗೊಂಡಿರಬೇಕು. 5200-20200 ರೂ. ವೇತನವನ್ನು ಪ್ರತಿತಿಂಗಳು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 33 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (1 ಜುಲೈ 2018) ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ವಿದ್ಯಾರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧರು/ಮಹಿಳೆ/ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 250 ರೂ., ಇತರ ಅಭ್ಯರ್ಥಿಗಳಿಗೆ 500 ರೂ. ಶುಲ್ಕವನ್ನು ವಿಧಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications